ದೇಶದಲ್ಲಿ ಒಂದೇ ದಿನ 4,435 ಮಂದಿಗೆ ಕೋವಿಡ್ ದೃಢ

Date:

  • ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,411ಕ್ಕೆ ಏರಿಕೆ
  • ಮಹಾರಾಷ್ಟ್ರದಲ್ಲಿ ಕೋವಿಡ್‌ನಿಂದಾಗಿ ನಾಲ್ವರು ಸಾವು

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 4,435 ಕೋವಿಡ್‌ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ 1,411 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕಳವಳ ವ್ಯಕ್ತಪಡಿಸಿದೆ.

“ದಿನದಿಂದ ದಿನಕ್ಕೆ ಕೊರೊನಾ ಸೋಂಕು ಸೇರಿದಂತೆ ಮತ್ತಿತ್ತರ ವೈರಲ್ ಸೋಂಕುಗಳು ಏರಿಕೆಯಾಗುತ್ತಿರುವ ಕಾರಣ ವೃದ್ಧರಿಗೆ, ಆಸ್ಪತ್ರೆ ಸಿಬ್ಬಂದಿಗಳಿಗೆ ಮಾಸ್ಕ್‌ ಕಡ್ಡಾಯ ಮಾಡಲಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಇನ್ನೂ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿಂದೆ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದ ಕಾರಣ ಮೂರು ಸಾವಿರ ಕೋವಿಡ್ ಪರೀಕ್ಷೆ ಮಾಡಲಾಗುತ್ತಿತ್ತು. ಈಗ ಹತ್ತು ಸಾವಿರ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ” ಎಂದು ಈ ದಿನ.ಕಾಮ್‌ಗೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್ ಡಿ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೊಡವೆ ಮುಕ್ತಗೊಳಿಸುತ್ತೇವೆಂದು ಮತ್ತಷ್ಟು ಫಜೀತಿ; ಕ್ಲಿನಿಕ್‌ಗೆ ಡಬಲ್‌ ದಂಡ

ಇಲ್ಲಿಯವರೆಗೂ ದಾಖಲಾಗಿರುವ ಹೊಸ ಪ್ರಕರಣಗಳ ಸಂಖ್ಯೆ ಕಳೆದ ಆರು ತಿಂಗಳಲ್ಲೇ ಅಧಿಕವಾಗಿದೆ. 2022 ಸೆಪ್ಟೆಂಬರ್‌ 25ರಂದು ದಾಖಲಾದ 4,777 ಕೋವಿಡ್ ಪ್ರಕರಣಗಳು ಇಲ್ಲಿವರೆಗಿನ ಅತ್ಯಧಿಕ ಸಂಖ್ಯೆಯಾಗಿತ್ತು.

ದೇಶದಾದ್ಯಂತ ಸೇರಿ ಒಟ್ಟು ದಾಖಲಾದ ಸೋಂಕಿತರ ಸಂಖ್ಯೆ 4.47 ಕೋಟಿಗೆ (4,47,33,719) ಏರಿಕೆಯಾಗಿದೆ. ಆ ಪೈಕಿ 5,30,916 ಮಂದಿ ಸಾವಿಗೀಡಾಗಿದ್ದಾರೆ. ಕೋವಿಡ್‌ನಿಂದಾಗಿ ಮಂಗಳವಾರ ಮಹಾರಾಷ್ಟ್ರದಲ್ಲಿ ನಾಲ್ವರು ಮೃತಪಟ್ಟಿದ್ದರೆ, ದೆಹಲಿ, ಗುಜರಾತ್, ಕರ್ನಾಟಕ, ಪುದುಚೇರಿ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,091ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇ 3.38 ರಷ್ಟಿದ್ದರೆ, ಚೇತರಿಕೆ ಪ್ರಮಾಣ ಶೇ 98.76 ರಷ್ಟಿದೆ. ಉಳಿದಂತೆ ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ದೇಶದಾದ್ಯಂತ ಇದುವರೆಗೆ 220.66 ಕೋಟಿ ಕೋವಿಡ್‌ ಲಸಿಕೆ ನೀಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಾರಾಷ್ಟ್ರೀಯ ದಾದಿಯರ ದಿನ | ‘ನರ್ಸ್’ ಎಂಬುದು ಹುದ್ದೆಯಲ್ಲ, ಅದೊಂದು ಸೇವೆ

ಜನರ ಪುನರ್ವಸತಿ ಮತ್ತು ಯೋಗಕ್ಷೇಮದಲ್ಲಿ ದಾದಿಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಎಲೆಮರೆ...

ರೋಗಿಗಳಿಗಿಲ್ಲ ವ್ಯವಸ್ಥಿತ ಚಿಕಿತ್ಸೆ; ವೈದ್ಯರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

'ಕರ್ತವ್ಯ ನಿರ್ವಹಿಸದ ವೈದ್ಯಾಧಿಕಾರಿ-ಸಿಬ್ಬಂದಿಗಳ ಮೇಲೆ ಕ್ರಮ' ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳ ಸಾವು;...

ಸುದ್ದಿವಿವರ | ಸೊಳ್ಳೆಬತ್ತಿಯ ಹೊಗೆ ತಂಬಾಕಿನಷ್ಟೇ ಹಾನಿಕಾರಕ!

ಅಕಾಲಿಕವಾಗಿ ಸುರಿದ ಮಳೆಯಿಂದ ಸೊಳ್ಳೆಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಅವುಗಳ ಕಾಟವೂ ಹೆಚ್ಚಾಗಿದೆ....

ತಾಯಿ, ಮಗು ಸಾವು ಸೂಚ್ಯಂಕ; 10 ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

2020ರಲ್ಲಿ ಭಾರತದಲ್ಲಿ ಗರ್ಭಾವಸ್ಥೆ ಮತ್ತಿತ್ತರ ಕಾರಣದಿಂದ 7,88,000 ಸಾವು ತಾಯಂದಿರ ಮತ್ತು ನವಜಾತ...