2019ನೇ ಸಾಲಿನ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ಕಿಚ್ಚ ಸುದೀಪ್

Date:

ಬುಧವಾರ (ಜ.22ರಂದು) ಘೋಷಿಸಲಾಗಿದ್ದ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪೈಕಿ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ಅವರು ನಿರಾಕರಿಸಿದ್ದಾರೆ. ‘ಪೈಲ್ವಾನ್’ ಸಿನಿಮಾದಲ್ಲಿ ಸುದೀಪ್ ನಟನೆಗಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ ಈ ಪ್ರಶಸ್ತಿಯನ್ನು ನಟ ನಿರಾಕರಿಸಿದ್ದಾರೆ.

- Advertisement -

ಈ ಬಗ್ಗೆ ನಟ ಸುದೀಪ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಗೌರವಾನ್ವಿತ ಕರ್ನಾಟಕ ಸರ್ಕಾರ ಮತ್ತು ತೀರ್ಪುಗಾರರ ಸದಸ್ಯರೇ, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ ಮತ್ತು ಈ ಗೌರವ ಸಲ್ಲಿಸಿದ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದರೆ ನಾನು ಹಲವು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸಿದ್ದೇನೆ ಎಂಬುದನ್ನು ನಾನು ತಿಳಿಸಲೇಬೇಕು” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನು ಓದಿದ್ದೀರಾ? 2019ನೇ ಸಾಲಿನ ರಾಜ್ಯ ಪ್ರಶಸ್ತಿ | ಕಿಚ್ಚ ಸುದೀಪ್‌ & ಅನುಪಮಾ ಗೌಡಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ

“ನಾನು ವಿವಿಧ ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ತಮ್ಮ ಹೃದಯಾಂತರಾಳದಿಂದ ಕಲೆಗೆ ಗಮನಕೊಟ್ಟಿರುವ ಅನೇಕ ಅರ್ಹ ನಟರಿದ್ದಾರೆ. ನಾನು ಮಾಡುವುದಕ್ಕಿಂತ ಅಧಿಕ ಪ್ರತಿಷ್ಠಿತ ಕಾರ್ಯಗಳನ್ನು ಅವರು ಮಾಡಿದ್ದಾರೆ. ಆ ಪೈಕಿ ಒಬ್ಬರು ಈ ಪ್ರಶಸ್ತಿಯನ್ನು ಸ್ವೀಕರಿಸುವುದನ್ನು ನೋಡುವುದು ನನಗೆ ಸಂತೋಷ ನೀಡುತ್ತದೆ” ಎಂದು ಸುದೀಪ್ ತಿಳಿಸಿದ್ದಾರೆ.

“ಜನರನ್ನು ರಂಜಿಸುವ ನನ್ನ ಸಮರ್ಪಣೆಯು ಎಂದಿಗೂ ಪ್ರಶಸ್ತಿಗಳ ನಿರೀಕ್ಷೆಯಿಲ್ಲದೆ ಹಾಗೆಯೇ ಇರುತ್ತದೆ. ನನ್ನನ್ನು ಪ್ರಶಸ್ತಿಗೆ ಆಯ್ಕೆ ಮಾಡುವ ತೀರ್ಪುಗಾರರ ನಿರ್ಧಾರವು ನನಗೆ ಇನ್ನಷ್ಟು ಉತ್ತೇಜನವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.

“ಈ ಪ್ರಶಸ್ತಿಯು ನನ್ನ ಸ್ವತಃ ಕಾರ್ಯದ ಪ್ರತಿಫಲವಾಗಿರುವುದರಿಂದ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ಪ್ರತಿಯೊಬ್ಬ ತೀರ್ಪುಗಾರ ಸದಸ್ಯರಿಗೂ ನಾನು ಕೃತಜ್ಞನಾಗಿದ್ದೇನೆ” ಎಂದಿರುವ ಕಿಚ್ಚ ಹಾಗೆಯೇ ಪ್ರಶಸ್ತಿ ನಿರಾಕರಿಸುವ ತನ್ನ ನಿರ್ಧಾರವು ಉಂಟುಮಾಡಬಹುದಾದ ಯಾವುದೇ ನಿರಾಶೆಗಾಗಿ ತಾನು ತೀರ್ಪುಗಾರ ಸದಸ್ಯರು ಮತ್ತು ರಾಜ್ಯ ಸರ್ಕಾರಕ್ಕೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಂಚನೆ ಆರೋಪ | ನಿರ್ಮಾಪಕ ಕುಮಾರ್ ವಿರುದ್ಧ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ

“ನೀವು ನನ್ನ ಆಯ್ಕೆಯನ್ನು ಗೌರವಿಸುತ್ತೀರಿ ಮತ್ತು ನನ್ನನ್ನು ಬೆಂಬಲಿಸುತ್ತೀರಿ ಎಂದು ನಂಬುತ್ತೇನೆ. ಮತ್ತೊಮ್ಮೆ ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರ ಸದಸ್ಯರು ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಎಕ್ಸ್‌ನಲ್ಲಿ ಸುದೀಪ್ ಪೋಸ್ಟ್ ಮಾಡಿದ್ದಾರೆ.

ನಿನ್ನೆ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಅತ್ಯುತ್ತಮ ನಟಿ ಪ್ರಶಸ್ತಿಗೆ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಮತ್ತು ಅತ್ಯುತ್ತಮ ನಟ ಪ್ರಶಸ್ತಿಗೆ ಕಿಚ್ಚ ಸುದೀಪ್ ಪಾತ್ರರಾಗಿದ್ದಾರೆ. ಆದರೆ ಈ ಪೈಕಿ ಸುದೀಪ್ ಇಂದು ಪ್ರಶಸ್ತಿ ನಿರಾಕರಿಸಿದ್ದಾರೆ.

‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಸುದೀಪ್‌ ಅವರಿಗೆ ಅತ್ಯುತ್ತಮ ನಟ ಮತ್ತು ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಟನೆಗಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಘೋಷಿಸಲಾಗಿತ್ತು. ಇನ್ನೂ ಐದು ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಣೆ ಬಾಕಿಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...