ನಟ ವಿಜಯ್ ಪಕ್ಷಕ್ಕೆ ‘ಸೀಟಿ’ ಚಿಹ್ನೆ ನೀಡಿದ ಚುನಾವಣಾ ಆಯೋಗ

Date:

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷಕ್ಕೆ ಕೇಂದ್ರ ಚುನಾವಣಾ ಆಯೋಗ ಮುಂಬರುವ 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷಕ್ಕೆ ‘ಸೀಟಿ’ (Whistle) ಚಿಹ್ನೆಯನ್ನು ಅಧಿಕೃತವಾಗಿ ಹಂಚಿಕೆ ಮಾಡಿದೆ.

- Advertisement -

​ಈ ಕುರಿತು ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ಆಯೋಗವು ಪಕ್ಷಕ್ಕೆ ಸಾಮಾನ್ಯ ಚಿಹ್ನೆಯಾಗಿ ‘ಸೀಟಿ’ಯನ್ನು ಮಂಜೂರು ಮಾಡಿದೆ ಎಂದು ಖಚಿತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ತಮಿಳುನಾಡು ರಾಜಕೀಯ ಪ್ರವೇಶಿಸಿದ ನಂತರ ವಿಜಯ್ ಅವರು ತಮ್ಮ ಪಕ್ಷದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರು. ಇದೀಗ ಚಿಹ್ನೆ ಹಂಚಿಕೆಯಾಗಿದ್ದು, ಇದು ವಿಜಯ್ ಅವರ ಅಭಿಮಾನಿ ಬಳಗದಲ್ಲಿ ಹರ್ಷ ಮೂಡಿಸಿದೆ. ವಿಶೇಷವೆಂದರೆ, ವಿಜಯ್ ಅವರ ಬ್ಲಾಕ್‌ಬಸ್ಟರ್ ಚಲನಚಿತ್ರ ‘ಬಿಗಿಲ್’ (Bigil) ನಲ್ಲಿ ಅವರು ಫುಟ್‌ಬಾಲ್ ಕೋಚ್ ಪಾತ್ರವನ್ನು ನಿರ್ವಹಿಸಿದ್ದರು. ಆ ಚಿತ್ರದಲ್ಲಿ ‘ಸೀಟಿ’ ಅಥವಾ ವಿಸ್ಲ್ ಪ್ರಮುಖ ಪಾತ್ರ ವಹಿಸಿತ್ತು. ಹೀಗಾಗಿ, ಈ ಚಿಹ್ನೆಯು ಜನಸಾಮಾನ್ಯರಿಗೆ ಮತ್ತು ಅವರ ಅಭಿಮಾನಿಗಳಿಗೆ ಸುಲಭವಾಗಿ ತಲುಪಲಿದೆ ಎಂಬ ಲೆಕ್ಕಾಚಾರ ಪಕ್ಷದ್ದಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಆಡಳಿತವೇ?

‘ಸೀಟಿ’ ಚಿಹ್ನೆಯು ಕೇವಲ ಸಿನಿಮಾ ನಂಟನ್ನು ಮಾತ್ರವಲ್ಲದೆ, ರಾಜಕೀಯವಾಗಿಯೂ ಸಾಂಕೇತಿಕ ಅರ್ಥವನ್ನು ಹೊಂದಿದೆ. ಕ್ರೀಡೆಯಲ್ಲಿ ನಿಯಮ ಉಲ್ಲಂಘನೆಯಾದಾಗ ರೆಫರಿ ಶಿಳ್ಳೆ ಊದುವಂತೆ, ವ್ಯವಸ್ಥೆಯಲ್ಲಿನ ಲೋಪದೋಷ ಮತ್ತು ಭ್ರಷ್ಟಾಚಾರದ ವಿರುದ್ಧ ಎಚ್ಚರಿಸಲು ಈ ಚಿಹ್ನೆ ಸೂಕ್ತವಾಗಿದೆ ಎಂದು ಪಕ್ಷದ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

​ಇತ್ತೀಚೆಗೆ ವಿಲ್ಲುಪುರಂನ ವಿಕ್ರವಾಂಡಿಯಲ್ಲಿ ನಡೆದ ಟಿವಿಕೆ ಪಕ್ಷದ ಚೊಚ್ಚಲ ಬೃಹತ್ ರಾಜ್ಯಮಟ್ಟದ ಸಮ್ಮೇಳನದಲ್ಲಿ ವಿಜಯ್ ಅವರು ತಮ್ಮ ರಾಜಕೀಯ ಸಿದ್ಧಾಂತವನ್ನು ಸ್ಪಷ್ಟಪಡಿಸಿದ್ದರು. ದ್ರಾವಿಡ ರಾಜಕಾರಣ ಮತ್ತು ರಾಷ್ಟ್ರೀಯವಾದದ ವಿರುದ್ಧ ತಮ್ಮ ನಿಲುವನ್ನು ಅವರು ವ್ಯಕ್ತಪಡಿಸಿದ್ದರು. ಇದೀಗ ಚಿಹ್ನೆ ಲಭ್ಯವಾಗಿರುವುದರಿಂದ, 2026ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 234 ಕ್ಷೇತ್ರಗಳಲ್ಲೂ ಸ್ಪರ್ಧಿಸಲು ವಿಜಯ್ ಸಜ್ಜಾಗುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...