ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

Date:

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ಅಮ್ಮ (AMMA – Association of Malayalam Movie Artists) ತನ್ನ ಆಡಳಿತ ಮಂಡಳಿಯಲ್ಲಿ ಪ್ರಮುಖ ಬದಲಾವಣೆ ಹಾಗೂ ಪುನರ್ರಚನೆ ಮಾಡಿದೆ. ಸಂಘಟನೆಯ ಉಪಾಧ್ಯಕ್ಷರಾಗಿ ಪ್ರಸಿದ್ಧ ನಟಿ ಆಶಾ ಅರವಿಂದ್ ಹಾಗೂ ನಟ ಸಿಜೋಯ್ ವರ್ಗೀಸ್ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಇತ್ತೀಚೆಗೆ ನಡೆದ ಸಂಘಟನೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಖಾಲಿಯಿದ್ದ ಉಪಾಧ್ಯಕ್ಷ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಇದನ್ನೂ ಓದಿ: ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ, ಸಂಪೂರ್ಣ ಸಮಿತಿ ವಿಸರ್ಜನೆ

ಹೇಮಾ ಕಮಿಟಿ ವರದಿ ಬಹಿರಂಗಗೊಂಡ ನಂತರ ಮಲಯಾಳಂ ಚಿತ್ರರಂಗದಲ್ಲಿ ಎದ್ದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಆರೋಪಗಳ ಹಿನ್ನೆಲೆಯಲ್ಲಿ ‘ಅಮ್ಮ’ ಸಂಘಟನೆಯು ತೀವ್ರ ಸಾರ್ವಜನಿಕ ಅಸಮಾಧಾನ ಎದುರಿಸಿತ್ತು. ಈ ಸಾಲು ಸಾಲು ಆರೋಪಗಳ ನಂತರ ಅಧ್ಯಕ್ಷ ಮೋಹನ್‌ಲಾಲ್ ಸೇರಿದಂತೆ ಹಿಂದಿನ ಆಡಳಿತ ಮಂಡಳಿಯ ಸದಸ್ಯರು ರಾಜೀನಾಮೆ ನೀಡಿದ್ದರು.

ಈಗ ಸಂಸ್ಥೆಯನ್ನು ಪುನಶ್ಚೇತನಗೊಳಿಸುವ ಮತ್ತು ಸಂಕಷ್ಟದಿಂದ ಹೊರತರುವ ನಿಟ್ಟಿನಲ್ಲಿ ಹೊಸ ಪದಾಧಿಕಾರಿಗಳ ನೇಮಕ ಹಾಗೂ ಕಾರ್ಯಕಾರಿ ಸಮಿತಿಯ ರಚನೆ ಪ್ರಕ್ರಿಯೆಗಳು ನಡೆಯುತ್ತಿದ್ದು, ಆಶಾ ಅರವಿಂದ್ ಮತ್ತು ಸಿಜೋಯ್ ವರ್ಗೀಸ್ ಅವರ ನೇಮಕವು ಸಂಘಟನೆಯ ಆಡಳಿತಕ್ಕೆ ಹೊಸ ಶಕ್ತಿ ತುಂಬಲಿದೆ ಎಂದು ನಿರೀಕ್ಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...