ದೇಶದಲ್ಲಿ ಒಂದೇ ದಿನ 4,435 ಮಂದಿಗೆ ಕೋವಿಡ್ ದೃಢ

Date:

  • ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,411ಕ್ಕೆ ಏರಿಕೆ
  • ಮಹಾರಾಷ್ಟ್ರದಲ್ಲಿ ಕೋವಿಡ್‌ನಿಂದಾಗಿ ನಾಲ್ವರು ಸಾವು

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 4,435 ಕೋವಿಡ್‌ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ 1,411 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕಳವಳ ವ್ಯಕ್ತಪಡಿಸಿದೆ.

“ದಿನದಿಂದ ದಿನಕ್ಕೆ ಕೊರೊನಾ ಸೋಂಕು ಸೇರಿದಂತೆ ಮತ್ತಿತ್ತರ ವೈರಲ್ ಸೋಂಕುಗಳು ಏರಿಕೆಯಾಗುತ್ತಿರುವ ಕಾರಣ ವೃದ್ಧರಿಗೆ, ಆಸ್ಪತ್ರೆ ಸಿಬ್ಬಂದಿಗಳಿಗೆ ಮಾಸ್ಕ್‌ ಕಡ್ಡಾಯ ಮಾಡಲಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಇನ್ನೂ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿಂದೆ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದ ಕಾರಣ ಮೂರು ಸಾವಿರ ಕೋವಿಡ್ ಪರೀಕ್ಷೆ ಮಾಡಲಾಗುತ್ತಿತ್ತು. ಈಗ ಹತ್ತು ಸಾವಿರ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ” ಎಂದು ಈ ದಿನ.ಕಾಮ್‌ಗೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್ ಡಿ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೊಡವೆ ಮುಕ್ತಗೊಳಿಸುತ್ತೇವೆಂದು ಮತ್ತಷ್ಟು ಫಜೀತಿ; ಕ್ಲಿನಿಕ್‌ಗೆ ಡಬಲ್‌ ದಂಡ

ಇಲ್ಲಿಯವರೆಗೂ ದಾಖಲಾಗಿರುವ ಹೊಸ ಪ್ರಕರಣಗಳ ಸಂಖ್ಯೆ ಕಳೆದ ಆರು ತಿಂಗಳಲ್ಲೇ ಅಧಿಕವಾಗಿದೆ. 2022 ಸೆಪ್ಟೆಂಬರ್‌ 25ರಂದು ದಾಖಲಾದ 4,777 ಕೋವಿಡ್ ಪ್ರಕರಣಗಳು ಇಲ್ಲಿವರೆಗಿನ ಅತ್ಯಧಿಕ ಸಂಖ್ಯೆಯಾಗಿತ್ತು.

ದೇಶದಾದ್ಯಂತ ಸೇರಿ ಒಟ್ಟು ದಾಖಲಾದ ಸೋಂಕಿತರ ಸಂಖ್ಯೆ 4.47 ಕೋಟಿಗೆ (4,47,33,719) ಏರಿಕೆಯಾಗಿದೆ. ಆ ಪೈಕಿ 5,30,916 ಮಂದಿ ಸಾವಿಗೀಡಾಗಿದ್ದಾರೆ. ಕೋವಿಡ್‌ನಿಂದಾಗಿ ಮಂಗಳವಾರ ಮಹಾರಾಷ್ಟ್ರದಲ್ಲಿ ನಾಲ್ವರು ಮೃತಪಟ್ಟಿದ್ದರೆ, ದೆಹಲಿ, ಗುಜರಾತ್, ಕರ್ನಾಟಕ, ಪುದುಚೇರಿ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,091ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇ 3.38 ರಷ್ಟಿದ್ದರೆ, ಚೇತರಿಕೆ ಪ್ರಮಾಣ ಶೇ 98.76 ರಷ್ಟಿದೆ. ಉಳಿದಂತೆ ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ದೇಶದಾದ್ಯಂತ ಇದುವರೆಗೆ 220.66 ಕೋಟಿ ಕೋವಿಡ್‌ ಲಸಿಕೆ ನೀಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ : ರೋಗದ ಲಕ್ಷಣ, ಮುಂಜಾಗೃತಾ ಕ್ರಮಗಳೇನು? ಇಲ್ಲಿದೆ ನೋಡಿ…

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ, ಚಿಕನ್‌ಗುನ್ಯಾ, ಮಲೇರಿಯಾ ಸಾಂಕ್ರಾಮಿಕ ರೋಗಗಳ...

ನಿಫಾ ವೈರಸ್ | ಸೋಂಕಿತ ಪ್ರದೇಶಗಳಲ್ಲಿ ಅನಗತ್ಯ ಓಡಾಡದೆ ಎಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ

ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ ಪ್ರಕರಣಗಳು ಕಂಡು ಬರುತ್ತಿವೆ. ಇಬ್ಬರು ವೈರಸ್‌ನಿಂದ...

ಕೇರಳ: ಕೋಝಿಕ್ಕೋಡ್‌ನಲ್ಲಿ ಮತ್ತೊಂದು ನಿಫಾ ವೈರಸ್ ಸೋಂಕು ದೃಢ

ಕೇರಳದ ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ಸೋಂಕು ಪತ್ತೆಯಾಗಿದೆ ಎಂದು ಸರ್ಕಾರ...

ನಿಫಾ ವೈರಸ್ | ಸೋಂಕಿತ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ; ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆಯೇ...