ಬೆಂಗಳೂರಿನಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕ ನೆಲಸಮ

Date:

Advertisements

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಲಾಗಿದೆ.

ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ ಹಾಗೂ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿ ಸ್ಥಳಕ್ಕೆ ಅಭಿಮಾನಿಗಳಿಗೆ ಪ್ರವೇಶ ಸಿಗುತ್ತಿಲ್ಲ. ಈಗಾಗಲೇ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣವಾಗಿದೆ.

Advertisements

ವಿಷ್ಣುವರ್ಧನ್‌ ಮೃತಪಟ್ಟ ನಂತರ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು. ನಂತರದಲ್ಲಿ ವಿಷ್ಣು ಸಮಾಧಿಯನ್ನು ಸಂರಕ್ಷಿಸಿ, ಅದನ್ನು ಸ್ಮಾರಕವಾಗಿ ಘೋಷಿಸಬೇಕೆಂಬ ಹೋರಾಟ ನಡೆಯುತ್ತಲೇ ಇತ್ತು. ಆದರೆ ಹೈಕೋರ್ಟ್‌ ಸೂಚನೆ ಮೇರೆಗೆ ಸಮಾಧಿಯನ್ನು ತೆರವುಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ: ಕನ್ನಡದ ‘ಸನ್‌ಫ್ಲವರ್ಸ್ ವರ್‌ ದಿ ಫಸ್ಟ್ ಒನ್ ಟು ನೋ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

ಸದ್ಯ ಮೈಸೂರಿನಲ್ಲಿ ಈಗಾಗಲೇ ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಆಗಿದೆ. ವಿಷ್ಣು ಸಿನಿಮಾದಲ್ಲಿನ ಪ್ರಶಸ್ತಿಗಳೂ ಸ್ಮಾರಕದ ಮ್ಯೂಸಿಯಂನಲ್ಲಿದೆ. ವಿಷ್ಣು ಪುತ್ಥಳಿಯನ್ನೂ ನಿರ್ಮಿಸಲಾಗಿದೆ. ನಟನ ಚಲನಚಿತ್ರ ಪ್ರಯಾಣದ ಗ್ಯಾಲರಿ, ವಿಷ್ಣು ಅವರ ಅಪರೂಪದ 600ಕ್ಕೂ ಹೆಚ್ಚು ಫೋಟೋಗಳು, ವಿಷ್ಣು ಬಳಸುತ್ತಿದ್ದ ವಸ್ತುಗಳು, ಬಟ್ಟೆ ಇಲ್ಲಿ ನೋಡಬಹುದಾಗಿದೆ.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಷ್ಣುವರ್ಧನ್ ಸ್ಮಾರಕಕ್ಕೆ ಸೆಪ್ಟೆಂಬರ್ 15, 2020 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ವಿಷ್ಣು ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಮಾಡಲಾಗಿದೆ. ಸಭಾಂಗಣ ಕೂಡ ಇಲ್ಲಿ ನಿರ್ಮಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಗವಿಸಿದ್ದಪ್ಪ ಕೊಲೆ ಪ್ರಕರಣ; ಕೋಮುದ್ವೇಷ ಹೇಳಿಕೆ ಆರೋಪ, ಶಾಸಕ ಯತ್ನಾಳ್ ವಿರುದ್ಧ ದೂರು

ಇದೇ ತಿಂಗಳು ಕೋಲಾರ ನಗರದಲ್ಲಿ ಪ್ರೀತಿ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕರ...

₹56 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಪಡೆದರೂ ಅಭಿವೃದ್ಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದ ಜನರಿಂದ ಹೆಚ್ಚುವರಿಯಾಗಿ 56 ಸಾವಿರ ಕೋಟಿ ತೆರಿಗೆ ವಸೂಲಿ ಮಾಡುತ್ತಿದ್ದರೂ,...

ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

Download Eedina App Android / iOS

X