ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್‌ ಶೋನಲ್ಲಿ ಭಾಗಿಯಾದ ಸುದೀಪ್‌

Date:

ಜೆ.ಪಿ ನಡ್ಡಾ ಜೊತೆಗೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಸುದೀಪ್‌

- Advertisement -

ಕೆಲವೇ ಹೊತ್ತಿನಲ್ಲಿ ನಾಮಪತ್ರ ಸಲ್ಲಿಸಲಿರುವ ಬಸವರಾಜ ಬೊಮ್ಮಾಯಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ತಮ್ಮ ಸ್ವಕ್ಷೇತ್ರ ಶಿಗ್ಗಾವಿಯಲ್ಲಿ ನಾಮ ಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ಅವರ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ನಟ ಕಿಚ್ಚ ಸುದೀಪ್‌ ಹೆಲಿಕಾಪ್ಟರ್‌ ಮೂಲಕ ಶಿಗ್ಗಾವಿಗೆ ಬಂದಿಳಿದಿದ್ದು, ಬೊಮ್ಮಾಯಿ ಅವರ ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದಾರೆ.

ಬುಧವಾರ ಬೆಳಗ್ಗೆ ಖಾಸಗಿ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿಳಿದ ಸುದೀಪ್‌, ನಂತರ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆಗೆ ಹುಬ್ಬಳ್ಳಿಯಿಂದ ಶಿಗ್ಗಾವಿಗೆ ಹೆಲಿಕಾಪ್ಟರ್‌ನಲ್ಲಿ ತೆರಳಿದ್ದಾರೆ. ನಡ್ಡಾ ಮತ್ತು ಬೊಮ್ಮಾಯಿ ಅವರ ಜೊತೆಗಿನ ಸೆಲ್ಫೀ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು, “ಶ್ರೀ ಕನಕದಾಸರು ಮತ್ತು ಶ್ರೀ ಸಂತ ಶಿಶುನಾಳರು ಹುಟ್ಟಿದ ಶಿಗ್ಗಾವಿ ತಾಲೂಕಿನಿಂದಲೇ ಪ್ರಚಾರ ಶುರು ಮಾಡುತ್ತಿರುವುದು ನಿಜಕ್ಕೂ ಹೆಮ್ಮ ಮತ್ತು ಸಂತೋಷದ ಸಂಗತಿ” ಎಂದು ಬರೆದುಕೊಂಡಿದ್ದಾರೆ.

ಈಗಾಗಲೇ ಶಿಗ್ಗಾವಿ ಪಟ್ಟಣದ ಚೆನ್ನಮ್ಮ ವೃತ್ತದಿಂದ ತಹಶೀಲ್ದಾರ್‌ ಕಚೇರಿ ವರೆಗೆ ಬಸವರಾಜ ಬೊಮ್ಮಾಯಿ ಅವರ ರೋಡ್‌ ಶೋ ಆರಂಭಗೊಂಡಿದ್ದು, ಜೆ.ಪಿ ನಡ್ಡಾ, ನಳಿನ್‌ ಕುಮಾರ್‌ ಕಟೀಲ್‌, ಸುದೀಪ್‌ ಮುಂತಾದವರು ಪಾಲ್ಗೊಂಡಿದ್ದಾರೆ. ಹಲವಾರು ಬಿಜೆಪಿಯ ಕಾರ್ಯಕರ್ತರು ಕೂಡ ಈ ರೋಡ್‌ ಶೋನಲ್ಲಿ ಭಾಗಿಯಾಗಿದ್ದು, ಕೆಲವೇ ಹೊತ್ತಿನಲ್ಲಿ ಬಸವರಾಜ ಬೊಮ್ಮಾಯಿ ತಮ್ಮ ಪಕ್ಷದ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...