ರಾಷ್ಟ್ರಪತಿಗಳು ಏಕೆ ಸಂಸತ್ ಭವನ ಉದ್ಘಾಟಿಸಬಾರದು: ನಟ ಕಮಲ್‌ ಹಾಸನ್‌ ಪ್ರಶ್ನೆ

Date:

“ದೇಶದ ಹೆಮ್ಮೆಯ ಈ ಕ್ಷಣವು ರಾಜಕೀಯವಾಗಿ ವಿಭಜನೆಯಾಗಿದೆ. ನಾನು ನನ್ನ ಪ್ರಧಾನಿಯವರಿಗೆ ಒಂದು ಸರಳ ಪ್ರಶ್ನೆ ಕೇಳುತ್ತೇನೆ. ನಮ್ಮ ಹೊಸ ಸಂಸತ್ತಿನ ಉದ್ಘಾಟನೆಗೆ ಭಾರತದ ರಾಷ್ಟ್ರಪತಿಗಳು ಏಕೆ ಹಾಜರಾಗಬಾರದು ಎಂದು ದಯವಿಟ್ಟು ದೇಶಕ್ಕೆ ತಿಳಿಸಿ” ಎಂದು ನಟ ಹಾಗೂ ಮಕ್ಕಳ್ ನೀಧಿ ಮಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, ಎಲ್ಲ ರಾಜಕೀಯ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಉದ್ಘಾಟನಾ ಸಮಾರಂಭವನ್ನು ರಾಷ್ಟ್ರೀಯ ಐಕ್ಯತೆಯ ವಿಶೇಷ ಸಂದರ್ಭವನ್ನಾಗಿಸಬೇಕು ಎಂದು ಮನವಿ ಮಾಡಿದ್ದಾರೆ.

“ಪ್ರಧಾನಿಯವರು ಈ ಪ್ರಮಾದವನ್ನು ಸರಿಪಡಿಸಬೇಕು. ಇಲ್ಲದಿದ್ದರೆ, ಇದು ದೊಡ್ಡ ಪ್ರಮಾದವಾಗಿ ಇತಿಹಾಸದಲ್ಲಿ ದಾಖಲಾಗುತ್ತದೆ. ಒಂದು ವೇಳೆ ಇದನ್ನು ಸರಿಪಡಿಸಿದರೆ, ರಾಜಕೀಯ ನಾಯಕತ್ವದ ಮೈಲುಗಲ್ಲಾಗುತ್ತದೆ” ಎಂದು ತಿಳಿಸಿದ್ದಾರೆ.

ನೂತನ ಸಂಸತ್ ಭವನದಲ್ಲಿ ಎಲ್ಲ ಪಕ್ಷದ ಸದಸ್ಯರೂ ಇರಬೇಕಾಗುತ್ತದೆ ಎಂದಿರುವ ಕಮಲ್, ಅಸಮಾಧಾನಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಮತ್ತು ಹೊಸ ಸಂಸತ್ತಿನಲ್ಲಿಯೂ ಪ್ರಸ್ತಾಪಿಸಬಹುದು. ಹಾಗಾಗಿ, ಬಹಿಷ್ಕಾರ ನಿರ್ಧಾರವನ್ನು ಮರುಪರಿಶೀಲಿಸುವಂತೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುಜರಾತ್‌ | 10ನೇ ತರಗತಿ ಫಲಿತಾಂಶ; 157 ಶಾಲೆಗಳಲ್ಲಿ ಶೂನ್ಯ ಫಲಿತಾಂಶ; ಟ್ವಿಟರ್‌ನಲ್ಲಿ ಟ್ರೆಂಡಿಂಗ್

“ವಿಶ್ವದ ಕಣ್ಣು ನಮ್ಮ ದೇಶದ ಮೇಲಿದೆ. ಹಾಗಾಗಿ ನೂತನ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು ರಾಷ್ಟ್ರೀಯ ಐಕ್ಯತಾ ವಿಶೇಷ ಸಂದರ್ಭವಾಗಿಸಬೇಕಿದೆ. ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮುಂದೂಡೋಣ” ಎಂದಿದ್ದಾರೆ.

“ಈ ಐತಿಹಾಸಿಕ ಸಾಧನೆಗಾಗಿ ಭಾರತ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಸಮಾರಂಭಕ್ಕೆ ಗೌರವಾನ್ವಿತ ರಾಷ್ಟ್ರಪತಿಯವರಿಗೆ ಆಹ್ವಾನ ನೀಡದಿರುವ ಬಗ್ಗೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ವಿಪಕ್ಷಗಳು ಪಾಲ್ಗೊಳ್ಳದಿರುವ ಬಗ್ಗೆ ಅಸಮಾಧಾನ ಉಳಿಸಿಕೊಂಡು ದೇಶದ ಹಿತದೃಷ್ಟಿಯಿಂದ ನಾನು ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್, ಎಎಪಿ, ಟಿಎಂಸಿ, ಸಮಾಜವಾದಿ ಪಕ್ಷ ಸೇರಿದಂತೆ 20 ವಿರೋಧ ಪಕ್ಷಗಳು, ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದಾಗಿ ಘೋಷಿಸಿವೆ. ಹಾಗೆಯೇ ಬಿಜೆಡಿ, ಟಿಡಿಪಿ, ವೈಎಸ್‌ಆರ್‌ ಕಾಂಗ್ರೆಸ್, ಜೆಡಿಎಸ್ ಸೇರಿ ಹಲವು ಪಕ್ಷಗಳು ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಆತ ನನ್ನ ಮಗನೇ ಇರಬಹುದು, ಆತನನ್ನು ಗಲ್ಲಿಗೇರಿಸಿ’: ಅತ್ಯಾಚಾರ ಆರೋಪಿಯ ತಂದೆ

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ವಿಶೇಷಚೇತನ ಯೋಧರ ಹೊಸ ಪಿಂಚಣಿ ಯೋಜನೆ; ಮೋದಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೊಮ್ಮೆ ಬಯಲು: ಖರ್ಗೆ

ಸಶಸ್ತ್ರ ಪಡೆ ಸಿಬ್ಬಂದಿಗೆ ಹೊಸ ವಿಶೇಷಚೇತನ ಪಿಂಚಣಿ ನಿಯಮಗಳ ಕುರಿತು ಶನಿವಾರ...