ಸಂಸ್ಕಾರವಾದ ಸ್ಥಳದಲ್ಲೇ ‘ವಿಷ್ಣು’ ಪುಣ್ಯಭೂಮಿ ಆಗಬೇಕು; ನಟ ಸುದೀಪ್ ಸೇರಿದಂತೆ ಅಭಿಮಾನಿಗಳ ಆಗ್ರಹ

Date:

ಕನ್ನಡ ಮೇರು ನಟ ಡಾ. ವಿಷ್ಣುವರ್ಧನ್ ಅವರ ಅಂತ್ಯ ಸಂಸ್ಕಾರವಾದ ಅಭಿಮಾನ್ ಸ್ಟುಡಿಯೋದಲ್ಲೇ ವಿಷ್ಣು ಪುಣ್ಯಭೂಮಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ವಿಷ್ಣು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಅಭಿಮಾನಿಗಳ ಪ್ರತಿಭಟನೆಗೆ ನಟ ಸುದೀಪ್ ಕೂಡ ಬೆಂಬಲ ಸೂಚಿಸಿದ್ದಾರೆ.

ಭಾನುವಾರ ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ. ಮೇರು ನಟನಿಗೆ ಪುಣ್ಯಭೂಮಿ ನಿರ್ಮಾಣ ಮಾಡಬೇಕು. ವಿಷ್ಣು ಪುಣ್ಯಭೂಮಿ ವಿಚಾರದಲ್ಲಿ ಸರ್ಕಾರದ ಮೌನ ಖಂಡನೀಯ ಎಂದು ಕಿರಿಕಾರಿದ್ದಾರೆ.

ಪ್ರತಿಭಟನೆಗೆ ಬೆಂಬಲ ನೀಡಿರುವ ನಟ ಸುದೀಪ್, “ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ” ಎಂದು ಟ್ವೀಟ್ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಲ್ಲದೆ, ಭಾನುವಾರ ಸಂಜೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕೂಡ ಸುದೀಪ್ ಭೇಟಿ ಮಾಡಿದ್ದಾರೆ. ಆದರೆ, ಅವರ ಭೇಟಿಯ ವಿಚಾರ ಏನೆಂಬುದು ತಿಳಿದುಬಂದಿಲ್ಲ. ವಿಷ್ಣು ಪುಣ್ಯಭೂಮಿಯ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಜೊತೆಗೆ, ಕೆಸಿಸಿ ಟೂರ್ನಮೆಂಟ್‌ ಉದ್ಘಾಟನೆಗೆ ಡಿಕೆ ಶಿವಕುಮಾರ್ ಅವರನ್ನ ಆಹ್ವಾನಿಸಲು ಹೋಗಿದ್ದರು ಎಂದೂ ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಪಾಕಿಸ್ತಾನ ಜಿಂದಾಬಾದ್‌ | ಮಾಧ್ಯಮಗಳ ವಿಡಿಯೋ ಎಫ್‌ಎಸ್‌ಎಲ್‌ನವರು ಪಡೆಯಲಿದ್ದಾರೆ: ಡಾ. ಜಿ.ಪರಮೇಶ್ವರ್

‌ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ...

‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ

ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್...

ಮಾಧ್ಯಮದವರಿಗೆ ಪ್ರಿಯಾಂಕ್ ಖರ್ಗೆ ಮಾರ್ಮಿಕ ಪ್ರಶ್ನೆಗಳು

ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ 'ಪಾಕಿಸ್ತಾನ್ ಜಿಂದಾಬಾದ್'...

Go back Shobha | ಕ್ಷೇತ್ರದ ಜನರಿಗೇ ಬೇಡವಾದರೇ ಶೋಭಾ ಕರಂದ್ಲಾಜೆ ? ಷಡ್ಯಂತ್ರ ಮಾಡುತ್ತಿರುವವರು ಯಾರು?

ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕಳೆದ...