ʼದಿ ಕೇರಳ ಸ್ಟೋರಿʼ ಚಿತ್ರತಂಡಕ್ಕೆ ಅಪಘಾತ

Date:

ಅಪಘಾತವಾಗಿದ್ದು ಹೇಗೆ ಎಂಬ ಬಗ್ಗೆ ಸುಳಿವು ನೀಡದ ಚಿತ್ರತಂಡ

- Advertisement -

ಟ್ವೀಟ್‌ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ನಟಿ ಅದಾ ಶರ್ಮಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತಿರುಚಿದ ಕಥಾಹಂದರದ ಕಾರಣಕ್ಕೆ ವಿವಾದಕ್ಕೊಳಗಾಗಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ತೆಲಂಗಾಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದ ಚಿತ್ರತಂಡಕ್ಕೆ ಅಪಘಾತವಾಗಿದೆ. ಆದರೆ, ವಾಹನದಲ್ಲಿದ್ದ ಎಲ್ಲರೂ ಕ್ಷೇಮವಾಗಿದ್ದಾರೆ ಎಂದು ಚಿತ್ರದ ನಾಯಕಿ ಅದಾ ಶರ್ಮಾ ಮಾಹಿತಿ ಹಂಚಿಕೊಂಡಿದ್ದಾರೆ.

ʼದಿ ಕೇರಳ ಸ್ಟೋರಿʼ ಚಿತ್ರದ ನಿರ್ದೇಶಕ ಸುದಿಪ್ತೋ ಸೇನ್‌, ನಾಯಕಿ ಅದಾ ಶರ್ಮಾ ಸೇರಿದಂತೆ ಚಿತ್ರತಂಡದ ಸದಸ್ಯರು ಭಾನುವಾರ ತೆಲಂಗಾಣದ ಕರೀಂ ನಗರದಲ್ಲಿ ಆಯೋಜಿಸಲಾಗಿದ್ದʼಹಿಂದೂ ಏಕತಾ ಯಾತ್ರಾʼದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಈ ವೇಳೆ ಅವರಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಅದಾ ಶರ್ಮಾ, ಸುದಿಪ್ತೋ ಸೇರಿದಂತೆ ಹವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಆದರೆ, ಅಪಘಾತ ಸಂಭವಿಸಿದ್ದು ಹೇಗೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಹಿನ್ನೆಲೆ ಚಿತ್ರತಂಡ ಪಾಲ್ಗೊಳ್ಳಬೇಕಿದ್ದ ʼಹಿಂದೂ ಏಕತಾ ಯಾತ್ರಾʼ ಕೂಡ ರದ್ದಾಗಿದೆ.

ಈ ಸುದ್ದಿ ಓದಿದ್ದೀರಾ? ಟ್ರಾಫಿಕ್‌ನಿಂದ ಪಾರಾಗಲು ಅಪರಿಚಿತನ ಬೈಕ್‌ ಏರಿದ ಅಮಿತಾಬ್‌ ಬಚ್ಚನ್‌

ಅಪಘಾತದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಅದಾ ಶರ್ಮಾ, “ನಾನು ಕ್ಷೇಮವಾಗಿದ್ದೇನೆ, ಅಪಘಾತದ ಸುದ್ದಿ ಹರಿದಾಡುತ್ತಿರುವುದರಿಂದ ಹಲವಾರು ಮಂದಿ ಸಂದೇಶ ಕಳುಹಿಸಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಚಿತ್ರತಂಡದ ಎಲ್ಲರೂ ಆರೋಗ್ಯವಾಗಿದ್ದೇವೆ. ಅಂತಹ ದೊಡ್ಡ ಅಪಘಾತವೇನಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಿಮ್ಮ ಕಾಳಜಿಗೆ ಧನ್ಯವಾದ ಎಂದಿದ್ದಾರೆ.

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತʼದಿ ಕೇರಳ ಸ್ಟೋರಿʼ ಚಿತ್ರ ಮೂಡಿಬಂದಿದೆ. ಆದರೆ, ಈ ಚಿತ್ರ ತಿರುಚಿದ ಕಥಾಹಂದರವನ್ನು ಹೊಂದಿದೆ ಎಂಬ ಆರೋಪವಿದೆ. ವಿವಾದಕ್ಕೆ ಕಾರಣವಾಗಿರುವ ಈ ಚಿತ್ರವನ್ನು ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿದ್ದು, ತಮಿಳುನಾಡಿನಲ್ಲೂ ಪ್ರದರ್ಶನಗಳು ರದ್ದುಗೊಂಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...