‘ಥಗ್‌ ಲೈಫ್‌’ ವಿವಾದ | ಜೂ.10ಕ್ಕೆ ವಿಚಾರಣೆ ಮುಂದೂಡಿಕೆ; ರಾಜ್ಯದಲ್ಲಿ ಸಿನಿಮಾ ಬಿಡುಗಡೆಯಿಲ್ಲ

Date:

ರಾಜ್ಯದಲ್ಲಿ ಕಮಲ್‌ ಹಾಸನ್‌ ಅಭಿನಯದ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆ ಕುರಿತಾದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜೂನ್‌ 10ಕ್ಕೆ ಮುಂದೂಡಿದೆ.

- Advertisement -

ಈ ನಡುವೆ ಜೂನ್‌ 5ರಂದು ರಾಜ್ಯದಲ್ಲಿ ಸಿನಿಮಾ ಬಿಡುಗಡೆ ಮಾಡದಿರಲು ನಿರ್ಮಾಪಕರು ನಿರ್ಧರಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಾಣಿಜ್ಯ ಮಂಡಳಿ ಜೊತೆಗೆ ನಿರ್ಮಾಪಕರು ಚರ್ಚೆ ನಡೆಸಲು ಸಿದ್ಧರಿದ್ದಾರೆ ಎಂದು ನಿರ್ಮಾಪಕರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಕಮಲ್‌ ಅವರಿಗೆ ಕ್ಷಮೆ ಕೇಳುವುದಕ್ಕೆ ಹಿಂಜರಿಕೆ ಏಕೆ ಎಂದು ಪ್ರಶ್ನಿಸಿತ್ತು.

ನೀವೇನು ಭಾಷಾತಜ್ಞರೇ ಎಂದು ಹೈಕೋರ್ಟ್ ತರಾಟೆ

“ಕನ್ನಡಿಗರ ಭಾವನೆಗಳಿಗೆ ಹಾನಿ ಮಾಡಿ, ಈಗ ಕ್ಷಮೆ ಕೇಳುವುದಿಲ್ಲ ಎಂದರೆ ಹೇಗೆ? ವಾಕ್‌ ಸ್ವಾತಂತ್ರ್ಯ ಎಂದರೆ ಬೇರೆಯವರ ಭಾವನೆಗಳಿಗೆ ಹಾನಿ ಮಾಡುವುದಲ್ಲ” ಎಂದು ಕರ್ನಾಟಕ ಹೈಕೋರ್ಟ್ ತಮಿಳು ನಟ ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಇದನ್ನು ಓದಿದ್ದೀರಾ? ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಚಿತ್ರ ತಂಡ

“ತಮಿಳಿನಿಂದ ಕನ್ನಡ ಜನಿಸಿದೆ ಎಂದು ಹೇಳಲು ಕಮಲ್‌ ಹಾಸನ್‌ ಅವರು ಭಾಷಾತಜ್ಞರೇ? ಕ್ಷಮೆ ಕೇಳಿದ್ದರೆ ಎಲ್ಲವೂ ಮುಗಿಯುತ್ತಿತ್ತಲ್ಲವೇ? ಆ ಹೇಳಿಕೆ ನೀಡುವ ಅಗತ್ಯವೇನಿತ್ತು? ಇತಿಹಾಸ ಗೊತ್ತಿಲ್ಲದೇ ಆ ಹೇಳಿಕೆ ನೀಡಿದ್ದೇನೆ ಎಂದು ಕ್ಷಮೆ ಕೇಳಿದ್ದರೆ ಮುಗಿಯುತ್ತಿತ್ತಲ್ಲವೇ? ನೀವೇ ಸೃಷ್ಟಿ ಮಾಡಿರುವ ಸಮಸ್ಯೆಗೆ ಪೊಲೀಸರ ರಕ್ಷಣೆ ಕೋರುತ್ತಿದ್ದೀರಾ” ಎಂದು ಪೀಠ ಪ್ರಶ್ನಿಸಿದೆ.

ಇನ್ನು ವಿಡಿಯೋ ಪರಿಶೀಲಿಸಿದ ನ್ಯಾಯಮೂರ್ತಿಗಳು, “ಯಾರ ಭಾವನೆಯನ್ನೂ ತಮ್ಮ ಮನಸೋಇಚ್ಛೆ ನೋಯಿಸಲು ಬಿಡಲಾಗದು. ಹಲವು ಕೋಟಿ ನಷ್ಟವಾಗುತ್ತದೆ ಎನ್ನುವುದಾದರೆ, ನಿಮಗೆ ಕರ್ನಾಟಕ ಏತಕ್ಕೆ ಬೇಕು. ಅದನ್ನು ಬಿಡಿ. ನೀವು ಇತಿಹಾಸಕಾರರೇನಲ್ಲ ಎಂದ ಮೇಲೆ ಕ್ಷಮೆ ಕೋರಲು ಹೇಳಿ. ಆಡಿದ ಮಾತುಗಳು ಬರುವುದಿಲ್ಲ. ಕ್ಷಮೆ ಕೋರುವುದರ ಮೂಲಕ ಅವುಗಳಿಗೆ ಇತಿಶ್ರೀ ಹಾಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...