- ವೆಟ್ರಿಮಾರನ್ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕನಾಗಿ ದುಡಿದಿದ್ದ ಶರಣ್
- ʼವಡಾ ಚೆನ್ನೈʼ ಚಿತ್ರದ ಮೂಲಕ ನಟನಾಗಿ ಗುರುತಿಸಿಕೊಂಡಿದ್ದ ಯುವ ಪ್ರತಿಭೆ
ತಮಿಳಿನ ಉದಯೋನ್ಮುಖ ನಟ, ಸಹಾಯಕ ನಿರ್ದೇಶಕ ಶರಣ್ ರಾಜ್ ಗುರುವಾರ ಚೆನ್ನೈನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟನೇ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಶರಣ್ ಸಾವಿಗೆ ಕಾರಣನಾಗಿದ್ದಾನೆ ಎಂಬುದು ಆಘಾತಕರ ಸಂಗತಿ.
ಶರಣ್, ಗುರುವಾರ ರಾತ್ರಿ 11:30ರ ಸುಮಾರಿಗೆ ಚೆನ್ನೈನ ಕೆಕೆ ನಗರದ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದೇ ವೇಳೆ ತಮಿಳಿನ ಮತ್ತೋರ್ವ ನಟ ಪಳನಿಯಪ್ಪನ್ ಕೂಡ ಅದೇ ಮಾರ್ಗವಾಗಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದಾರೆ. ಪಳನಿಯಪ್ಪನ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಶರಣ್ ಅವರ ಬೈಕ್‌ಗೆ ಗುದ್ದಿದೆ. ಪರಿಣಾಮ ಯುವ ನಟ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಬಗ್ಗೆ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಶರಣ್ ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪಳನಿಯಪ್ಪನ್‌ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಯ ವೇಳೆ ಆತ ಕುಡಿದು ವಾಹನ ಚಲಾಯಿಸಿರುವುದು ಖಚಿತವಾಗಿದೆ.
ಈ ಸುದ್ದಿ ಓದಿದ್ದೀರಾ? ಒಡಿಶಾ ರೈಲು ದುರಂತ | ಸಂತ್ರಸ್ತರ ನೆರವಿಗೆ ಸಹಾಯವಾಣಿ ತೆರೆದ ಸೋನು ಸೂದ್
29 ವರ್ಷದ ಶರಣ್, ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅಷ್ಟೇ ಅಲ್ಲದೆ, ಅಸುರನ್ ಮತ್ತು ವಡಾ ಚೆನ್ನೈ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುವ ಮೂಲಕ ನಟನಾಗಿಯೂ ಗುರುತಿಸಿಕೊಂಡಿದ್ದರು. ಉದಯೋನ್ಮುಖ ಕಲಾವಿದನ ಅಗಲಿಕೆ ತಮಿಳು ಚಿತ್ರರಂಗದ ಹವಲು ತಾರೆಯರು ಕಂಬನಿ ಮಿಡಿದಿದ್ದಾರೆ.