ರೇಣುಕಸ್ವಾಮಿ ಹತ್ಯೆ ಪ್ರಕರಣ: ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌

Date:

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

- Advertisement -

ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

ಮುಂದಿನ ವಿಚಾರಣೆಯಲ್ಲಿ ಆರೋಪಿಗಳ ಪರ ವಕೀಲರು ಜಮೀನು ನೀಡಿದ್ದನ್ನು ಸಮರ್ಥಿಸಿಕೊಂಡರೆ, ಪೊಲೀಸರ ಪರ ವಕೀಲರು ಜಾಮೀನು ನೀಡಬಾರದು ಎಂದು ವಾದ ಮಂಡಿಸಲಿದ್ದಾರೆ. ಎರಡು ಕಡೆಯ ವಾದವನ್ನು ಆಲಿಸಿದ ಬಳಿಕ ಕೋರ್ಟ್‌ ತನ್ನ ಆದೇಶವನ್ನು ಪ್ರಕಟಿಸಲಿದೆ.

ಪವಿತ್ರಾ ಗೌಡ (ಎ 1), ದರ್ಶನ್‌ (ಎ 2), ಜಗದೀಶ್‌ ಜಗ್ಗ ಅಲಿಯಾಸ್‌ ಜಗ್ಗ (ಎ 6),ಅನುಕುಮಾರ್‌ ಅಲಿಯಾಸ್‌ ಅನು (ಎ 7), ಆರ್‌ ನಾಗರಾಜು (ಎ 11) ಎಂ ಲಕ್ಷ್ಮಣ್‌ (ಎ 12), ಪ್ರದೋಶ್‌ ಎಸ್‌. ರಾವ್‌ (ಎ 14) ಅವರಿಗೆ ನೋಟಿಸ್ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆ ಪೊಲೀಸರು ಅರ್ಜಿ ಸಲ್ಲಿಸಿದ್ದರು. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.

ಹೈಕೋರ್ಟ್ ಜಾಮೀನು ಆದೇಶ, ಪ್ರತ್ಯಕ್ಷದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿ, ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ 1492 ಪುಟಗಳ ಕಡತವನ್ನು ಕೋರ್ಟ್‌ಗೆ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...