ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗ ದೂರು

Date:

ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದ ಆರೋಪದ ಮೇರೆಗೆ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದೆ.

- Advertisement -

ನಟಿ ರಮ್ಯಾ ಅವರು ದರ್ಶನ್ ಅಭಿಮಾನಿಗಳ ಬಗ್ಗೆ ಪೋಸ್ಟ್ ಮಾಡಿದ ವಿಚಾರ ಕಳೆದ ಕೆಲ ದಿನಗಳಿಂದ ಸುದ್ದಿಯಾಗುತ್ತಿದೆ. ಇತ್ತೀಚೆಗೆ ರಮ್ಯಾ ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ನಟಿ ರಮ್ಯಾ ಪೋಸ್ಟ್​ ಶೇರ್ ಮಾಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಪೋಸ್ಟ್‌ ಬಳಿಕ ನಟಿ ವಿರುದ್ಧ ಡಿಬಾಸ್‌ ಫ್ಯಾನ್ಸ್‌ಗಳು ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದ್ದರು. ಇದಾದ ಬಳಿಕ ನಟಿ ರಮ್ಯಾ ರೇಣುಕಸ್ವಾಮಿ ಮೆಸೇಜ್‌ಗೂ, ದರ್ಶನ್‌ ಫ್ಯಾನ್ಸ್‌ ಮೆಸೇಜ್‌ಗೂ ಯಾವುದೇ ವ್ಯತ್ಯಾಸವಿಲ್ಲವೆಂದು ಪೋಸ್ಟ್‌ ಮಾಡಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

ರಮ್ಯಾ ವಿರುದ್ಧ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ ರಾಜ್ಯ ಮಹಿಳಾ ಆಯೋಗ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದೆ. ಮಾಜಿ ಸಂಸದೆ ಹಾಗೂ ಚಲನಚಿತ್ರ ನಟ ರಮ್ಯಾ ಅವರ ವಿರುದ್ಧ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ನೀಡಿರುವ ಬಗ್ಗೆ ವರದಿಯಾಗಿರುತ್ತದೆ. ಇದರಿಂದ ಮಹಿಳೆಯ ಸ್ಥಾನಮಾನಕ್ಕೆ ತೊಂದರೆಯಾಗುತ್ತಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿರುತ್ತದೆ.

ಆದ್ದರಿಂದ ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಿ, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದೆ
ಮಹಿಳಾ ಆಯೋಗದ ಈ ಪತ್ರವನ್ನು ನಟಿ ರಮ್ಯಾ ಹಂಚಿಕೊಂಡಿದ್ದಾರೆ.

ರಮ್ಯಾ ವಿರುದ್ಧ ವಿಜಯಲಕ್ಷ್ಮಿ ಪೋಸ್ಟ್‌

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು ರಮ್ಯಾ ಅವರನ್ನು ಉದ್ದೇಶಿಸಿಯೇ ವಿಜಯಲಕ್ಷ್ಮಿ ಈ ಪೋಸ್ಟ್ ಹಾಕಿದ್ದಾರೆ ಎಂದು ಪರ–ವಿರೋಧಿಗಳು ಚರ್ಚಿಸುತ್ತಿದ್ದಾರೆ.

‘ಮೂರ್ಖ ತನ್ನ ಮಾತುಗಳಿಂದ ಎಲ್ಲರಿಗೂ ಪರಿಚಯನಾಗುತ್ತಿರುತ್ತಾನೆ. ಜಾಣ ಯಾವಾಗಲೂ ಮೌನಿ ಆಗಿರುತ್ತಾನೆ’ ಎಂದು ಬುದ್ಧನ ಚಿತ್ರವಿರುವ ಫೋಟೊವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್‌ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿತ್ತು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದ ರಮ್ಯಾ, ದೇಶದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಭರವಸೆಯ ಬೆಳಕು. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ಪೋಸ್ಟ್‌ ಮಾಡಿದ್ದರು.

ಅಂದಿನಿಂದ (ಜುಲೈ 24) ರಮ್ಯಾ ಹಾಗೂ ದರ್ಶನ್‌ ಫ್ಯಾನ್ಸ್‌ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ ನಡೆಯುತ್ತಿದೆ. ಶನಿವಾರ (ಜುಲೈ 26) ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದ ರಮ್ಯಾ, ‘ದರ್ಶನ್ ಅಭಿಮಾನಿಗಳಿಗೆ ನನ್ನ ಇನ್​ಸ್ಟಾಗ್ರಾಮ್‌ಗೆ ಸ್ವಾಗತ. ರೇಣುಕಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಮೆಂಟ್‌ಗಳೇ ಸಾಕ್ಷಿ’ ಎಂದಿದ್ದರು.

ಇದಕ್ಕೆ ದರ್ಶನ್‌ ಅಭಿಮಾನಿಗಳು ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಇನ್​ಸ್ಟಾಗ್ರಾಮ್‌ನಲ್ಲಿ ಸಂದೇಶ ಹಂಚಿಕೊಂಡಿರುವ ರಮ್ಯಾ, ‘ರೇಣುಕಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀದ್ವೇಷದ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ’ ಎಂದಿದ್ದಾರೆ.

ಅದರ ಜೊತೆಗೆ ದರ್ಶನ್ ಅಭಿಮಾನಿಗಳು ಅವರಿಗೆ ಮಾಡಿರುವ ಅಶ್ಲೀಲ ಸಂದೇಶಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...