ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಯೋಗಿ ಸರ್ಕಾರ

Date:

ವಿವಾದಿತ ಚಿತ್ರ ಪಶ್ಚಿಮ ಬಂಗಾಳದಲ್ಲಿ ನಿಷೇಧ

- Advertisement -

ತಮಿಳುನಾಡಿನಲ್ಲೂ ಚಿತ್ರದ ಪ್ರದರ್ಶನಗಳು ರದ್ದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ವಿವಾದಾತ್ಮಕ ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವಾಗಲೇ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ ಸರ್ಕಾರಗಳು ಚಿತ್ರಕ್ಕೆ ಬೆಂಬಲ ಸೂಚಿಸಿ, ತೆರಿಗೆ ವಿನಾಯಿತಿ ಘೋಷಿಸಿವೆ.

ತಿರುಚಿದ ಕಥಾಹಂದರವನ್ನು ಹೊಂದಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಮೂಲಕ ದೇಶವ್ಯಾಪಿಯಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಯಾಗಿಸಿ ದ್ವೇಷ ಹರಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆಕ್ಷೇಪಗಳು ಕೇಳಿ ಬರುತ್ತಿರುವಾಗಲೇ ಟ್ವೀಟ್‌ ಮಾಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, “ಉತ್ತರಪ್ರದೇಶದಲ್ಲಿ ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗುವುದು” ಎಂದು ಘೋಷಿಸಿದ್ದಾರೆ. ಈ ಹಿಂದೆ ಮಧ್ಯಪ್ರದೇಶ ಸರ್ಕಾರ ಕೂಡ ವಿವಾದಿತ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿತ್ತು.

ಬಿಜೆಪಿ ಆಡಳಿತವಿರುವ ಎರಡು ರಾಜ್ಯಗಳಲ್ಲಿ ಈ ವಿವಾದಿತ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದರೆ, ಪಶ್ಷಿಮ ಬಂಗಾಳ ಸರ್ಕಾರ ಚಿತ್ರದ ಪ್ರದರ್ಶನಕ್ಕೆ ರಾಜ್ಯದಲ್ಲಿ ನಿಷೇಧ ಹೇರಿದೆ. ತಿರುಚಿದ ಕಥೆಯನ್ನು ಹೊಂದಿರುವ ಈ ಚಿತ್ರ ಕೇರಳದ ಘನತೆಗೆ ಧಕ್ಕೆ ತರುವಂಥದ್ದು, ಈ ಚಿತ್ರ ರಾಜ್ಯದಲ್ಲಿ ಪ್ರದರ್ಶನ ಕಂಡರೆ ದ್ವೇಷ ಹರಡುವ ಸಾಧ್ಯತೆ ಇದೆ. ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ʼದಿ ಕೇರಳ ಸ್ಟೋರಿʼ ಪ್ರದರ್ಶನವನ್ನು ನಿಷೇಧಗೊಳಿಸಲಾಗಿದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇನ್ನು ತಮಿಳುನಾಡಿನಲ್ಲೂ ʼದಿ ಕೇರಳ ಸ್ಟೋರಿʼ ಪ್ರದರ್ಶನಗಳು ರದ್ದಾಗುತ್ತಿವೆ. ರಾಜ್ಯದೆಲ್ಲೆಡೆ ಚಿತ್ರಮಂದಿರದ ಮಾಲೀಕರೇ ಸ್ವಯಂ ಪ್ರೇರಿತರಾಗಿ ಪ್ರದರ್ಶನಗಳನ್ನು ರದ್ದು ಪಡಿಸಿದ್ದಾರೆ. ಕೇರಳದಲ್ಲಂತೂ ಈ ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದೇ ಸಂದರ್ಭದಲ್ಲಿ 2018ರ ಕೇರಳ ಪ್ರವಾಹದ ಸುತ್ತ ಮೂಡಿಬಂದಿರುವ ಮಲಯಾಳಂನ ʼ2018ʼ ಚಿತ್ರವನ್ನು ಬೆಂಬಲಿಸಿ, ಇದು ನಿಜವಾದ ಕೇರಳ ಸ್ಟೋರಿ ಎಂದು ನೆಟ್ಟಿಗರು ಹೊಸ ಅಭಿಯಾನ ಪ್ರಾರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಶ್ಚಿಮ ಬಂಗಾಳದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾ ಪ್ರದರ್ಶನ ನಿಷೇಧ

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆ ʼಐಸಿಸ್‌ʼಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತ ʼದಿ ಕೇರಳ ಸ್ಟೋರಿʼ ಚಿತ್ರದ ಕಥೆ ಮೂಡಿಬಂದಿದೆ. ಆದರೆ, 32 ಸಾವಿರ ಯುವತಿಯರು ಮತಾಂತರಕ್ಕೊಳಗಾಗಿ ಭಯೋತ್ಪಾದನೆಗೆ ಬಲವಂತವಾಗಿ ತಳ್ಳಲ್ಪಟ್ಟಿದ್ದಾರೆ ಎಂದು ತಿರುಚಿದ ಕಥೆಯನ್ನು ಟೀಸರ್‌ನಲ್ಲಿ ತೋರಿಸಲಾಗಿತ್ತು. ಟೀಸರ್‌ ವಿವಾದಕ್ಕೆ ಸಿಲುಕಿಕೊಂಡು, ಸಿನಿಮಾ ನಿಷೇಧಿಸುವಂತೆ ಜನ ಕೋರ್ಟ್‌ ಮೆಟ್ಟಿಲೇರುತ್ತಲೇ ವರಸೆ ಬದಲಿಸಿದ್ದ ಚಿತ್ರತಂಡ, ಮತಾಂತರಕ್ಕೊಳಗಾಗಿದ್ದ ಮೂರು ಜನ ಮಹಿಳೆಯರʼ ಕಥೆ ಇದು ಎಂದು ಹೇಳಿಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...