ಕನ್ನಡ ತಮಿಳಿನಿಂದ ಹುಟ್ಟಿದೆ ಹೇಳಿಕೆ: ತಪ್ಪಾಗಿದ್ದರೆ ಮಾತ್ರ ಕ್ಷಮೆ ಕೇಳುವೆ ಎಂದ ಕಮಲ್ ಹಾಸನ್

Date:

ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ತನ್ನ ಹೇಳಿಕೆಗೆ ಕ್ಷಮೆಯಾಚಿಸಲು ತಮಿಳು ನಟ ಕಮಲ್ ಹಾಸನ್ ನಿರಾಕರಿಸಿದ್ದಾರೆ. “ನಾನು ನೀಡಿದ ಹೇಳಿಕೆ ತಪ್ಪಾಗಿದ್ದರೆ ಮಾತ್ರ ಕ್ಷಮೆ ಕೇಳುವೆ. ತಪ್ಪಲ್ಲದಿದ್ದರೆ, ತಪ್ಪೆನಿಸದಿದ್ದರೆ ನಾನು ಕ್ಷಮೆ ಕೇಳಲ್ಲ” ಎಂದು ಶುಕ್ರವಾರ ಕಮಲ್ ಹಾಸನ್ ಹೇಳಿದ್ದಾರೆ.

- Advertisement -

ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್‌ನ ಪ್ರಚಾರ ಕಾರ್ಯಕ್ರಮದ ಸಂದರ್ಭದಲ್ಲಿ ಕನ್ನಡದ ಹುಟ್ಟಿನ ಬಗ್ಗೆ ಕಮಲ್ ಹಾಸನ್ ನೀಡಿದ ಹೇಳಿಕೆಯು ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷಮೆಯಾಚಿಸದಿದ್ದರೆ ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ಚಿತ್ರಗಳನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಕನ್ನಡ ತಮಿಳಿನಿಂದ ಹುಟ್ಟಿದೆ: ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮಲ್ ಹಾಸನ್, “ಈ ಹಿಂದೆಯೂ ನಾನು ಇಂತಹ ಬೆದರಿಕೆಗಳನ್ನು ಕಂಡಿದ್ದೇನೆ. ಯಾವುದೇ ಮುಜುಗರಕ್ಕೆ ಒಳಗಾಗಿಲ್ಲ. ಪ್ರೀತಿ ಯಾವಾಗಲೂ ಗೆಲ್ಲುತ್ತದೆ. ಈ ವಿಚಾರದಲ್ಲಿ ಅಜೆಂಡಾ ಹೊಂದಿರುವವರು ಮಾತ್ರ ಅನುಮಾನ ಹೊಂದಿರುತ್ತಾರೆ” ಎಂದು ಹೇಳಿದ್ದಾರೆ.

ಮುಂದಿನ ತಿಂಗಳು ಆಡಳಿತಾರೂಢ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಪ್ರವೇಶಿಸುವ ನಿರೀಕ್ಷೆಯಿರುವ ಮಕ್ಕಳ್ ನೀಧಿ ಮೈಯಂ(ಎಂಎನ್‌ಎಂ) ಮುಖ್ಯಸ್ಥ, ನಟ ಈ ಮೂಲಕ ತನ್ನ ಹೇಳಿಕೆಯ ಸಮರ್ಥನೆಗೆ ಇಳಿದಿದ್ದಾರೆ.

“ದಕ್ಷಿಣದ ಎಲ್ಲಾ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ಗೌರವಿಸುವ ನಾನು, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ತಪ್ಪು ಮಾಡಿದ್ದೇನೆ ಎಂದು ಮನವರಿಕೆಯಾದರೆ ಮಾತ್ರ ಕ್ಷಮೆಯಾಚಿಸುತ್ತೇನೆ. ನನ್ನ ಹೇಳಿಕೆ ತಪ್ಪಾಗದಿದ್ದರೆ ನಾನು ಕ್ಷಮೆಯಾಚಿಸುವುದಿಲ್ಲ. ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ” ಎಂದು ಹೇಳಿದರು.

ಕಮಲ್ ಹಾಸನ್ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ. ಕಮಲ್ ಹಾಸನ್ ಸಿನಿಮಾಗಳನ್ನು ಬಹಿಷ್ಕರಿಸುವಂತೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...