ಕೋವಿಡ್‌ ಹಗರಣ | ಮೂವರು ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ನ್ಯಾ. ಡಿ ಕುನ್ಹಾ ಸಮಿತಿ ಶಿಫಾರಸ್ಸು

Date:

ಕರೋನಾ ಸಮಯದಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಕೋವಿಡ್‌ ಹಗರಣ ತನಿಖೆ ನಡೆಸಿರುವ ನ್ಯಾಯಮೂರ್ತಿ ಮೈಖೇಲ್‌ ಡಿ ಕುನ್ಹಾ ಸಮಿತಿಯು, ಅಕ್ರಮ ನಡೆಸಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಉನ್ನತ ಅಧಿಕಾರಿಗಳು ಹಾಗೂ ಬೆಂಗಳೂರು ಗ್ರಾಮಾಂತರ, ಗದಗ, ಕೊಪ್ಪಳ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಶಿಫಾರಸು ಮಾಡಿದೆ.

- Advertisement -

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರಿಸುಮಾರು 2,000 ಕೋಟಿ ರೂ. ಕೋವಿಡ್ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಆರೋಪಿತ ಹಗರಣದ ತನಿಖೆಗಾಗಿ ಹಾಲಿ ಕಾಂಗ್ರೆಸ್‌ ಸರ್ಕಾರವು 2023ರಲ್ಲಿ ಡಿ. ಕುನ್ಹಾ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಸಮಿತಿಯು ಇತ್ತೀಚೆಗೆ ತನ್ನ 2ನೇ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ವರದಿಯ ಕೆಲ ಅಂಶಗಳು ಬಹಿರಂಗಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಬಹಿರಂಗವಾದ ವರದಿಯ ಅಂಶಗಳು ವಿವರಿಸುವಂತೆ, ಹಗರಣದಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಮೂವರು ಜಿಲ್ಲಾಧಿಕಾರಿಗಳು ಭಾಗಿಯಾಗಿದ್ದಾರೆ ಎಂಬುದನ್ನು ಸಮಿತಿಯು ಕಂಡುಕೊಂಡಿದೆ. ಅವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ.

ವೈದ್ಯಕೀಯ ಉಪಕರಣಗಳನ್ನು ಖರೀದಿಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆ ಪಾವತಿಸಿ ಖರೀದಿ ಮಾಡಲಾಗಿದೆ. ಬಿಬಿಎಂಪಿಯ ನಾಲ್ಕು ವಿಭಾಗಗಳು ಮತ್ತು ಮೂರು ಜಿಲ್ಲೆಗಳಲ್ಲಿ ಶೇ.54ರಷ್ಟು (157.55) ಕೋಟಿ ರೂ. ಅವ್ಯವಹಾರ ನಡೆದಿದೆ. 2020ರಿಂದ 2022ರವರೆಗೆ ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ, ಬೆಂಗಳೂರು ಪಶ್ಚಿಮ ಮತ್ತು ಯಲಹಂಕ ವಲಯಗಳಲ್ಲಿ ಸೇವೆ ಸಲ್ಲಿಸಿದ್ದ ಮತ್ತು ಅವ್ಯವಹಾರದಲ್ಲಿ ಭಾಗಿಯಾಗಿದ್ದ ಜಂಟಿ ಆಯುಕ್ತರು, ಆರೋಗ್ಯ ವಿಭಾಗದ ಅಧಿಕಾರಿಗಳು ಮತ್ತಿತರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೇಳಿದೆ.

ಈ ವರದಿ ಓದಿದ್ದೀರಾ?: ಬಿಜೆಪಿ ಕೋವಿಡ್ ಹಗರಣ ಬಟಾಬಯಲು | 330 ರೂ. ಕಿಟ್‌ಗೆ 2,200 ರೂ. ಪಾವತಿಸಿದ್ದ ಬಿಎಸ್‌ವೈ ಸರ್ಕಾರ; ಏಳು ಪಟ್ಟು ಹೆಚ್ಚು ಹಣಕ್ಕೆ ಕಾರಣಗಳೇ ಇಲ್ಲ!

ಬೆಂಗಳೂರಿನ ನಾಲ್ಕೂ ವಲಯಗಳಲ್ಲಿ 184.62 ಕೋಟಿ ರೂ. ಮೌಲ್ಯದ ವೈದ್ಯಕೀಯ ಉಪಕರಣಗಳು ಮತ್ತು ಔಷಧಿಗಳನ್ನು ಖರೀದಿಸಲಾಗಿದೆ. ಈ ಪೈಕಿ, 113.09 ಕೋಟಿ ರೂ. ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ಅಥವಾ ಸೂಕ್ತ ತನಿಖಾ ತಂಡದಿಂದ ತನಿಖೆ ನಡೆಸಬೇಕು ಎಂದು ಹೇಳಿದೆ.

ಅಂತೆಯೇ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 45.55 ಕೋಟಿ ರೂ. ಮೌಲ್ಯದ ವೈದ್ಯಕೀಯ ಖರೀದಿಯಲ್ಲಿ 27.83 ಕೋಟಿ ರೂ. ಅವ್ಯವಹಾರ ನಡೆದಿದೆ. ಕೊಪ್ಪಳ ಜಿಲ್ಲೆಯಲ್ಲಿ 23.71 ಕೋಟಿ ರೂ. ಖರೀದಿಯಲ್ಲಿ 5.04 ಕೋಟಿ ರೂ. ಹಾಗೂ ಗದಗ ಜಿಲ್ಲೆಯಲ್ಲಿ 35.13 ಕೋಟಿ ರೂ. ಖರೀದಿಯಲ್ಲಿ 23.71 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಸಮಿತಿಯ ವರದಿ ತಿಳಿಸಿದೆ.

ಈ ನಷ್ಟವನ್ನು ವೈದ್ಯಕೀಯ ಉಪಕರಣ ಮತ್ತು ಔಷಧಿಗಳನ್ನು ಪೂರೈಕೆ ಮಾಡಿರುವ ಕಂಪನಿಗಳಿಂದಲೇ ವಸೂಲಿ ಮಾಡಬೇಕು. ಕೆಟಿಟಿಪಿ ಕಾಯ್ದೆಯನ್ನು ಉಲ್ಲಂಘಿಸಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಿಫಾರಸು ಮಾಡಿದೆ.

ಕಳೆದ ವರ್ಷ, ಸಮಿತಿಯು ಮೊದಲ ವರದಿಯನ್ನು ಸರ್ಕರಕ್ಕೆ ಸಲ್ಲಿಸಿತ್ತು. ಆ ವರದಿಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹಗರಣದಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಶಿಫಾರಸ್ಸು ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...