ಬಿಗ್‌ಬಾಸ್‌ನಲ್ಲಿ ಮಹಿಳಾ ಹಕ್ಕುಗಳ ದಮನ ಆರೋಪ; ‘ಕಲರ್ಸ್ ಕನ್ನಡ’ ವಿರುದ್ಧ ದೂರು ದಾಖಲು

Date:

ಖಾಸಗಿ ವಾಹಿನಿ ‘ಕಲರ್ಸ್ ಕನ್ನಡ’ದಲ್ಲಿ ಪ್ರಸಾರವಾಗುತ್ತಿರುವ ‘ಬಿಗ್‌ಬಾಸ್ 11’ ರಿಯಾಲಿಟಿ ಶೋನಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಮಹಿಳೆಯರ ಹಕ್ಕುಗಳನ್ನು ದಮನ ಮಾಡಿ, ಮಹಿಳಾ ಸ್ಪರ್ಧಿಗಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ವಕೀಲೆ ರಕ್ಷಿತಾ ಪಿ ಸಿಂಗ್‌ ಆರೋಪಿಸಿದ್ದಾರೆ. ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

- Advertisement -

ಕಳೆದ ಭಾನುವಾರದಿಂದ ‘ಬಿಗ್‌ಬಾಸ್‌ 11’ ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ನಟ ಸುದೀಪ್ ಅವರು ಕಾರ್ಯಕ್ರಮದ ನಿರೂಪಣೆ ಮುಂದುವರೆಸಿದ್ದಾರೆ. ಬಿಗ್‌ಬಾಸ್‌ ಸೆಟ್‌ನಲ್ಲಿ ಸ್ವರ್ಗ ಮತ್ತು ನರಕ ಎಂದು ವಿಭಜಿಸಿ, ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಇದರಲ್ಲಿ, ನರಕವೆಂದು ವರ್ಗೀಕರಿಸಲಾದ ಭಾಗದಲ್ಲಿ ಸ್ಪರ್ಧಿಗಳನ್ನು ಕೈದಿಗಳಂತೆ ಇರಿಸಲಾಗಿದೆ. ಆದರೆ, ಭಾರತದ ನಾಗರಿಕರನ್ನು ಬಂಧನದಲ್ಲಿರಿಸುವ ಹಕ್ಕು ಖಾಸಗಿ ವ್ಯಕ್ತಿಗಳಿಗೆ ಇರುವುದಿಲ್ಲ. ಈ ಕಾನೂನನ್ನು ಬಿಗ್‌ಬಾಸ್‌ ತಂಡ ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಬಗ್ಗೆ ದೂರು ನೀಡಿರುವ ರಕ್ಷಿತಾ ಪಿ ಸಿಂಗ್‌, “ಬಿಗ್‌ಬಾಸ್-11 ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮರಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮಬಂಧನದಲ್ಲಿ ಇರಿಸಲಾಗಿದೆ. ಇವರಿಗೆ ಕೇವಲ ಗಂಜಿಯನ್ನು ಆಹಾರವಾಗಿ ನೀಡಲಾಗುತ್ತಿದೆ. ಹೀಗೆ, ಸಂವಿಧಾನ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಮಲಗುವ ವ್ಯವಸ್ಥೆ ನೀಡದೆ ಹಿಂಸಿಸಲಾಗುತ್ತಿದೆ. ಅಲ್ಲದೆ, ದೈಹಿಕ ಬಾದೆ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಬೇಕಾದಂತಹ ಬಲವಂತಕ್ಕೆ ಒಳಪಡಿಸುವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ” ಎಂದು ವಿವರಿಸಿದ್ದಾರೆ.

WhatsApp Image 2024 10 04 at 12.59.01 PM

“ಬಿಗ್‌ಬಾಸ್ 11ರ ಕಾರ್ಯಕ್ರಮದಲ್ಲಿ ಸ್ಪರ್ಧಿಗಳೊಂದಿಗೆ ಕಾನೂನು ಬದ್ಧವಾಗಿ ಒಪ್ಪಂದ ಮಾಡಿಕೊಂಡಿದ್ದು ಇಂತಹ ನಿರ್ಬಂಧಗಳನ್ನು ಹೇರುವುದು ಸಂವಿಧಾನಬಾಹಿರವಾಗಿದೆ. ಮಹಿಳೆಯರಿಗೆ ಸೂಕ್ತ ಸೌಲಭ್ಯಗಳನ್ನು ನೀಡದೆ ಆಹಾರ ನಿರಾಕರಿಸುವ ಮೂಲಕ ಅವರ ಹಕ್ಕುಗಳನ್ನು ದಮನ ಮಾಡುತ್ತಿರುವ ಬಿಗ್ ಬಾಸ್ 11ರ ಕಾರ್ಯಕ್ರಮ ನಿರ್ವಹಿಸುತ್ತಿರುವ ಕಲರ್ಸ್ ಕನ್ನಡ ವಾಹಿನಿಯ ಮುಖ್ಯಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...