ವಂಚನೆ ಆರೋಪ | ನಿರ್ಮಾಪಕರ ವಿರುದ್ಧ ಕ್ರಮಕ್ಕೆ ಮುಂದಾದ ಸುದೀಪ್‌

Date:

ಸುದೀಪ್‌ ನಟನೆಯ ಮುಕುಂದ ಮುರಾರಿ ಸಿನಿಮಾ ನಿರ್ಮಿಸಿದ್ದ ಎಂಎನ್‌ ಕುಮಾರ್‌

- Advertisement -

ಮುತ್ತತ್ತಿ ಸತ್ಯರಾಜು ಸಿನಿಮಾ ಮಾಡುವುದಾಗಿ ಮುಂಗಡ ಪಡೆದು ವಂಚಿಸಿದ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನಟ ಸುದೀಪ್‌, ತಮ್ಮ ವಿರುದ್ಧ ವಂಚನೆ ಆರೋಪ ಮಾಡಿದ್ದ ಸ್ಯಾಂಡಲ್‌ವುಡ್‌ನ ಇಬ್ಬರು ನಿರ್ಮಾಪಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಿರ್ಮಾಪಕರಾದ ಎಂಎನ್‌ ಸುರೇಶ್‌ ಮತ್ತು ಕುಮಾರ್‌ ಅವರಿಗೆ ನೋಟೀಸ್‌ ನೀಡಿದ್ದಾರೆ.

ಚಲನಚಿತ್ರ ನಿರ್ಮಾಪಕರಾದ ಎಂಎನ್‌ ಸುರೇಶ್‌ ಮತ್ತು ಕುಮಾರ್‌ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ, “ನಟ ಕಿಚ್ಚ ಸುದೀಪ್‌ ತಮ್ಮ ಜೊತೆಗೆ ಸಿನಿಮಾ ಮಾಡುವುದಾಗಿ ಮುಂಗಡ ಪಡೆದುಕೊಂಡಿದ್ದರು. ಜೊತೆಗೆ ತಾವು ಮಧ್ಯಸ್ಥಿಕೆ ವಹಿಸಿ ಬೇರೊಬ್ಬ ವ್ಯಕ್ತಿಗೆ ಕೂಡ ಹಣ ಕೊಡಿಸಿದ್ದಾರೆ. ಇದಾಗಿ ವರ್ಷಗಳು ಕಳೆದರೂ ನಮ್ಮ ಸಿನಿಮಾದಲ್ಲಿ ನಟಿಸಲು ʼಡೇಟ್ಸ್‌ʼ ನೀಡುತ್ತಿಲ್ಲ, ಮುಂಗಡವನ್ನು ಕೂಡ ಹಿಂತಿರುಗಿಸುತ್ತಿಲ್ಲ, ನಮ್ಮಿಂದ ಪಡೆದ ಹಣದಲ್ಲೇ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮನೆಯನ್ನು ಖರೀದಿಸಿದ್ದಾರೆ” ಎಂದು ಸುದೀಪ್‌ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು.

ವಂಚನೆಯ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದ ಸುದೀಪ್‌ ಇದೀಗ ತಮ್ಮ ವಕೀಲರ ಮೂಲಕ ನಿರ್ಮಾಪಕರಿಗೆ ನೋಟೀಸ್‌ ನೀಡಿದ್ದು, ತಮ್ಮ ಮೇಲೆ ಆಧಾರ ರಹಿತ ಮತ್ತು ಸುಳ್ಳು ಆಪಾಧನೆಗಳನ್ನು ಮಾಡಿದ್ದಕ್ಕಾಗಿ ಪತ್ರ ಕೈಸೇರಿದ ಮೂರು ದಿನಗಳ ಒಳಗಾಗಿ ಬಹಿರಂಗವಾಗಿ ಬೇಷರತ್‌ ಕ್ಷಮೆ ಯಾಚಿಸಬೇಕು ಎಂದು ಇಬ್ಬರೂ ನಿರ್ಮಾಪಕರಿಗೆ ತಾಕೀತು ಮಾಡಿದ್ದಾರೆ. ಇಲ್ಲವಾದರೆ 10 ಕೋಟಿ ರೂಪಾಯಿಗಳ ಮಾನಹಾನಿ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಪಾನ್‌ನಲ್ಲಿ ತೆರೆಗೆ ಸಜ್ಜಾದ ʼಕೆಜಿಎಫ್‌ʼ ಸರಣಿ

ಸುದೀಪ್‌ ಮೇಲೆ ವಂಚನೆ ಆರೋಪ ಮಾಡುತ್ತಿರುವವರಲ್ಲಿ ಒಬ್ಬರಾದ ಎಂಎನ್‌ ಕುಮಾರ್‌, ಈ ಹಿಂದೆ 2016ರಲ್ಲಿ ಉಪೇಂದ್ರ ಮತ್ತು ಸುದೀಪ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಮುಕುಂದ ಮುರಾರಿʼ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಈ ಚಿತ್ರಕ್ಕೆ ನಂದ ಕಿಶೋರ್‌ ಅವರ ನಿರ್ದೇಶನವಿತ್ತು. ಈ ಚಿತ್ರ ಯಶಸ್ಸು ಕಂಡ ಬಳಿಕ ಸುದೀಪ್‌ ಜೊತೆಗೆ ʼಮುತ್ತತ್ತಿ ಸತ್ಯರಾಜುʼ ಹೆಸರಿನ ಸಿನಿಮಾ ಮಾಡಲು ಎಂಎನ್‌ ಸುರೇಶ್‌ ಮತ್ತು ಕುಮಾರ್‌ ಮುಂಗಡ ನೀಡಿದ್ದರು ಎನ್ನಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...