ತಾರಾ ಸರ್ಕಾರಿ ವಾಹನ ಬಳಸಿದ ವಿಡಿಯೋ ವೈರಲ್
ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಬಿಜೆಪಿ ನಾಯಕಿ ತಾರಾ ಅವರ ಮೇಲೆ ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಕ್ಕೆ ಬಳಸಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ನಟಿಯ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ.
ಸದ್ಯ ಯಾವುದೇ ಸರ್ಕಾರಿ ಹುದ್ದೆಯಲ್ಲಿರದ ತಾರಾ ತಮ್ಮ ವೈಯಕ್ತಿಕ ಕೆಲಸಗಳಿಗೆ ಬಳಸಿರುವ ವಿಡಿಯೋವನ್ನು ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅದು ಕೂಡ ಚುನಾವಣೆಯ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರಿ ವಾಹನ ಬಳಸಿದ್ದಾರೆ. ಇದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದು, ನಟಿಯ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಮಂತ್ರಿಗಿರಿಯ ಆಫರ್ ಬಂದಿತ್ತು; ರಮ್ಯ
ಈ ವಿಡಿಯೋ ಮಾಹಿತಿಯನ್ನು ಆಧರಿಸಿ ಚುನಾವಣೆ ಸಂಬಂಧಿತ ʼಫ್ಲೈಯಿಂಗ್ ಸ್ಕ್ವಾಡ್ʼ ತಂಡ ಕೂಡ ನಟಿಯ ಮನೆಯ ಬಳಿ ತೆರಳಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕಾರು ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ದೂರಿನನ್ವಯ ಸದ್ಯ ನಟಿಯ ವಿರುದ್ಧ ಪ್ರಕರಣ ದಾಖಲಾಗಿದೆ.