ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗಿಯೇ ಆಗಲಿ: ನಟ ಉಪೇಂದ್ರ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ನಿರ್ದೇಶಕ ಉಪೇಂದ್ರ ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆ ಕುರಿತ ವಿಡಿಯೊ ಚಿತ್ರೀಕರಣ ಮತ್ತು ಅದು ಜನರಿಗೆ ನೋಡಲು ಸಿಗುವಂತಾಬೇಕು ಎಂದಿದ್ದಾರೆ.

- Advertisement -

ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್‌ನ ವಿಚಾರಣೆಯ ವಿಡಿಯೊ ದಾಖಲೆ ಮತ್ತು ಸಾಕ್ಷಿಗಳ ಎಲ್ಲ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಎಂದಿದ್ಧಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ, ದರ್ಶನ್ ಬಂಧನ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈಪ್ರೊಫೈಲ್ ಕೇಸ್‌ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಜನ ಕಾಯುತ್ತಿದ್ದಾರೆ. ರೇಣುಕಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿವೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೀಟಾಗಿಲ್ಲ ಎನ್ನುವುದು ಗೊತ್ತಿದ್ದೂ ಭಂಡತನ ಮೆರೆದ ಬಿಜೆಪಿ

ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್‌ನ ವಿಚಾರಣೆಯ ವಿಡಿಯೊ ದಾಖಲೆ ಮತ್ತು ಸಾಕ್ಷಿಗಳ ಎಲ್ಲ ವಿವರಗಳನ್ನು ಆಗಾಗ ಪೊಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್‌ ಮಾಡಬಹುದು ). ಈ ಸಂಬಂಧ ಕಾನೂನು ಸುಧಾರಣೆಗಳು #CriminalJusticeReforms ಆಗಬೇಕು ಎಂದಿದ್ದಾರೆ.

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್‌ನ ವಿಚಾರಣೆಯ ವಿಡಿಯೊ ದಾಖಲೆಗಳ ಮತ್ತು ಸಾಕ್ಷಿಗಳ ಎಲ್ಲ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು/ ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ ಎಂದಿದ್ದಾರೆ.

ಆಗ ರೇಣುಕಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳ ಮನಸ್ಸಿನಲ್ಲಿ ಗೊಂದಲಗಳಿಲ್ಲದೆ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಬರೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...