ತೆಲುಗಿನ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನ; ಕನ್ನಡ ಚಿತ್ರಗಳಲ್ಲೂ ಅಭಿನಯ

Date:

Advertisements

ದಕ್ಷಿಣ ಭಾರತದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಅವರು ಭಾನುವಾರ (ಜುಲೈ 13) ಬೆಳಗಿನ ಜಾವ ನಿಧನರಾದರು.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ, ಅವರು ಎರಡು ವರ್ಷಗಳ ಹಿಂದಿನವರೆಗೂ ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಅವರ ಕೊನೆಯ ಚಿತ್ರ 2023ರಲ್ಲಿ ಬಿಡುಗಡೆಯಾದ ‘ಸುವರ್ಣ ಸುಂದರಿ’. ಕೋಟ ಶ್ರೀನಿವಾಸ ರಾವ್ ಅವರು 750ಕ್ಕೂ ಅಧಿಕ ಸಿನಮಾಗಳಲ್ಲಿ ನಟಿಸಿದ್ದರು.

ಕಳೆದ 4 ದಶಕಗಳ ತಮ್ಮ ವೃತ್ತಿಜೀವನದಲ್ಲಿ ಕೋಟ ಶ್ರೀನಿವಾಸ ರಾವ್ ಅನೇಕ ಬಗೆಯ ಪಾತ್ರಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡಿದ್ದರು. ಅವರ ನಿಧನದಿಂದ ಚಿತ್ರೋದ್ಯಮ ಶೋಕದಲ್ಲಿದೆ. ಶ್ರೀನಿವಾಸ ರಾವ್ ಅವರು 1942ರ ಜುಲೈ 10ರಂದು ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದರು. ಅವರ ತಂದೆ ಡಾ. ಸೀತಾರಾಮಾಂಜನೇಯುಲು. ಬಾಲ್ಯದಲ್ಲಿ ತಂದೆಯಂತೆ ವೈದ್ಯನಾಗಬೇಕೆಂದು ಬಯಸಿದ್ದರೂ, ಶಾಲಾ ದಿನಗಳಲ್ಲಿ ನಾಟಕಗಳಲ್ಲಿ ಕಾಣಿಸಿಕೊಂಡ ನಂತರ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡು ನಟನೆಯನ್ನು ತಮ್ಮ ವೃತ್ತಿಯನ್ನಾಗಿ ಮಾಡಿಕೊಂಡರು.

ತೆಲುಗು ಮಾತ್ರವಲ್ಲದೇ ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಸಿನಿಮಾಗಳಲ್ಲಿ ಕೂಡ ಕೋಟ ಶ್ರೀನಿವಾಸ ರಾವ್ ಅವರು ನಟಿಸಿದ್ದರು. ವಿಲನ್ ಪಾತ್ರ, ಹಾಸ್ಯ ಪಾತ್ರ ಸೇರಿದಂತೆ ಹಲವು ಬಗೆಯಲ್ಲಿ ಅವರು ಜನರನ್ನು ರಂಜಿಸಿದ್ದರು. ಪದವಿ ಶಿಕ್ಷಣ ಪಡೆದ ನಂತರ ಅವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಸಿಕ್ಕಿತು.

ಇದನ್ನು ಓದಿದ್ದೀರಾ? ನೂರರ ನೆನಪು | ಉತ್ಕಟ ಪ್ರೇಮದ ದುರಂತ ನಾಯಕ ಗುರುದತ್

ಕೋಟ ಶ್ರೀನಿವಾಸ ರಾವ್ ಅವರ ಪತ್ನಿ ರುಕ್ಮಿಣಿ. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನಿದ್ದಾರೆ. ಕೋಟ ಶ್ರೀನಿವಾಸ್ ಅವರ ಮಗ ಕೋಟ ವೆಂಕಟ ಆಂಜನೇಯ ಪ್ರಸಾದ್ ಅವರು ಚಿತ್ರರಂಗಕ್ಕೆ ಪ್ರವೇಶಿಸುವ ಹಂತದಲ್ಲಿದ್ದಾಗ ಅಪಘಾತದಲ್ಲಿ ಪ್ರಾಣ ಕಳೆದುಕೊಂಡರು. ಮಗನ ಅಕಾಲಿಕ ಮರಣದಿಂದ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಶ್ರೀನಿವಾಸ ರಾವ್ ಅವರ ಕಿರಿಯ ಸಹೋದರ ಶಂಕರ್ ರಾವ್ ಕೂಡ ಒಬ್ಬ ನಟ.

ಕೋಟ ಶ್ರೀನಿವಾಸ್ ರಾವ್ ಅವರು ಕೇವಲ ನಟರಲ್ಲ. ರಾಜಕೀಯಕ್ಕೂ ಪ್ರವೇಶಿಸಿ ಯಶಸ್ಸು ಕಂಡಿದ್ದರು. 1999ರಿಂದ 2004ರವರೆಗೆ ವಿಜಯವಾಡ ಪೂರ್ವ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡದ ಲೇಡಿ ಕಮಿಷನರ್, ರಕ್ತ ಕಣ್ಣೀರು, ಲವ್, ನಮ್ಮ ಬಸವ, ನಮ್ಮಣ್ಣ, ಶ್ರೀಮತಿ, ಕಬ್ಜಾ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ನಟ ದುಲ್ಕರ್ ಸಲ್ಮಾನ್‌ಗೆ ಕಸ್ಟಮ್ಸ್‌ನಿಂದ ಸಮನ್ಸ್: ಐಷಾರಾಮಿ ಕಾರುಗಳು ವಶಕ್ಕೆ

ಮಲಯಾಳಂನ ಖ್ಯಾತ ನಟ ದುಲ್ಕರ್ ಸಲ್ಮಾನ್ ಅವರ ಕೊಚ್ಚಿಯ ಎಲಂಕುಲಂ ನಿವಾಸದ...

ಪ್ರತಿಷ್ಠಿತ ‘ಫಾಲ್ಕೆ’ಯ ಮೆರಗು ಹೆಚ್ಚಿಸಿದ ಮೋಹನ್ ಲಾಲ್

ವೈವಿಧ್ಯಮಯ ಅಭಿನಯ, ಸಹಜ ಸರಳತೆ ಹಾಗೂ ಸೌಹಾರ್ದ ನಡವಳಿಕೆಯಿಂದ ಸಿನಿಪ್ರಿಯರ ಮನಗೆದ್ದ...

ಬಿಂಬ-ಬಿಂಬನ: ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಆತ್ಮಕತೆ

ಗಿರೀಶ್ ಕಾಸರವಳ್ಳಿಯವರು ತಮ್ಮ ಕೃತಿಯುದ್ದಕ್ಕೂ ಚರ್ಚಿಸಿರುವುದು ಬಿಂಬ ಮತ್ತು ಬಿಂಬನ ಹಾಗೂ...

ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಮಲಯಾಳಂ ಸಿನಿಮಾದ ಹಿರಿಯ ನಟ ಮೋಹನ್‌ಲಾಲ್ ಅವರಿಗೆ 2023ರ ಸಾಲಿನ ದಾದಾಸಾಹೇಬ್...

Download Eedina App Android / iOS

X