ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ

Date:

Advertisements

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ.

ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್‌ ತಡರಾತ್ರಿ 2.30ರ ಸುಮಾರಿಗೆ‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್‌ ಅವರು ಸುಮಾರು 800ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ. 80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್‌ ಉಪೇಂದ್ರ ನಿರ್ದೇಶನದ ಶ್‌, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದಾದಾಸಾಹೇಬ್‌ ಫಾಲ್ಕೆ ಪುರಸ್ಕೃತ ಬಾಲಿವುಡ್‌ ನಟ ಮನೋಜ್‌ ಕುಮಾರ್‌ ನಿಧನ

ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.

1949ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಹೊಳಲ್ಕೆರೆ ಬಳಿಯ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಚಿಕ್ಕಂದಿನಿಂದಲೂ ಅವರಿಗೆ ಕಲೆಯ ಬಗ್ಗೆ ಆಸಕ್ತಿ ಇತ್ತು. ಹೀಗಾಗಿ, ನಾಟಕಗಳನ್ನು ಅಭಿನಯಿಸುತ್ತಿದ್ದರು. ಅವರ ನಾಟಕವನ್ನು ನೋಡಿದ್ದ ನಟ ಧೀರೇಂದ್ರ ಗೋಪಾಲ್ ಅವರು ಬೆಂಗಳೂರಿಗೆ ಬರುವಂತೆ ತಿಳಿಸಿದ್ದರು. ಆನಂತರ ಅವರ ಸಿನಿಮಾ ಪಯಣ ಶುರುವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X