ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼರಾಘುʼ ಟ್ರೈಲರ್‌

Date:

ಏಪ್ರಿಲ್‌ 28ಕ್ಕೆ ತೆರೆಗೆ ಬರಲಿದೆ ʼರಾಘುʼ ಸಿನಿಮಾ

- Advertisement -

ಏಕಪಾತ್ರ ಅಭಿನಯದ ಪ್ರಯೋಗಾತ್ಮಕ ಚಿತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಸ್ಯಾಂಡಲ್‌ವುಡ್‌ನ ಖ್ಯಾತ ನಟ ವಿಜಯ್‌ ರಾಘವೇಂದ್ರ ಅಭಿನಯದ ʼರಾಘುʼ ಸಿನಿಮಾದ ಬಹುನಿರೀಕ್ಷಿತ ಟ್ರೈಲರ್‌ ಭಾನುವಾರ ಬಿಡುಗಡೆಯಾಗಿದೆ. ವಿಜಯ್‌ ರಾಘವೇಂದ್ರ ಏಕಾಂಗಿಯಾಗಿ ನಟಿಸಿರುವ ಈ ಪ್ರಯೋಗಾತ್ಮಕ ಚಿತ್ರದ ಟ್ರೈಲರ್‌ ಸಿನಿ ರಸಿಕರಲ್ಲಿ ಕುತೂಹಲ ಹೆಚ್ಚಿಸಿದೆ.

ಎರಡು ನಿಮಿಷಗಳ ಟ್ರೈಲರ್‌ನಲ್ಲಿ ವಿಜಯ್‌ ರಾಘವೇಂದ್ರ ಏಕಾಂಗಿಯಾಗಿ ಕಾಣಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬನ ದುರಂತಮಯ ಬದುಕಿನ ಸುತ್ತ ಚಿತ್ರದ ಕಥೆಯನ್ನು ಹೆಣೆಯಾಗಿದೆ ಎಂಬುದು ಟ್ರೈಲರ್‌ನಲ್ಲಿ ಸೂಚ್ಯವಾಗಿ ತೋರಿಸಲಾಗಿದೆ. ಕ್ರೈಂ, ಸಸ್ಪೆನ್ಸ್‌, ಥ್ರಿಲ್ಲರ್‌ ಅಂಶಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ಹಿರಿಯ ನಟ ಶಿವರಾಜ್‌ ಕುಮಾರ್‌ ಕಂಠದಾನ ಮಾಡಿರುವುದು ವಿಶೇಷ.

ʼಆನʼ ಮತ್ತು ʼಬ್ಯಾಂಗ್‌ʼ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಎಂ. ಆನಂದ್‌ ರಾಜ್‌ ಈ ಚಿತ್ರಕ್ಕೆ ಆ್ಯಕ್ಷನ್ ಕಟ್‌ ಹೇಳುವ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಕ್ರೈಂ ಮತ್ತು ಥ್ರಿಲ್ಲರ್‌ ಎಳೆಯನ್ನು ಹೊಂದಿರುವ ಈ ಚಿತ್ರದಲ್ಲಿ ಪ್ರಧಾನ ಪಾತ್ರವನ್ನು ಹೊರತುಪಡಿಸಿ ಬೇರೆ ಯಾವ ಪಾತ್ರಗಳು ಇಲ್ಲ. ಇಡೀ ಚಿತ್ರದುದ್ದಕ್ಕೂ ವಿಜಯ್‌ ರಾಘವೇಂದ್ರ ಒಬ್ಬರೇ ಕಾಣಸಿಗುತ್ತಾರೆ.

ವಿಜಯ್‌ ರಾಘವೇಂದ್ರ ಮತ್ತು ಆನಂದ್‌ ರಾಜ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ರಿತ್ವಿಕ್‌ ಮುರಳಿಧರ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಡಿಕೆಎಸ್‌ ಸ್ಟುಡಿಯೋ ಮತ್ತು ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್‌ ಹೌಸ್‌ ಬ್ಯಾನರ್‌ನಡಿ ರನ್ವಿತ್‌ ಶಿವಕುಮಾರ್‌ ಹಾಗೂ ಅಭಿಷೇಕ್‌ ಚಿತ್ರವನ್ನು ನಿರ್ಮಿಸಿದ್ದಾರೆ. ಏಕಪಾತ್ರ ಅಭಿನಯದ ಈ ಚಿತ್ರ ಏಪ್ರಿಲ್‌ 28ರಂದು ತೆರೆಗೆ ಬರಲಿದೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...