ಬಿಡುಗಡೆ ಆಗಬೇಕಿದ್ದ ಕನ್ನಡ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ

Date:

ಕಾರಿನ ಗ್ಲಾಸ್ ಹೊಡೆದು, ಬಿಡುಗಡೆ ಆಗಬೇಕಿದ್ದ ಕನ್ನಡ ಸಿನಿಮಾದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್ ಮಾಡಿ ವಿಡಿಯೋ ಇದ್ದ ಹಾರ್ಡ್ ಡಿಸ್ಕ್ ಅನ್ನು ವಿಜಯನಗರದಲ್ಲಿ ಕಳುವಾಗಿದೆ. ಐ ಆಮ್ ಗಾಡ್ ಚಿತ್ರದ ನಿರ್ಮಾಪಕ ಕಂ ಹೀರೋ ಅವರ ಕಾರಿನ ಗ್ಲಾಸ್ ಒಡೆದು ಕಳವು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಿರ್ಮಾಪಕ ರವಿ ಗೌಡ ಕಾರು ಗಾಜು ಪುಡಿ ಮಾಡಿ ಕಳ್ಳತನ ಮಾಡಲಾಗಿದೆ. ನಟ ರವಿ ಗೌಡ ವಿಜಯನಗರದಲ್ಲಿ ಕಾರು ನಿಲ್ಲಿಸಿ ಹೋಗಿದ್ದರು. ಈ ವೇಳೆ ಕಾರಿನ ಬಳಿ ಬಂದ ಕಳ್ಳರು ಗ್ಲಾಸ್ ಹೊಡೆದು ಕಾರಿನಲ್ಲಿದ್ದ ಹಾರ್ಡ್ ಡಿಸ್ಕ್, 75 ಸಾವಿರ ಹಣ, ಒಂದು ಟ್ಯಾಬ್, ಒಂದು ಕಾಸ್ಟ್ಲಿ ಬ್ಯಾಗ್ ಕಳ್ಳತನ ಮಾಡಿದ್ದಾರೆ.

ಇದನ್ನು ಓದಿದ್ದೀರಾ? SVR @ 50: ರುಚಿಶುದ್ಧ ರಂಜನೆಯ ಚಿತ್ರಗಳ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ (ಬಾಬು)

ಕಳ್ಳರ ಕೃತ್ಯ, ಓಡಾಟವು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬಿಎಂಡಬ್ಲ್ಯೂ ಕಾರ್ ಗ್ಲಾಸ್ ಪುಡಿ ಪುಡಿಯಾಗಿ ಬಿದ್ದಿತ್ತು. ಕೂಡಲೇ ವಿಜಯನಗರ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಅಕ್ಕಪಕ್ಕದ ಸಿಸಿಟಿವಿ ತಪಾಸಣೆ ನಡೆಸಿದ್ದರು. ಪ್ರಕರಣ ದಾಖಲಿಸಿಕೊಂಡ ವಿಜಯನಗರ ಪೊಲೀಸರು ನೇರವಾಗಿ ತಮಿಳುನಾಡಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.

ಜಯಶೀಲನ್ ಹಾಗೂ ಆತನ ಮಗ ಕಳ್ಳತನ ಮಾಡಿರೋದು ಗೊತ್ತಾಗಿತ್ತು. ಪೊಲೀಸರು ಆರೋಪಿ ಜಯಶೀಲನ್‌ನನ್ನು ಬಂಧಿಸಿದ್ದಾರೆ. ಜಯಶೀಲನ್ ಮಗ ತಪ್ಪಿಸಿಕೊಂಡಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ ಅಪರೂಪದ ಕಲಾವಿದ

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...