ಚಿತ್ರಮಂದಿರಗಳಿಂದ ಎತ್ತಂಗಡಿ; ಒಟಿಟಿಯತ್ತ ಮುಖ ಮಾಡಿದ ʼಕಬ್ಜ?

Date:

  • ‘ಕಬ್ಜ’ ₹100 ಕೋಟಿ ಗಳಿಸಿಲ್ಲ ಎಂದ ಸಿನಿ ವಿಶ್ಲೇಷಕರು
  • ಎರಡೇ ದಿನಕ್ಕೆ ₹100 ಕೋಟಿ ಗಳಿಕೆ ಎಂದ ನಿರ್ದೇಶಕರು

ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯದ ʼಕಬ್ಜʼ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ಕಾಣುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ನಡುವೆಯೇ ಚಿತ್ರ ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ.

ನಿರ್ದೇಶಕ ಆರ್‌ ಚಂದ್ರು, ಉಪೇಂದ್ರ ಮತ್ತು ಚಿತ್ರತಂಡ ಇತ್ತೀಚೆಗೆ ಕೇಕ್‌ ಕತ್ತರಿಸಿ ‘ಕಬ್ಜ’ ಚಿತ್ರದ ಯಶಸ್ಸನ್ನು ಸಂಭ್ರಮಿಸಿತ್ತು. ಆದರೆ, ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಟೀಕೆಗೆ ಗುರಿಯಾಗಿರುವ ಈ ಚಿತ್ರ ತೆರೆಕಂಡ ಒಂದೇ ವಾರಕ್ಕೆ ಚಿತ್ರಮಂದಿರಗಳಿಂದ ಎತ್ತಂಗಡಿಯಾಗುತ್ತಿದೆ. ಹೀಗಾಗಿ ಚಿತ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

‘ಕಬ್ಜ’ ಚಿತ್ರದ ಒಟಿಟಿ ಹಕ್ಕನ್ನು ಜನಪ್ರಿಯ ಒಟಿಟಿ ಸಂಸ್ಥೆ ಅಮೆಜಾನ್‌ ಪ್ರೈಂ ಬಹುಕೋಟಿ ಮೊತ್ತಕ್ಕೆ ಖರೀದಿಸಿದ್ದು, ತೆರೆಕಂಡು ತಿಂಗಳು ಕಳೆಯುವ ಮುನ್ನ ಅಂದರೆ ಏಪ್ರಿಲ್‌ 14ರಂದು ಚಿತ್ರ ಒಟಿಟಿಯಲ್ಲಿ ಪ್ರಸಾರವಾಗಲಿದೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ.

ಈ ಸುದ್ದಿ ಓದಿದ್ದೀರಾ? ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ಅಂದಾಜು 120 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ʼಕಬ್ಜʼ ಸಿನಿಮಾ ತೆರೆಕಂಡ ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಕಲೆ ಹಾಕಿದೆ ಎಂದು ಆರ್‌ ಚಂದ್ರು ಹೇಳಿಕೊಂಡಿದ್ದರು. ಆದರೆ, ಈವರೆಗೆ ಚಿತ್ರದ ಗಳಿಕೆ 33 ಕೋಟಿ ರೂಪಾಯಿಗಳನ್ನು ಕೂಡ ದಾಟಿಲ್ಲ. ಅಷ್ಟೇ ಅಲ್ಲ, ಕನ್ನಡದ ಹೊರತಾಗಿ ಚಿತ್ರದ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಅವತರಣಿಕೆಗಳು 1 ಕೋಟಿ 75 ಲಕ್ಷ ರೂಪಾಯಿಗಳನ್ನು ಮಾತ್ರ ಗಳಿಸಲು ಸಾಧ್ಯವಾಗಿದೆ ಎಂದು ಸಿನಿ ವಿಶ್ಲೇಷಕರು ಅಸಲಿ ಲೆಕ್ಕಾಚಾರ ಬಿಚ್ಚಿಟ್ಟಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...

ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ...