ಅಕ್ರಮವಾಗಿ ಐಪಿಎಲ್ ಪ್ರಸಾರ: ನಟಿ ತಮನ್ನಾಗೆ ಸೈಬರ್ ಪೊಲೀಸರಿಂದ ಸಮನ್ಸ್

Date:

ಫೇರ್‌ಪ್ಲೇ ಆಪ್‌ನಲ್ಲಿ 2023ರ ಆವೃತ್ತಿಯ ಐಪಿಎಲ್ ಅನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್‌ ಪೊಲೀಸ್ ಸಮನ್ಸ್ ನೀಡಿದೆ. ಫೇರ್‌ಪ್ಲೇ ಆಪ್ ಮಹದೇವ್‌ ಆನ್‌ಲೈನ್‌ ಗೇಮ್‌ನ ಒಂದು ಬೆಟ್ಟಿಂಗ್‌ ಆಪ್‌ ಆಗಿದೆ.

ತಮನ್ನಾ ಅವರಿಗೆ ಏಪ್ರಿಲ್ 29ರಂದು ಮಹಾರಾಷ್ಟ್ರ ಸೈಬರ್ ಪೊಲೀಸರು ಸಮನ್ಸ್ ನೀಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಪರ್‌ ಗಾಯಕ ಬಾದ್‌ಶಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಬಾಲಿವುಡ್ ನಟ ಸಂಜಯ್‌ ದತ್ ಅವರಿಗೂ ಕಳೆದ ವಾರ ಸಮನ್ಸ್ ನೀಡಲಾಗಿದ್ದು, ಆದರೆ ಅವರು ಇಲಾಖೆಯ ಮುಂದೆ ಹಾಜರಾಗಲು ಸಮಯ ಕೋರಿದ್ದಾರೆ.

ಇವರೆಲ್ಲ ನಟರು ಹಾಗೂ ಗಾಯಕರು ಫೇರ್‌ಪ್ಲೇ ಆಪ್‌ ಮೂಲಕ ಐಪಿಎಲ್‌ ನೋಡುವಂತೆ ಪ್ರಚಾರ ಮಾಡುತ್ತಿದ್ದರು. ಆದರೆ ಅಧಿಕೃತವಾಗಿ ಈ ಆಪ್‌ ಮಾಧ್ಯಮ ಪ್ರಸಾರದ ಹಕ್ಕುಗಳನ್ನು ಹೊಂದಿರಲಿಲ್ಲ. ಇದರಿಂದ ಅಧಿಕೃತ ಪ್ರಸಾರ ಹಕ್ಕುಗಳನ್ನು ಹೊಂದಿದ್ದ ವಯಾಕಾಂ 18 ಸಂಸ್ಥೆ ನೂರು ಕೋಟಿಗೂ ಹೆಚ್ಚಿನ ನಷ್ಟ ಹೊಂದಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷ -ವಿರಸ- ವೈಷಮ್ಯಗಳ ಮೇಲೆ ಮತಯಾಚನೆ ಪರಮವಿಕೃತಿ

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿಯೇ ವಯಾಕಾಂ 18 ಸಂಸ್ಥೆ ಐಪಿಎಲ್‌ ಪಂದ್ಯಗಳ ಪ್ರಸಾರದ ಬೌದ್ಧಿಕ ಪ್ರಸಾರದ ಹಕ್ಕುಗಳಡಿ ಎಫ್‌ಐಆರ್‌ ದಾಖಲಿಸಿತ್ತು.

ಎಫ್‌ಐಆರ್‌ನ ಅಡಿಯಲ್ಲಿ ಬಾಲಿವುಡ್‌ ನಟರಾದ ಸಂಜಯ್‌ ದತ್, ಜಾಕ್ವಿಲಿನ್‌ ಫರ್ನಾಡಿಸ್ ಸೇರಿದಂತೆ ಹಲವು ನಟರ ವಿರುದ್ಧ ಎಫ್‌ಐಆರ್‌ ದಾಖಲಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಮಹಾದೇವ್ ಆಪ್‌ನ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿತ್ತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾನ್ಸ್ ಚಿತ್ರೋತ್ಸವದಲ್ಲಿ ಮೈಸೂರಿನ ನಿರ್ದೇಶಕನ ಸಾಕ್ಷಚಿತ್ರಕ್ಕೆ ಮೊದಲ ಬಹುಮಾನ

ಫ್ರಾನ್ಸ್‌ನ ಅಂತಾರಾಷ್ಟ್ರೀಯ ಮಟ್ಟದ 77ನೇ ಕಾನ್ಸ್‌ ಸಿನಿಮಾ ಚಿತ್ರೋತ್ಸವದಲ್ಲಿ ಮೈಸೂರಿನ ನಿರ್ದೇಶಕ...

2025ರ ಐಪಿಎಲ್‌ನಲ್ಲೂ ಎಂಎಸ್ ಧೋನಿ ಆಡುವುದು ಅವರಿಗೆ ಬಿಟ್ಟ ವಿಚಾರ: ಚೆನ್ನೈ ಸಿಇಓ ಕಾಸಿ ವಿಶ್ವನಾಥನ್

ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಜಿ...

ಈ ಬಾರಿಯ ಐಪಿಎಲ್‌ನಲ್ಲಿ ಸದ್ದೇ ಮಾಡದ ಮ್ಯಾಕ್ಸ್‌ವೆಲ್ ಬ್ಯಾಟ್‌: ಗಳಿಸಿದ್ದು ಕೇವಲ 52 ರನ್!

ಬುಧವಾರ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಎಲಿಮಿನೇಟರ್...

ಒಪ್ಪಿಗೆಯಿಲ್ಲದೆ ಹಾಡು ಬಳಕೆ: ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಿಗೆ ಇಳಯರಾಜ ನೋಟಿಸ್

ಇತ್ತೀಚಿಗೆ ಮಲಯಾಳಂನಲ್ಲಿ ಸೂಪರ್‌ ಡೂಪರ್‌ ಹಿಟ್‌ ಆಗಿದ್ದ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ...