108 ಆ್ಯಂಬುಲೆನ್ಸ್‌ ತುರ್ತುಸೇವೆಗಳ ಸಂಪೂರ್ಣ ನಿರ್ವಹಣೆ ಸರ್ಕಾರದ ಸುಪರ್ದಿಗೆ

Date:

2026ರ ಫೆಬ್ರವರಿ ವೇಳೆಗೆ 108 ಆ್ಯಂಬುಲೆನ್ಸ್‌ ತುರ್ತುಸೇವೆಗಳ ಸಂಪೂರ್ಣ ನಿಯಂತ್ರಣ, ನಿರ್ವಹಣೆಯನ್ನು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಸಜ್ಜಾಗಿದೆ. ತುರ್ತುಸೇವೆಗಳನ್ನು ಇಲಾಖೆಯೇ ನಿಭಾಯಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

- Advertisement -

108 ತುರ್ತುಸೇವೆಗಳ ದಕ್ಷತೆ ಮೇಲೆ ಗಮನವನ್ನು ಕೇಂದ್ರೀಕರಿಸಲಾಗುತ್ತಿದೆ. ಆ್ಯಂಬುಲೆನ್ಸ್‌ಗಾಗಿ ತುರ್ತು ವೈದ್ಯಕೀಯ ತಂತ್ರಜ್ಞರನ್ನು (ಇಎಂಟಿ) ನೇಮಿಸಿಕೊಳ್ಳಲು ಇಲಾಖೆಯು ಸ್ಪರ್ಧಾ ಪರೀಕ್ಷೆ ನಡೆಸಲು ಯೋಜಿಸುತ್ತಿದೆ. ಈ ತಂತ್ರಜ್ಞರು ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಆ್ಯಂಬುಲೆನ್ಸ್‌ನಲ್ಲಿ ಇರುತ್ತಾರೆ. ರೋಗಿಗಳಿಗೆ ಅಗತ್ಯ ಪ್ರಥಮ ಚಿಕಿತ್ಸೆ ಮತ್ತು ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಾರೆ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ದೇಶದಲ್ಲಿ ಮೊದಲ ಬಾರಿಗೆ ಇಂತಹ ಕ್ರಮವನ್ನು ಕೈಗೊಳ್ಳಲಾಗುತ್ತಿದೆ, ತುರ್ತು ಸೇವೆಗಳಲ್ಲಿ ಯಾವುದೇ ರಾಜಿ ಇರುವುದಿಲ್ಲ. ಸಕಾಲಕ್ಕೆ ಉತ್ತಮ ಸೇವೆ ದೊರೆಯುತ್ತದೆ ಎಂಬುದನ್ನು ನಾವು ಖಾತ್ರಿಪಡಿಸುತ್ತೇವೆ. ಉತ್ತಮ ಕಾರ್ಯನಿರ್ವಹಣೆಗಾಗಿ ಆರೋಗ್ಯ ಇಲಾಖೆಯು ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಹೊಸ 175 ಆ್ಯಂಬುಲೆನ್ಸ್‌ಗಳನ್ನು ಖರೀದಿಸಲಿದೆ” ಎಂದು ಗುಂಡೂರಾವ್ ಹೇಳಿದ್ದಾರೆ.

“2018ರಲ್ಲಿ ಖರೀದಿಸಲಾಗಿದ್ದ ಆ್ಯಂಬುಲೆನ್ಸ್‌ಗಳ ಸೇವೆಯು ಸ್ಥಗಿತಗೊಳ್ಳುತ್ತಿವೆ. ಆದ್ದರಿಂದ, ತುರ್ತುಸೇವೆಗಳಲ್ಲಿ ತೊಡಕು ಉಂಟಾಗದಂತೆ ನೋಡಿಕೊಳ್ಳಲು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಲು ಹೊಸ ಆ್ಯಂಬುಲೆನ್ಸ್‌ಗಳನ್ನು ಖರೀದಿಸುತ್ತೇವೆ” ತುರ್ತು ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕ ಡಾ. ಪ್ರಭುದೇವ ಗೌಡ ಹೇಳಿದ್ದಾರೆ.

“ಹೊಸ ಆ್ಯಂಬುಲೆನ್ಸ್‌ಗಳು ಮೊಬೈಲ್ ಡೇಟಾ ಟರ್ಮಿನಲ್ಅನ್ನು ಹೊಂದಿರುತ್ತವೆ. ಇದರಿಂದ ತಂತ್ರಜ್ಞರು ಮತ್ತು ಚಾಲಕರು ರೋಗಿಗಳು ಮತ್ತು ಹತ್ತಿರದ ಆಸ್ಪತ್ರೆಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...