ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

Date:

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನೆರಡು ದಿನದಲ್ಲಿ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ.

ಕಳೆದ ಕೆಲವು ತಿಂಗಳುಗಳಿಂದ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸದ ವಿಜಯಶಾಂತಿ ಅವರು ತಮ್ಮ ರಾಜೀನಾಮೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಅವರಿಗೆ ಕಳುಹಿಸಿದ್ದಾರೆ. ಕೆಲ ದಿನಗಳ ಹಿಂದೆ ತೆಲಂಗಾಣ ರಾಜ್ಯ ಉಪಾಧ್ಯಕ್ಷ ಮಲ್ಲು ರವಿ ಅವರು ವಿಜಯಶಾಂತಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ ಅವರು ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಆ್ಯಪ್‌ನಲ್ಲಿ ಎರಡು ನಂಬರ್ ಅಕೌಂಟ್ ಬಳಸುವ ಆಯ್ಕೆ ಪರಿಚಯಿಸಿದ ವಾಟ್ಸಾಪ್

ಇತ್ತೀಚಿನ ದಿನಗಳಲ್ಲಿ ರಾಜ್ಯ ಬಿಜೆಪಿ ಘಟಕದ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊಂದಿದ್ದ ವಿಜಯಶಾಂತಿ ಪಕ್ಷದ ಸಭೆಗಳಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಪಕ್ಷದ ಚಟುವಟಿಕೆಗಳಿಂದ ದೂರು ಉಳಿದಿದ್ದ ಅವರನ್ನು ಸ್ಟಾರ್​ ಪ್ರಚಾರಕರ ಪಟ್ಟಿಯಿಂದ ಹೊರಗಿಡಲಾಗಿತ್ತು.

ವಿಜಯಶಾಂತಿ ಅವರ ಜೊತೆಗೆ ಮಾಜಿ ಶಾಸಕರಾದ ಕೋಮಟಿರೆಡ್ಡಿ, ರಾಜಗೋಪಾಲ್ ರೆಡ್ಡಿ ಮತ್ತು ಮಾಜಿ ಸಂಸದ ಜಿ.ವಿವೇಕ್ ವೆಂಕಟಸ್ವಾಮಿ ಅವರು ಬಿಜೆಪಿ ತೊರೆದು ಕಾಂಗ್ರೆಸ್​ ಸೇರುವುದಾಗಿ ಘೋಷಿಸಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿ ಪ್ರಮುಖ ನಾಯಕರು ಪಕ್ಷ ತೊರೆದು ಕಾಂಗ್ರೆಸ್​ ಸೇರುತ್ತಿರುವುದು ಬಿಜೆಪಿ ಪಾಳಯಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಚುನಾವಣೆಯಲ್ಲಿ ಇದು ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

119 ಸದಸ್ಯಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬೀಳಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಂತ್ರ ಮಾಂಗಲ್ಯ’ದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಟಿ ಪೂಜಾ ಗಾಂಧಿ

'ಮುಂಗಾರು ಮಳೆ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ...

ದೀಪಿಕಾ ಪಡುಕೋಣೆ ಜೆಎನ್‌ಯು ಭೇಟಿಯಿಂದ ನನ್ನ ಸಿನಿಮಾ ಸೋತಿತು ಎಂದ ನಿರ್ದೇಶಕಿ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ 2020 ರ ಜನವರಿಯಲ್ಲಿ ಜೆಎನ್‌ಯುಗೆ ಭೇಟಿ...

ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ಕೈಯಿಂದ ಮಲ ಬಾಚುವ ವೇಳೆ ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಪೌರ...

ಜಗಳದ ವೇಳೆ 4ನೇ ತರಗತಿ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿದ ಸಹಪಾಠಿಗಳು

ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ...