‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಚಿತ್ರ ತಂಡ

Date:

ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ಕ್ಷಮೆಯಾಚಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದೆ. ಆದರೆ ನಟ ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಈ ಬೆನ್ನಲ್ಲೇ ಕ್ಷಮೆ ಕೇಳದಿದ್ದರೆ ಕಮಲ್ ಹಾಸನ್ ಸಿನಿಮಾವನ್ನು ಬಹಿಷ್ಕರಿಸಲಾಗುವುದು ಎಂದು ಚಿತ್ರರಂಗ ಹೇಳಿದೆ. ಈ ಎಲ್ಲಾ ಬೆಳವಣಿಗೆ ನಡುವೆ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಸಿನಿಮಾ ತಂಡವು ಕರ್ನಾಟಕ ಹೈಕೋರ್ಟ್ ಮೊರೆಹೋಗಿದೆ.

- Advertisement -

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ಸಹ-ನಿರ್ಮಾಪಕರಾದ ರಾಜ್‌ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ಚಿತ್ರವನ್ನು ಪ್ರದರ್ಶಿಸಲು ಅವಕಾಶ ನೀಡುವಂತೆ ನಿರ್ದೇಶನ ನೀಡುವಂತೆ ಕೋರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಕನ್ನಡ ತಮಿಳಿನಿಂದ ಹುಟ್ಟಿದೆ ಹೇಳಿಕೆ: ತಪ್ಪಾಗಿದ್ದರೆ ಮಾತ್ರ ಕ್ಷಮೆ ಕೇಳುವೆ ಎಂದ ಕಮಲ್ ಹಾಸನ್

ನಟ ಕಮಲ್ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸದಿದ್ದರೆ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ) ಸಹ ಘೋಷಿಸಿದೆ. ಆದರೆ ಕಮಲ್ ಹಾಸನ್ ಮಾತ್ರ ಕ್ಷಮೆಯಾಚಿಸಲು ನಿರಾಕರಿಸಿದ್ದು, ಇದೀಗ ಚಿತ್ರ ತಂಡ ಹೈಕೋರ್ಟ್ ಮೆಟ್ಟಿಲೇರಿದೆ.

ಇನ್ನು ಚಿತ್ರತಂಡವು “ನಟನ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ. ವಾಸ್ತವವಾಗಿ ತಮಿಳುನಾಡು ಮತ್ತು ಕರ್ನಾಟಕದ ಜನರ ನಡುವಿನ ಸೌಹಾರ್ದತೆಯನ್ನು ಎತ್ತಿ ತೋರಿಸುವ ಉದ್ದೇಶವನ್ನು ಈ ಚಿತ್ರ ಹೊಂದಿದೆ” ಎಂದು ವಾದಿಸಿದೆ.

“ಉದ್ದೇಶಪೂರ್ವಕವಾಗಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಇದರಿಂದಾಗಿ ಅನಗತ್ಯ ಆಕ್ರೋಶ ಉಂಟಾಗಿದೆ. ಹಾಗಾಗಿ 300 ಕೋಟಿ ರೂಪಾಯಿ ವೆಚ್ಚದ ಈ ಚಿತ್ರದ ಪ್ರದರ್ಶನವನ್ನು ಕರ್ನಾಟಕದಲ್ಲಿ ತಡೆಯುವ ಯಾವುದೇ ಪ್ರಯತ್ನವನ್ನು ತಡೆಯಲು ನ್ಯಾಯಾಲಯ ಮಧ್ಯಪ್ರವೇಶಿಸಬೇಕು” ಎಂದು ಚಿತ್ರತಂಡ ಒತ್ತಾಯಿಸಿದೆ.

ಮಣಿರತ್ನಂ ನಿರ್ದೇಶನದ ಥಗ್ ಲೈಫ್‌ ಚಿತ್ರದಲ್ಲಿ ತ್ರಿಶಾ ಕೃಷ್ಣನ್ ಮತ್ತು ಟಿಆರ್ ಸಿಲಂಬರಸನ್ ಕೂಡ ನಟಿಸಿದ್ದಾರೆ, ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...