ಕೆಜಿಎಫ್‌ 3 ಯಾವಾಗ; ಸಿನಿಮಾ ಬಗ್ಗೆ ಅಪ್‌ಡೇಟ್‌ ನೀಡಿದ ನಿರ್ಮಾಣ ಸಂಸ್ಥೆ

Date:

ಕೆಜಿಎಫ್ ಚಾಪ್ಟರ್-2 ತೆರೆಕಂಡು 3 ವರ್ಷ ಕಳೆದಿದೆ. ಇದೀಗ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌ 3ನೇ ಭಾಗದ ಬಗ್ಗೆ ಅಪ್‌ಡೇಟ್‌ ಕೊಟ್ಟಿದೆ.

- Advertisement -

ನಟ ಯಶ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೋಡಿಯ ಮೂಲಕ ಮೂಡಿಬಂದ ʻಕೆಜಿಎಫ್-1, ಕೆಜಿಎಫ್-2‌ʼ ಸರಣಿ ಸೂಪರ್ ಹಿಟ್‌ ಆಗಿದ್ದವು. ಅಲ್ಲದೆ ಗಲ್ಲಪೆಟ್ಟಿಗೆಯಲ್ಲಿ ದಾಖಲೆ ಬರೆದು ರಾಷ್ಟ್ರಮಟ್ಟದಲ್ಲಿ ಪ್ರೇಕ್ಷಕರನ್ನು ಆಕರ್ಷಿಸಿದ್ದವು. ಕೆಜಿಎಫ್‌-2 ವಿದೇಶಗಳಲ್ಲೂ ಸದ್ದು ಮಾಡಿತ್ತು, ಇದೀಗ ಈ ಸರಣಿಯ 3ನೇ ಭಾಗದ ಬಗ್ಗೆ ಉತ್ತರ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್‌ ತನ್ನ ಇನ್‌ಸ್ಟಾ ಖಾತೆಯಲ್ಲಿ ವಿಶೇಷ ಎಐ ವಿಡಿಯೋವೊಂದನ್ನ ಹಂಚಿಕೊಳ್ಳುವ ಮೂಲಕ ಸಿನಿಮಾ ಆರಂಭಿಸುವ ಸೂಚನೆ ನೀಡಿದೆ.

ವಿಡಿಯೋದಲ್ಲಿ ʻನೀವು ರಾಕಿ ಭಾಯ್ ಜೊತೆಗೆ ಮುಂದುವರಿಯಿರಿ, ಇದು ನಿಯಂತ್ರಿಸಲಾಗದ ಶಕ್ತಿʼ ಎಂದು ಬರೆದುಕೊಂಡಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಭಾಷಾ ಸಾಮರಸ್ಯ ಕದಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್

ಹೊಂಬಾಳೆ ಫಿಲ್ಮ್ಸ್‌ನ ಈ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆ ಅಭಿಮಾನಿಗಳು ಕೆಜಿಎಫ್‌-3 ಯಾವಾಗ ಬರುತ್ತೆ? ಯಶ್‌ ಅವರನ್ನು ಕೆಜಿಎಫ್‌ನಲ್ಲಿ ನೋಡುವುದು ಯಾವಾಗ ಮುಂತಾದ ಪ್ರಶ್ನೆಗಳನ್ನು ಕೇಳಿದ್ದಾರೆ.

ಸದ್ಯ ನಿರ್ದೇಶಕ ಪ್ರಶಾಂತ್‌ ನೀಲ್‌ ಕೂಡ ಜೂ. ಎನ್‌ಟಿಆರ್‌ ಜೊತೆಗಿನ ಚಿತ್ರದಲ್ಲಿ ನಿರತರಾಗಿದ್ದಾರೆ. ಇದರ ಬಳಿಕ ಅವರು ‘ಸಲಾರ್‌ 2’ ಸಿನಿಮಾ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. 2026ರಲ್ಲಿ ಸಲಾರ್ ಚಿತ್ರೀಕರಣ ಶುರುವಾದರೆ 2027ಕ್ಕೆ ಸಿನಿಮಾ ಬಿಡುಗಡೆಯಾಗಬಹುದು. ಆದ್ದರಿಂದ ‘ಕೆಜಿಎಫ್‌ 3’ ಚಿತ್ರ 2027 ಅಥವಾ 2028ರ ನಂತರ ಬರಬಹುದು ಎಂದು ಹೇಳಲಾಗುತ್ತಿದೆ. ನಟ ಯಶ್‌ ಕೂಡ ‘ಟಾಕ್ಸಿಕ್‌’ ಹಾಗೂ ‘ರಾಮಾಯಣ’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...