ಸಮುದ್ರತೀರ, ಪಾರ್ಟಿ ಆಚೆಗಿನ ನೈಜ ಗೋವಾವನ್ನು ದೇಶದ ಮುಂದೆ ತರುತ್ತೇವೆ: ನಿರ್ದೇಶಕ ಆದಿತ್ಯ ಜಾಂಭಳೆ

Date:

ಗೋವಾ ಎಂದರೆ ತಕ್ಷಣವೇ ಕಣ್ಣಮುಂದೆ ಬರುವ ಸಮುದ್ರತೀರಗಳು, ಪ್ರವಾಸೋದ್ಯಮ ಹಾಗೂ ಪಾರ್ಟಿಗಳ ಸೀಮಿತ ಚೌಕಟ್ಟು. ಅದನ್ನು ದಾಟಿ, ಅಲ್ಲಿನ ನೈಜ ಸಾಂಸ್ಕೃತಿಕ ಪರಂಪರೆಯನ್ನು ಇಡೀ ದೇಶದ ಮುಂದೆ ಪ್ರಸ್ತುತಪಡಿಸುತ್ತೇವೆ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಆದಿತ್ಯ ಜಾಂಭಳೆ ಹೇಳಿದ್ದಾರೆ.

- Advertisement -

ಗುಜರಾತ್‌ನ ಕೆವಡಿಯಾದಲ್ಲಿ ನಡೆದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದ ವೇಳೆ ಮಾಧ್ಯಮದೊಂದಿಗೆ ಅವರು ಜಾಂಭಳೆ ಮಾತನಾಡಿದರು. “ಚತುರ್ಥಿ, ಶಿಗ್ಮೋ ಹಬ್ಬಗಳು, ದೇವಾಲಯಗಳು ಹಾಗೂ ಶ್ರದ್ಧೆಯಿಂದ ಕೂಡಿದ ಗೋವಾದ ಸಾಂಸ್ಕೃತಿಕ ಆತ್ಮವನ್ನು ತಮ್ಮ ಮುಂಬರುವ ಚಿತ್ರದ ಮೂಲಕ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬೆಳ್ಳಿತೆರೆಗೆ ತರುತ್ತೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

“ಚಲನಚಿತ್ರಗಳಲ್ಲಿ ಇದುವರೆಗೆ ಗೋವಾವನ್ನು ಪ್ರವಾಸೋದ್ಯಮದ ಕಣ್ಣಿನಿಂದ ಮಾತ್ರ ತೋರಿಸಲಾಗಿದ್ದು, ಅಲ್ಲಿನ ನೈಜ ಜನಜೀವನ ನಿರ್ಲಕ್ಷ್ಯಕ್ಕೆ ಒಳಗಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮುಂಬರುವ ತಮ್ಮ ಸಿನಿಮಾದಲ್ಲಿ ಗೋವಾ ಕೇವಲ ಚಿತ್ರೀಕರಣದ ಲೊಕೇಷನ್ ಆಗಿಷ್ಟೇ ಉಳಿಯದೆ, ಕಥೆಯ ಮೂಲ ಆಧಾರವಾಗಿರಲಿದೆ. ‘ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರದ ಮೂಲಕ ಗಮನಸೆಳೆದಿದ್ದ ಅವರು, ಈ ಹೊಸ ಯೋಜನೆಯು ಗೋವಾದ ಮಣ್ಣು, ಭಾಷೆ, ಶೈಲಿ ಮತ್ತು ಪರಂಪರೆಯನ್ನು ಒಳಗೊಂಡಿದ್ದರೂ, ಇಡೀ ಭಾರತದ ಪ್ರೇಕ್ಷಕರನ್ನು ತಲುಪುವ ಸಾರ್ವತ್ರಿಕ ಕಥಾಹೇಳಿಕೆಯನ್ನು ಹೊಂದಿರುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಸ್ಥಳೀಯ ಸಿನಿಮಾಗಳು ಕೇವಲ ಸರ್ಕಾರಿ ಆರ್ಥಿಕ ಸಹಾಯದ ಮೇಲೆ ಅವಲಂಬಿತರಾಗದೆ, ಉತ್ತಮ ಕಥೆ ಮತ್ತು ವೃತ್ತಿಪರ ನಿರ್ಮಾಣ ಗುಣಮಟ್ಟದ ಮೂಲಕ ತಮಗಾಗಿಯೇ ಸ್ವಂತ ಪ್ರೇಕ್ಷಕವರ್ಗವನ್ನು ಸೃಷ್ಟಿಸಿಕೊಳ್ಳಬೇಕು” ಎಂದಿದ್ದಾರೆ.

“ರಾಷ್ಟ್ರ ಪ್ರಶಸ್ತಿಯು ತಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ಗೋವಾ ಎಂದರೆ ಕೇವಲ ಪ್ರವಾಸೀ ತಾಣವಲ್ಲ, ಅದೊಂದು ಕಥೆಗಳನ್ನು ಹೇಳುವ ಸಮೃದ್ಧ ಭೂಮಿ ಎಂಬುದನ್ನು ಪ್ರೇಕ್ಷಕರಿಗೆ ತಲುಪಿಸುವುದು ತಮ್ಮ ಮುಖ್ಯ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ)...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...