ಅಂಬೇಡ್ಕರ್‌, ಪೆರಿಯಾರ್‌ ಬಗ್ಗೆ ತಿಳಿದುಕೊಳ್ಳಿ : ವಿದ್ಯಾರ್ಥಿಗಳಿಗೆ ದಳಪತಿ ವಿಜಯ್‌ ಕಿವಿಮಾತು

Date:

Advertisements
  • ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾದ ಸ್ಟಾರ್‌ ನಟ
  • ವಿದ್ಯೆ ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದ ವಿಜಯ್‌

ತಮಿಳಿನ ಖ್ಯಾತ ನಟ ದಳಪತಿ ವಿಜಯ್‌, ಈ ವರ್ಷದ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರುವ ತಮಿಳುನಾಡಿನ 10 ಮತ್ತು 12ನೇ ತರಗತಿಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿರುವ ನಟ, ಡಾ. ಬಿ.ಆರ್‌ ಅಂಬೇಡ್ಕರ್‌, ಕಾಮರಾಜ್ ಮತ್ತು ಪೆರಿಯಾರ್‌ ತರಹದ ಮಹಾನ್‌ ವ್ಯಕ್ತಿಗಳ ಕುರಿತು ತಿಳಿದುಕೊಳ್ಳಿ ಎಂದಿದ್ದಾರೆ.

ʼದಳಪತಿ ವಿಜಯ್‌ ಎಜುಕೇಶನ್‌ ಫೌಂಡೇಶನ್‌ʼ, 2022-23ನೇ ಸಾಲಿನ 10 ಮತ್ತು 12ನೇ ತರಗತಿಗಳ ಪರೀಕ್ಷೆಗಳಲ್ಲಿ ದಾಖಲೆಯ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಲುವಾಗಿ ಶನಿವಾರ ಚೆನ್ನೈನಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಳಪತಿ ವಿಜಯ್‌, ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದ್ದಾರೆ. ಜೊತೆಗೆ ಗೌರವ ಧನವನ್ನೂ ನೀಡಿ ಬಡಮಕ್ಕಳ ಉನ್ನತ ವ್ಯಾಸಂಗಕ್ಕೆ ನೆರವಾಗಿದ್ದಾರೆ.

ಸನ್ಮಾನದ ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ವಿಜಯ್‌, “ಡಾ. ಬಿ.ಆರ್‌ ಅಂಬೇಡ್ಕರ್‌, ಕಾಮರಾಜ್ ಮತ್ತು ಪೆರಿಯಾರ್‌ ತರಹದ ಮಹಾನ್‌ ವ್ಯಕ್ತಿಗಳ ಕುರಿತು ತಿಳಿದುಕೊಳ್ಳಿ. ನೀವು ಭವಿಷ್ಯದ ಪ್ರಜೆಗಳು ಹೀಗಾಗಿ ಹಣ ಪಡೆದು ಮತ ಚಲಾಯಿಸುವುದು ತಪ್ಪು ಎಂಬುದನ್ನು ನಿಮ್ಮ ಪೋಷಕರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿ. ಈ ಬದಲಾವಣೆ ನಿಮ್ಮಿಂದ ಮಾತ್ರ ಸಾಧ್ಯ” ಎಂದಿದ್ದಾರೆ.

Advertisements

ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುತ್ತಿರುವ ಹಿಂದಿನ ಉದ್ದೇಶವನ್ನು ತಿಳಿಸಿರುವ ವಿಜಯ್‌, “ನಾನು ಸಾಧಾರಣ ವಿದ್ಯಾರ್ಥಿಯಾಗಿದ್ದವನು. ನಮ್ಮ ಬಳಿ ಆಸ್ತಿ ಇದ್ದರೆ ಅದನ್ನು ಯಾರಾದರೂ ಕಸಿದುಕೊಳ್ಳಬಹುದು. ಹಣ ಇದ್ದರೆ ಅದನ್ನೂ ಕೂಡ ಕದಿಯಬಹುದು. ಆದರೆ, ನಮ್ಮಿಂದ ವಿದ್ಯೆಯನ್ನು ಕಸಿದುಕೊಳ್ಳಲು ಯಾರಿಗೂ ಸಾಧ್ಯವಿಲ್ಲ ಎನ್ನುವ ಸಿನಿಮಾ ಸಂಭಾಷಣೆಯಿಂದ ಪ್ರೇರಿತನಾಗಿ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮ ರೂಪಿಸಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X