ನಟ ದರ್ಶನ್​ ವಿರುದ್ಧ ಮತ್ತೆ ಮೂರು ಹೊಸ ಎಫ್ಐಆರ್​ ದಾಖಲು

Date:

ನಟ ದರ್ಶನ್​ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ವಿಐಪಿ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್​​ಐಆರ್ ದಾಖಲಾಗಿದೆ. ಈ ಮೂರೂ ಎಫ್​ಐಆರ್​ಗಳಲ್ಲಿ ದರ್ಶನ್​ ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಿದೆ.

- Advertisement -

ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್​ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ದರ್ಶನ್‌ ಫೋಟೊವನ್ನು ಬಹಿರಂಗಪಡಿಸಿದ್ದು ಜೈಲಿನಲ್ಲಿದ್ದ ಮತ್ತೊಬ್ಬ ಪಾತಕಿ

ಆರೋಪಿ ದರ್ಶನ್​ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್​​ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್​​ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ಎಫ್‌ಐಆರ್​ಗಳಲ್ಲೂ ಕೂಡ ದರ್ಶನ್ ಆರೋಪಿ ಆಗಿದ್ದಾರೆ. ಇದರಿಂದ ಅವರಿಗೆ ಜಾಮೀನು ಪಡೆಯುವಲ್ಲಿ ಸಂಕಷ್ಟ ಎದುರಾಗಲಿದೆ.

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನಿಂದ ಅಶ್ಲೀಲ ಸಂದೇಶ ಬಂದಿತ್ತು. ಆ ಕಾರಣಕ್ಕಾಗಿ ಆತನಿಗೆ ಬೆಂಗಳೂರಿನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿಸಿದ ಆರೋಪ ದರ್ಶನ್​ ಹಾಗೂ ಸಹಚರರ ಮೇಲಿದೆ. ಇದೇ ಪ್ರಕರಣದಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಈಗ ಜೈಲಿನಲ್ಲಿ ಅವರು ಪ್ರಭಾವ ಬಳಸಿ ನಿಯಮಗಳನ್ನು ಮುರಿದಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ಜೈಲಿನ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಅನುಮಾನ ಮೂಡುವ ರೀತಿಯಲ್ಲಿ ನಟನ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...