ಔಷಧಿಗಳ ಬೆಲೆ ಶೇ.6.73ರಷ್ಟು ಕಡಿಮೆ: ಮನ್ಸುಖ್ ಮಾಂಡವೀಯ

Date:

  • ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ; ಟೀಕೆ
  • ಏ.1ರಿಂದ ಅಗತ್ಯ ಔಷಧಿಗಳ ಬೆಲೆ ಏರಿಕೆ – ಬಡವರಿಗೆ ಮತ್ತೊಂದು ಹೊರೆ

850 ಅನುಸೂಚಿತ ಔಷಧಿಗಳಲ್ಲಿ 650 ಔಷಧಿಗಳ ದರ ಸರಾಸರಿ ಶೇ.6.73ರಷ್ಟು ಕಡಿಮೆಯಾಗಿವೆ ಎಂದು ರಾಷ್ಟ್ರೀಯ ಔಷಧಿಗಳ ದರ ನಿಗದಿ ಪ್ರಾಧಿಕಾರ (ಎನ್‌ಪಿಪಿಎ) ಹೇಳಿದೆ.

- Advertisement -

ಈ ಬಗ್ಗೆ ಟ್ವೀಟ್‌ ಮಾಡಿರುವ ಎನ್‌ಪಿಪಿಎ, “ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯಲ್ಲಿರುವ (ಎನ್‌ಎಲ್‌ಇಎಂ) 870 ಅನುಸೂಚಿತ ಔಷಧಿಗಳ ಪೈಕಿ, ಈವರೆಗೆ 651 ಔಷಧಿಗಳ ಗರಿಷ್ಠ ದರಗಳ ಮೇಲೆ ಮಿತಿ ಹೇರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ” ಎಂದೂ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಎನ್‌ಎಲ್‌ಇಎಂ ಅನ್ನು ತಿದ್ದುಪಡಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೇಂದ್ರ ಸರ್ಕಾರವು ದರ ಹೆಚ್ಚಳಕ್ಕೆ ಸಂಬಂಧಿಸಿ, ಮಿತಿ ಹೇರಿದ್ದರಿಂದಾಗಿ ಅವುಗಳ ಬೆಲೆ ಏಪ್ರಿಲ್‌ 1ರಿಂದ ಶೇ.6.73ರಷ್ಟು ಕಡಿಮೆಯಾಗಿವೆ ಎಂದು ಎನ್‌ಪಿಪಿಎ ಹೇಳಿದೆ.

ಸಗಟು ದರ ಸೂಚ್ಯಂಕದ (ಡಬ್ಲ್ಯುಪಿಐ) ಆಧಾರದ ಮೇಲೆ ಔಷಧಿಗಳ ದರಗಳಲ್ಲಿ ವಾರ್ಷಿಕ ಶೇ.12.12ರಷ್ಟು ಹೆಚ್ಚಳವಾಗಬೇಕಿತ್ತು. ಆದರೆ, ದರಗಳಲ್ಲಿನ ಈ ಕಡಿತದಿಂದಾಗಿ ಗ್ರಾಹಕರಿಗೆ ಲಾಭವಾಗಲಿದೆ ಎಂದು ಎನ್‌ಪಿಪಿಎ ಹೇಳಿಕೊಂಡಿದೆ.

ಕಳೆದ ಮಾ. 25 ರಂದು ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದ ಎನ್‌ಪಿಪಿಎ, 2022ಕ್ಕೆ ಸಂಬಂಧಿಸಿ ಸಗಟು ದರ ಸೂಚ್ಯಂಕವು (ಡಬ್ಲ್ಯುಪಿಐ) ಶೇ.12.12ರಷ್ಟಿತ್ತು ಎಂದು ಹೇಳಿತ್ತು.

ಈ ಸುದ್ದಿ ಓದಿದ್ದೀರಾ?: ಆರೋಗ್ಯ ಹಕ್ಕು ಮಸೂದೆ ವಿರುದ್ಧ ರಾಜಸ್ಥಾನದ ವೈದ್ಯರೇಕೆ ತಿರುಗಿ ಬಿದ್ದಿದ್ದಾರೆ?

ಏ.1ರಿಂದ ಅಗತ್ಯ ಔಷಧಿಗಳ ಬೆಲೆ ಏರಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, “ಇತ್ತೀಚೆಗೆ ಅಗತ್ಯ ಔಷಧಿಗಳ ದರ ಏರಿಕೆಯ ಬಗ್ಗೆ ಮಾತನಾಡಿದ ಅವರು ಮೋದಿ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುವಂತಹ ಕೆಲಸ ಮಾಡುತ್ತಿದೆ” ಎಂದು ಟೀಕೆ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಸಮರ್ಥನೆಯ ನೀಡಿದ್ದು, “651 ಅಗತ್ಯ ಔಷಧಿಗಳ ಬೆಲೆ ಏಪ್ರಿಲ್‌ನಿಂದ ಸರಾಸರಿ ಶೇ.6.73 ರಷ್ಟು ಕಡಿಮೆಯಾಗಿದೆ. ಎನ್‌ಎಲ್‌ಇಎಂನಲ್ಲಿರುವ ಔಷಧಿಗಳ ಪೈಕಿ 651 ಅಗತ್ಯ ಔಷಧಿಗಳು ಅಗ್ಗವಾಗಿದ್ದು, ಈ ಸಂಬಂಧ ಅಧಿಸೂಚನೆಯನ್ನು ಸಹ ಹೊರಡಿಸಲಾಗಿದೆ. ಈ ಕ್ರಮದಿಂದಾಗಿ, ಗ್ರಾಹಕರ ಜೇಬಿಗೆ ಹೊರೆ ಕಡಿಮೆಯಾಗಿ, ವಾರ್ಷಿಕ ಅಂದಾಜು ₹3,500 ಕೋಟಿಯಷ್ಟು ಉಳಿತಾಯವಾಗಲಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭವಿಷ್ಯದ ʼಸೂಪರ್‌ ಆಂಟಿಜೆನ್‌ʼ; ಇದು AI ರೂಪಿಸಿದ ವಿಶ್ವದ ಮೊದಲ ಲಸಿಕೆ!

ಜಗತ್ತನ್ನು ಕಾಡಬಹುದಾದ ಭವಿಷ್ಯದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮತ್ತು ವ್ಯಾಪಕ ಶ್ರೇಣಿಯ...

ಜೀವನ ಶೈಲಿ ಬದಲಿಸಿ, ಹೃದಯಾಘಾತ ತಪ್ಪಿಸಿ

ಗೊತ್ತಿರಲಿ, ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ರಕ್ತನಾಳಗಳಲ್ಲಿ ಉರಿಯೂತ ಉಂಟಾಗುತ್ತದೆ. ಹಾಗೆಯೇ...

ರಾಜ್ಯದ ಮಹಿಳೆಯರಲ್ಲಿ ಹೆಚ್ಚುತ್ತಿದೆ ಬೊಜ್ಜು: NFHS ವರದಿ

ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರಲ್ಲಿ ಬೊಜ್ಜಿನ ಪ್ರಮಾಣ ತೀವ್ರವಾಗಿ ಹೆಚ್ಚಾಗಿದೆ....