ನಟಿ ಬಿ ಸರೋಜಾದೇವಿ ಹಾಗೂ ನಟ ಡಾ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ವಿಷ್ಣುವರ್ಧನ್ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಅದೇ ರೀತಿ ಬಿ. ಸರೋಜಾದೇವಿ ಕೂಡ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದರು. ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂದು ಎರಡು ಕುಟುಂಬಗಳು ಹಾಗೂ ಅಭಿಮಾನಿಗಳು ಮನವಿ ಮಾಡಿದ್ದರು.
ಇದನ್ನು ಓದಿದ್ದೀರಾ? ’12th Fail’ ಸೋಲುಸೋಲುತ್ತಾ ಗೆಲ್ಲುತ್ತಾ ಹೋದವನ ಜೀವನಗಾಥೆ
ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು.