ತಮಿಳು ನಟ ಪ್ರದೀಪ್ ಕೆ ವಿಜಯನ್(39) ಅವರು ಚೆನ್ನೈನ ತಮ್ಮ ಮನೆಯಲ್ಲಿ ನಿನ್ನೆ ಜೂನ್ 13 ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಆಯಾಮದಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಚೆನ್ನೈನ ಪಲವಕ್ಕಂನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವಿಜಯನ್ ಅವರು ತಲೆ ಸುತ್ತು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಬುಧವಾರ ಬೆಳಗ್ಗೆ ವಿಜಯನ್ ಅವರ ಸ್ನೇಹಿತರು ಹಲವು ಬಾರಿ ಫೋನ್ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮನೆಗೂ ಬಂದಾಗ ಬಾಗಿಲನ್ನು ತೆರೆಯಲಿಲ್ಲ. ಅನುಮಾನಗೊಂಡು ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಸ್ನಾನದ ಕೋಣೆಯಲ್ಲಿ ಮೃತಪಟ್ಟಿದ್ದರು. ಅವರ ತಲೆ ಹಾಗೂ ಮುಖದ ಮೇಲೆ ಗಾಯಗಳಾಗಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?
ಪ್ರಾಥಮಿಕ ತನಿಖೆಗಳಂತೆ ಪೊಲೀಸರು ಅಸಹಜ ಸಾವು ಎಂದು ದೂರು ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ನೀಡಲಾಗಿದೆ.
ವಿಜಯನ್ ಅವರು ತೇಗಿಡಿ, ಮಾಯಾದ ಮಾನ್, ಟೆಡ್ಡಿ, ಇರುಂಬು ತಿರೈ, ರುದ್ರನ್ ಸೇರಿ ಹಲವು ತಮಿಳು ಚಿತ್ರಗಳಲ್ಲಿ ನಟಿಸಿದ್ದರು.
