ಒಟಿಟಿಗೆ ಬರಲು ಸಜ್ಜಾದ ʼದಸರಾʼ

Date:

ತೆರೆಕಂಡ ಒಂದೇ ವಾರಕ್ಕೆ 100 ಕೋಟಿ ಕ್ಲಬ್‌ ಸೇರಿದ್ದ ʼದಸರಾʼ

- Advertisement -

ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿರುವ ಶ್ರೀಕಾಂತ್‌ ಒಡೆಲಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ತೆಲುಗಿನ ಸ್ಟಾರ್‌ ನಟ ನಾನಿ ಅಭಿನಯದ ʼದಸರಾʼ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಸ್ಟಾರ್‌ ಸಿನಿಮಾ ತೆರೆಕಂಡ ಕೆಲವೇ ದಿನಕ್ಕೆ ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ.

ಜಗತ್ತಿನಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿರುವ ಈ ಚಿತ್ರದ ಡಿಜಿಟಲ್‌ ಹಕ್ಕನ್ನು ಜನಪ್ರಿಯ ಒಟಿಟಿ ಸಂಸ್ಥೆ ʼನೆಟ್‌ಫ್ಲಿಕ್ಸ್‌ʼ ಬಹುಕೋಟಿ ಮೊತ್ತಕ್ಕೆ ಖರೀದಿ ಮಾಡಿದ್ದು, ಮೇ 12ರಂದು ಚಿತ್ರ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ.

‘ದಸರಾ’ ಸಿನಿಮಾ ಈವರೆಗೆ ಗಲ್ಲಾ ಪೆಟ್ಟಿಗೆಯಲ್ಲಿ ಅಂದಾಜು 110 ಕೋಟಿ ರೂಪಾಯಿಗಳನ್ನು ಕಲೆ ಹಾಕಿದೆ. ರಾಜಮೌಳಿ, ಪ್ರಭಾಸ್‌, ಮಹೇಶ್‌ ಬಾಬು ಸೇರಿದಂತೆ ಹಲವು ತಾರೆಯರು ಚಿತ್ರವನ್ನು ನೋಡಿ, ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಚೊಚ್ಚಲ ಪ್ರಯತ್ನದಲ್ಲೇ ಸೂಪರ್‌ ಹಿಟ್‌ ಸಿನಿಮಾ ಕೊಟ್ಟ ನಿರ್ದೇಶಕ ಶ್ರೀಕಾಂತ್‌ ಒಡೆಲಾಗೆ, ನಿರ್ಮಾಪಕ ಸುಧಾಕರ್‌ ಚೆರುಕುರಿ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಿತ್ರತಂಡದ ಉಳಿದ ಕಲಾವಿದರು ಮತ್ತು ತಂತ್ರಜ್ಞರಿಗೆ ತಲಾ 10 ಗ್ರಾಂ ಚಿನ್ನದ ನಾಣ್ಯಗಳನ್ನು ನೀಡುವ ಮೂಲಕ ಯಶಸ್ಸನ್ನು ಸಂಭ್ರಮಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕ್ಲಾಸ್‌ ಬಂಕ್‌ ಮಾಡಿ ಸಿನಿಮಾ ನೋಡಿ ಎಂದ ತೆಲಂಗಾಣ ಶಿಕ್ಷಣ ಸಚಿವ

ಆ್ಯಕ್ಷನ್ ಪ್ಯಾಕ್‌ ಕಥಾಹಂದರವುಳ್ಳ ʼದಸರಾʼ ಚಿತ್ರದಲ್ಲಿ ನಾನಿ ಅವರಿಗೆ ಕೀರ್ತಿ ಸುರೇಶ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡಿಗ, ದಿಯಾ ಖ್ಯಾತಿಯ ನಟ ದೀಕ್ಷಿತ್‌ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಸಂತೋಷ್‌ ನಾರಾಯಣನ್ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...