ನನ್ನ ಮೇಲೆ ಪ್ರತೀಕಾರ ತೀರಿಸಿಕೊಳ್ಳಿ, ನನ್ನ ಜನರನ್ನು ಮುಟ್ಟಬೇಡಿ: ನಟ ವಿಜಯ್‌ ವಿಡಿಯೋ ಸಂದೇಶ

Date:

ಕರೂರು ದುರಂತದ ನಂತರ ತಮಿಳುನಾಡಿನ ನಟ ಹಾಗೂ ಟಿವಿಕೆ ಪಕ್ಷದ ರಾಜಕೀಯ ನಾಯಕ ವಿಜಯ್ ತಮ್ಮ ಭಾವನಾತ್ಮಕ ವಿಡಿಯೋ ಸಂದೇಶವೊಂದರಲ್ಲಿ ಜನರ ಸುರಕ್ಷತೆಗೆ ತಾವು ಎಷ್ಟು ಮಹತ್ವ ನೀಡುತ್ತೇವೆ ಎಂಬುದನ್ನು ಒತ್ತಿ ಹೇಳಿದ್ದಾರೆ. ಈ ದುರಂತದಿಂದ ತೀವ್ರವಾಗಿ ಬೇಸರಗೊಂಡಿರುವ ವಿಜಯ್, ತಮ್ಮ ಜೀವನದಲ್ಲಿ ಇಂತಹ ನೋವಿನ ಸಂದರ್ಭವನ್ನು ಎಂದಿಗೂ ಎದುರಿಸಿಲ್ಲ ಎಂದು ಹೇಳಿದ್ದಾರೆ.

- Advertisement -

“ನನ್ನ ಜೀವನದಲ್ಲಿ ಇಂತಹ ನೋವು ತುಂಬಿದ ಸಂದರ್ಭವನ್ನು ನಾನು ಮೊದಲು ಎದುರಿಸಿಲ್ಲ. ಈ ಪ್ರವಾಸದಲ್ಲಿ ಜನರು ಎಷ್ಟೋ ಸಂಖ್ಯೆಯಲ್ಲಿ ಬರುತ್ತಿರುವುದು ಅವರ ಪ್ರೀತಿ ಮತ್ತು ಮಮತೆಯಿಂದ. ಅದಕ್ಕಾಗಿ ನಾನು ಸದಾ ಅವರಿಗೆ ಋಣಿ. ಆದರೆ, ಎಲ್ಲಕ್ಕಿಂತ ಮುಖ್ಯವಾಗಿ ಜನರ ಸುರಕ್ಷತೆ ನನ್ನ ಹೃದಯಕ್ಕೆ ಹತ್ತಿರವಾಗಿತ್ತು. ಅದಕ್ಕಾಗಿ ರಾಜಕೀಯ ಕಾರಣಗಳನ್ನು ಬದಿಗಿಟ್ಟು, ಸೂಕ್ತ ಸ್ಥಳಗಳನ್ನು ಆಯ್ಕೆ ಮಾಡಿದ್ದೆ. ಆದರೂ ನಡೆಯಬಾರದದ್ದು ನಡೆಯಿತು. ಪ್ರತಿಭಟನೆಗಳಿಗಾಗಿ 5 ಸ್ಥಳಗಳನ್ನು ಆಯ್ಕೆ ಮಾಡಿದ್ದೆ, ಕರೂರಿನಲ್ಲೇ ಏಕೆ ದುರಂತ ನಡೆಯಿತು” ಎಂದು ವಿಜಯ್ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

“ಈ ಸಂದರ್ಭದಲ್ಲಿ ನಾನು ಸಹ ಮಾನವನಾಗಿದ್ದೇನೆ. ಜನರಿಗೆ ನೋವು ತಾಗಿದಾಗ ನಾನು ಹಿಂದಕ್ಕೆ ಸರಿಯಲು ಸಾಧ್ಯವಿಲ್ಲ. ಆಸ್ಪತ್ರೆಗೆ ದಾಖಲಾದವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಶೀಘ್ರದಲ್ಲೇ ನಿಮ್ಮೆಲ್ಲರನ್ನು ಭೇಟಿ ಮಾಡುತ್ತೇನೆ. ನಮ್ಮ ನೋವನ್ನು ಅರ್ಥಮಾಡಿಕೊಂಡ ಎಲ್ಲ ರಾಜಕೀಯ ಪಕ್ಷಗಳಿಗೆ, ನಾಯಕರಿಗೆ, ಸ್ನೇಹಿತರಿಗೆ ಧನ್ಯವಾದಗಳು. ನಾವು ನಿಗದಿಪಡಿಸಿದ ಸ್ಥಳದಲ್ಲೇ ಸಮಾವೇಶ ನಡೆಸಿದ್ದೇವೆ. ಅದಕ್ಕಿಂತ ಹೆಚ್ಚೇನೂ ಮಾಡಿಲ್ಲ. ಜನರು ಸತ್ಯವನ್ನು ನೋಡುತ್ತಿದ್ದಾರೆ. ದೇವರೇ ಬಂದು ಸತ್ಯವನ್ನು ಬಿಚ್ಚಿಟ್ಟಂತೆ ನನಗನಿಸಿತು. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ,” ಎಂದಿದ್ದಾರೆ.

ಮುಖ್ಯಮಂತ್ರಿಗೆ ಉದ್ದೇಶಿಸಿ ಮಾತನಾಡಿರುವ ವಿಜಯ್, “ನನ್ನ ಮೇಲೆ ಪ್ರತೀಕಾರ ತೀರಿಸಬೇಕೆಂದಿದ್ದರೆ ಮಾಡಿ, ಆದರೆ ನನ್ನ ಪಕ್ಷದ ಜನರನ್ನು ಮುಟ್ಟಬೇಡಿ. ನಾನು ಮನೆಯಲ್ಲಿ ಇರಲಿ, ಕಚೇರಿಯಲ್ಲಿ ಇರಲಿ, ನಿಮ್ಮಿಂದ ಸಾಧ್ಯವಾದುದನ್ನು ಮಾಡಿ. ನಮ್ಮ ರಾಜಕೀಯ ಪಯಣ ಇನ್ನಷ್ಟು ಧೈರ್ಯದಿಂದ, ಇನ್ನಷ್ಟು ಶಕ್ತಿಯಿಂದ ಮುಂದುವರಿಯಲಿದೆ,” ಎಂದು ಹೇಳಿದ್ದಾರೆ.

ಮೂರು ದಿನಗಳ ಹಿಂದೆ ನಡೆದ ತಮಿಳುನಾಡಿನ ಕರೂರಿನಲ್ಲಿ ವಿಜಯ್‌ ಹಮ್ಮಿಕೊಂಡಿದ್ದ ಟಿವಿಕೆ ರ್ಯಾಲಿಯಲ್ಲಿ ಕಾಲ್ತುಳಿತದಿಂದಾಗಿ 41 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...