ʻದಿ ಕೇರಳ ಸ್ಟೋರಿʼ : ಷಡ್ಯಂತ್ರದ ಸಿನಿಮಾ ಎಂದ ಕಮಲ್‌ ಹಾಸನ್‌

Date:

ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ

- Advertisement -

ತಿರುಚಿದ ಕಥಾಹಂದರದ ಕಾರಣಕ್ಕೆ ಸುದ್ದಿಯಲ್ಲಿರುವ ಚಿತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತಿರುಚಿದ ಕಥಾಹಂದರದ ಕಾರಣಕ್ಕೆ ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಬಗ್ಗೆ ಸಾಮಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ತಮಿಳಿನ ದಿಗ್ಗಜ ನಟ ಕಮಲ್‌ ಹಾಸನ್‌, ʼದಿ ಕೇರಳ ಸ್ಟೋರಿʼ ಬಗ್ಗೆ ಮಾತನಾಡಿದ್ದು, ಅದೊಂದು ಷಡ್ಯಂತ್ರದ ಸಿನಿಮಾ ಎಂದಿದ್ದಾರೆ.

ಇತ್ತೀಚೆಗೆ ಅಬುದಾಬಿಯಲ್ಲಿ ನಡೆದ 2023ನೇ ಸಾಲಿನ ʼಐಫಾʼ (ಇಂಟರ್‌ನ್ಯಾಶನಲ್‌ ಇಂಡಿಯನ್‌ ಫಿಲ್ಮ್‌ ಅಕಾಡೆಮಿ ಅವಾರ್ಡ್ಸ್‌) ಸಮಾರಂಭದಲ್ಲಿ ಕಮಲ್‌ ಹಾಸನ್‌ ಭಾಗಿಯಾಗಿದ್ದರು. ʼಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ನಟʼ ಎಂಬ ವಿಶೇಷ ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ʼದಿ ಕೇರಳ ಸ್ಟೋರಿʼ ಚಿತ್ರದ ಬಗ್ಗೆ ಮಾಧ್ಯಮದವರಿಂದ ಎದುರಾದ ಪ್ರಶ್ನೆಗೆ ಉತ್ತರಿಸಿರುವ ಕಮಲ್‌ ಹಾಸನ್‌, “ನಾನು ನಿಮಗೆ ಮೊದಲೇ ಹೇಳಿದಂತೆ ಅದೊಂದು ಷಡ್ಯಂತ್ರದ ಸಿನಿಮಾ. ಇಂತಹ ಸಿನಿಮಾಗಳನ್ನು ನಾನು ವಿರೋಧಿಸುತ್ತೇನೆ. ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಎಂದು ಕೇವಲ ಟೈಟಲ್‌ ಕೆಳಗಡೆ ಬರೆದುಕೊಂಡರೆ ಸಾಲದು. ಸಿನಿಮಾದ ಕಥೆಯಲ್ಲೂ ಸತ್ಯಾಂಶ ಇರಬೇಕು” ಎಂದಿದ್ದಾರೆ.

ಕೇವಲ ಕಮಲ್‌ ಹಾಸನ್‌ ಮಾತ್ರವಲ್ಲ, ಭಾರತೀಯ ಚಿತ್ರರಂಗದ ಹಲವು ತಾರೆಯರು ʼದಿ ಕೇರಳ ಸ್ಟೋರಿʼ ಚಿತ್ರದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ವಿವಾದಿತ ಚಿತ್ರದ ಪ್ರದರ್ಶನವನ್ನು ನಿಷೇಧಿಸಿದ್ದ ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌ ಖಂಡಿಸಿದ್ದರು. ಸಿನಿಮಾ ಷಡ್ಯಂತ್ರದ ಭಾಗವಾಗಿದ್ದರೂ ನಿಷೇಧ ಹೇರುವುದು ತಪ್ಪು ಎಂದಿದ್ದರು.

ʼದಿ ಕೇರಳ ಸ್ಟೋರಿʼ ಚಿತ್ರದ ವಿವಾದದ ಕುರಿತು ಮಾಡನಾಡಿದ್ದ ನವಾಜುದ್ದೀನ್‌ ಸಿದ್ದಿಕಿ, “ಯಾವುದೇ ಚಿತ್ರ ಅಥವಾ ಕೃತಿ ಯಾರಿಗಾದರೂ ನೋವುಂಟು ಮಾಡುತ್ತಿದ್ದರೆ, ಅದು ತಪ್ಪು. ನಾವು ಪ್ರೇಕ್ಷಕರನ್ನು ನೋಯಿಸುವ ಸಲುವಾಗಿ ಅಥವಾ ಅವರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಸಲುವಾಗಿ ಸಿನಿಮಾಗಳನ್ನು ಮಾಡುವುದಿಲ್ಲ” ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ಹಿಜಾಬು ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿ ಮಸಲತ್ತು

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತ ಮೂಡಿಬಂದಿರುವ ʼದಿ ಕೇರಳ ಸ್ಟೋರಿʼ ಚಿತ್ರವನ್ನು ಮೇ 8ರಂದು ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿತ್ತು. ಚಿತ್ರದ ನಿಷೇಧವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌, ಪಶ್ಚಿಮ ಬಂಗಾಳ ಸರ್ಕಾರದ ನಿಷೇಧದ ಆದೇಶಕ್ಕೆ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...