‘ಪುಷ್ಪಾ-2’ ವೀಕ್ಷಣೆ ವೇಳೆ ಮಹಿಳೆ ಸಾವು; ಕುಟುಂಬಕ್ಕೆ ನೆರವು ನೀಡುತ್ತೇವೆಂದ ಅಲ್ಲು ಅರ್ಜುನ್

Date:

ಗುರುವಾರ ಬೆಳಗ್ಗೆ ಬಿಡುಗಡೆಯಾದ ‘ಪುಷ್ಪಾ-2: ದ ರೂಲ್’ ಸಿನಿಮಾ ವೀಕ್ಷಣೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಉಂಟಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಆಕೆಯ ಮಗನ ಸ್ಥಿತಿ ಗಂಭೀರವಾಗಿದೆ. ಮೃತ ಮಹಿಳೆಯ ಕುಟುಂಬಕ್ಕೆ ನೆರವು ನೀಡುವುದಾಗಿ ಸಿನಿಮಾದ ನಾಯಕ ನಟ ಅಲ್ಲು ಅರ್ಜುನ್ ಅವರ ತಂಡ ಘೋಷಿಸಿದೆ.

- Advertisement -

ಸಂಧ್ಯಾ ಥಿಯೇಟರ್‌ಗೆ ನಟ ಅಲ್ಲು ಅರ್ಜುನ್ ಸೇರಿದಂತೆ ಚಿತ್ರತಂಡವು ಭೇಟಿ ನೀಡುತ್ತಿದೆ ಎಂಬ ಸುದ್ದಿ ತಿಳಿದು ಹೆಚ್ಚಿನ ಅಭಿಮಾನಿಗಳು ಥಿಯೇಟರ್‌ನಲ್ಲಿ ಜಮಾಯಿಸಿದ್ದರು. ಈ ವೇಳೆ, ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತದಲ್ಲಿ ರೇವತಿ (39) ಸಾವನ್ನಪ್ಪಿದ್ದಾರೆ. ಅವರ ಮಗ ಶ್ರೀತೇಜ್ (9) ಸ್ಥಿತಿಯೂ ಗಂಭೀರವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದುರಂತ ಘಟನೆಯ ಬಗ್ಗೆ ನಟ ಅಲ್ಲು ಅರ್ಜುನ್ ತಂಡ ಪ್ರತಿಕ್ರಿಯೆ ನೀಡಿದೆ. ”ದುರಂತವು ದುರದೃಷ್ಟಕರ. ಸದ್ಯ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವರ ಕುಟುಂಬಕ್ಕೆ ಅಗತ್ಯ ನೆರವು ನೀಡುತ್ತೇವೆ” ಎಂದು ಹೇಳಿದೆ.

ಬಾಲಕನ ಸ್ಥಿತಿ ಗಂಭೀರವಾಗಿದ್ದು, 78 ಗಂಟೆಗಳ ಕಾಲ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲ ಯೂಟ್ಯೂಬ್ ಚಾನೆಲ್‌ಗಳು ಬಾಲಕ ಕೂಡ ಮೃತಪಟ್ಟಿದ್ದಾನೆಂದು ಸುದ್ದಿ ಬಿತ್ತರಿಸುತ್ತಿವೆ. ಇಂತಹ ಸುಳ್ಳು ಸುದ್ದಿಗಳನ್ನು ಬಿತ್ತರಿಸದಂತೆ ಅಲ್ಲು ಅರ್ಜುನ್ ತಂಡ ಮನವಿ ಮಾಡಿದೆ.

‘ಪುಷ್ಪಾ-2’ ಸಿನಿಮಾ ನಿರ್ಮಿಸಿರುವ ಸಂಸ್ಥೆ ಮೈತ್ರಿ ಮೂವೀಸ್‌ ಕೂಡ ಪ್ರತಿಕ್ರಿಯಿಸಿದ್ದು, ”ದುರಂತ ಘಟನೆಯಿಂದ ನಮಗೆ ತೀವ್ರ ದುಃಖವಾಗಿದೆ. ಆ ಕುಟುಂಬ ಮತ್ತು ಚಿಕಿತ್ಸೆಗೊಳಗಾಗಿರುವ ಚಿಕ್ಕ ಮಗುವಿಗಾಗಿ ನಾವು ಪ್ರಾರ್ಥಿಸುತ್ತೇವೆ. ಈ ಕಠಿಣ ಸಂದರ್ಭ ಅವರೊಂದಿಗೆ ನಿಲ್ಲುತ್ತೇವೆ. ಸಾಧ್ಯವಿರುವ ಎಲ್ಲ ಬೆಂಬಲ ಒದಗಿಸುತ್ತೇವೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...