ತೆಲುಗು ಚಿತ್ರರಂಗದ ಜನಪ್ರಿಯ ನಟ ಪೋಸಾನಿ ಕೃಷ್ಣ ಮುರಳಿ ಬಂಧನ

Date:

ತೆಲುಗು ಚಿತ್ರರಂಗದ ಜನಪ್ರಿಯ ನಟ ಮತ್ತು ಲೇಖಕ ಪೋಸಾನಿ ಕೃಷ್ಣ ಮುರಳಿ ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಕೃಷ್ಣ ಮುರಳಿ (66) ಅವರನ್ನು ಹೈದರಾಬಾದ್‌ನಲ್ಲಿ ರಾತ್ರಿ 8.45ಕ್ಕೆ ಬಂಧಿಸಲಾಗಿದೆ ಎಂದು ಅನ್ನಮಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಕೃಷ್ಣರಾವ್ ಸುದ್ದಿಸಂಸ್ಥೆಗೆ ಖಚಿತಪಡಿಸಿದ್ದಾರೆ. ಹೈದರಾಬಾದ್‌ನ ಯಲ್ಲರೆಡ್ಡಿಗುಡಾದ ನ್ಯೂ ಸೈನ್ಸ್ ಕಾಲೋನಿ ಬಳಿಯ ಅವರ ನಿವಾಸದಿಂದ ಪೊಲೀಸರು ನಟನನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೃಷ್ಣ ಮುರಳಿ ಅವರ ಪತ್ನಿಗೆ ನೀಡಿರುವ ಬಂಧನ ನೋಟಿಸ್ ಪ್ರಕಾರ, ಅವರನ್ನು ಬಿಎನ್ಎಸ್ ಸೆಕ್ಷನ್ 196,353 (2), ಮತ್ತು 111 ರೀಡ್ ಮತ್ತು ಬಿಎನ್ಎಸ್ಎಸ್‌ನ ಸೆಕ್ಷನ್ 47(1) ಮತ್ತು (2) ಅಡಿಯಲ್ಲಿ ಬಂಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

ಆದರೆ, ನಟನ ಬಂಧನಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಸ್ಪಷ್ಟತೆ ಪೊಲೀಸರಿಂದ ನಿರೀಕ್ಷಿಸಲಾಗಿದೆ. ಕೃಷ್ಣ ಮುರಳಿ ಮೇಲಿನ ಆರೋಪವು ಜಾಮೀನು ರಹಿತ ಸ್ವರೂಪದ್ದಾಗಿದ್ದು, ಅವರನ್ನು ರಾಜಂಪೇಟೆಯ 1ನೇ ಹೆಚ್ಚುವರಿ ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸದ್ಯ ಪೊಲೀಸರು ನಟನನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಗನ್ನವರಂ ನಮಾಜಿ ಶಾಸಕ ಮತ್ತು ವೈಎಸ್ಆರ್‌ಪಿ ನಾಯಕ ವಲ್ಲಭನೇನಿ ವಂಶಿ ಬಂಧನದ ಬೆನ್ನಲ್ಲೇ ಕೃಷ್ಣ ಮುರಳಿ ಬಂಧನವಾಗಿದೆ.

ಕೃಷ್ಣ ಮುರಳಿ ಅವರು ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್‌ಪಿಯೊಂದಿಗೆ ಗುರುತಿಸಿಕೊಂಡಿದ್ದು, ಹಿಂದಿನ ವೈಎಸ್ಆರ್‌ಸಿಪಿ ಆಡಳಿತದಲ್ಲಿ ಆಂಧ್ರಪ್ರದೇಶ ಚಲನಚಿತ್ರ, ಟಿವಿ ಮತ್ತು ರಂಗಭೂಮಿ ಅಭಿವೃದ್ಧಿ ನಿಗಮದ (ಎಪಿಎಫ್ಟಿಟಿಡಿಸಿ) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...