ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ಅವಕಾಶ

Date:

ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ಅಗತ್ಯವಿದೆ. ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ಅವಕಾಶ ನೀಡಲಾಗುತ್ತದೆ. ಅದಕ್ಕಾಗಿ, ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ 1800 4258 330 ಸಹಾಯವಾಣಿ ತೆರೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

“ಸರ್ಜರಿಗಳ ಅವಶ್ಯಕತೆ ಇದೆಯೋ, ಇಲ್ಲವೋ ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲಗಳಿರುತ್ತವೆ. ಕೆಲವೊಮ್ಮೆ ಶಸ್ತ್ರಚಿಕಿತ್ಸೆಗಳ ಅಗತ್ಯತೆ ಇರುವುದಿಲ್ಲ.‌ ಇಂಥಹ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ನುರಿತ ತಜ್ಞ ವೈದ್ಯರಿಂದ ಎರಡನೇ ವೈದ್ಯಕೀಯ ಅಭಿಪ್ರಾಯ ಮುಖ್ಯ. ಕ್ಷಿಷ್ಟಕರ ಶಸ್ತ್ರಚಿಕಿತ್ಸೆಗಳ ಕುರಿತು ಸಾರ್ವಜನಿಕರು ತಜ್ಞ ವೈದ್ಯರಿಂದ ಸೂಕ್ತ ವೈದ್ಯಕೀಯ ಮಾಹಿತಿ ಪಡೆಯಲು ‘ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ’ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ತೆರೆಯಲಾಗಿರುವ 1800 4258 330 ಸಹಾಯವಾಣಿಗೆ ರೋಗಿಗಳು, ಸಾರ್ವಜನಿಕರು ಕರೆ ಮಾಡಿ ಉಚಿತವಾಗಿ ನುರಿತ ವೈದ್ಯರಿಂದ ಶಸ್ತ್ರಚಿಕಿತ್ಸೆಗಳ ಅವಶ್ಯಕತೆ ಇದೆಯೋ ಇಲ್ಲವೋ ಎಂಬುದರ ಕುರಿತು ಅಭಿಪ್ರಾಯ ಪಡೆಯಬಹುದು. ಪ್ರಾಥಮಿಕ ಹಂತದಲ್ಲಿ TKR/THR ಚಿಕಿತ್ಸಾ ವಿಧಾನಗಳಿಗೆ ಎರಡನೇ ವೈದ್ಯಕೀಯ ಅಭಿಪ್ರಾಯ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಇತರ ಕ್ಷಿಷ್ಟಕರ ಶಸ್ತ್ರಚಿಕಿತ್ಸೆಗಳ ಬಗ್ಗೆಯೂ ತಜ್ಞ ವೈದ್ಯರಿಂದ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಅಭಿಪ್ರಾಯ ದೊರಕಿಸಿಕೊಡಲು ಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ರೋಗ ನಿರ್ಣಯ ಮತ್ತು ಚಿಕಿತ್ಸಾ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವುದರಿಂದ ರೋಗಿಗೆ ಹಾಗೂ ಅವರ ಕುಟುಂಬಕ್ಕೆ ಶಸ್ತ್ರಚಿಕಿತ್ಸೆಯ ಕುರಿತು ಆತಂಕ ಹಾಗೂ ಒತ್ತಡವನ್ನು ಕಡಿಮೆ ಮಾಡಬಹುದು. ಮನಸ್ಸಿಗೆ ಶಾಂತಿ ಸಿಗುತ್ತದೆ. ಶಸ್ತ್ರಚಿಕಿತ್ಸೆಗಾಗಿ ತಯಾರಿ, ಚೇತರಿಕೆಯ ಸಮಯ ಮತ್ತು ಶಸ್ತ್ರಚಿಕಿತ್ಸೆಯ ನಂತರದ ಪುನರ್‌ವಸತಿ ಬಗ್ಗೆ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

“ಸಂಧಿವಾತ, ವಯಸ್ಸಿಗೆ ಸಂಬಂಧಿಸಿದ ಕೀಲುಗಳ ಕ್ಷೀಣತೆ ಮತ್ತು ಗಾಯಗಳ ಹರಡುವಿಕೆಯಿಂದಾಗಿ ಮೊಣಕಾಲು ಬದಲಿ ಮತ್ತು ಸೊಂಟ (Hip) ಬದಲಿಗಳಂತಹ ಶಸ್ತ್ರಚಿಕಿತ್ಸೆಗಳು ಹೆಚ್ಚಾಗುತ್ತಿವೆ. ಇಂತಹ ತೊಂದರೆಗಳನ್ನು ಅನುಭವಿಸುತ್ತಿರುವ ರೋಗಿಗಳಿಗೆ ಸಾಮಾನ್ಯವಾಗಿ ಚಿಕಿತ್ಸೆಯ ಕುರಿತು ನಿರ್ಧಾರ ಕೈಗೊಳ್ಳಲು ಸೂಕ್ತವಾದ ಮಾಹಿತಿ ಲಭ್ಯವಿಲ್ಲದೆ ಗೊಂದಲಕ್ಕೀಡಾಗುತ್ತಾರೆ. ಆದ್ದರಿಂದ ರೋಗಿಗಳಿಗೆ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಸಲುವಾಗಿ ಸಾರ್ವಜನಿಕರಿಗೆ ಉಚಿತ ಸಹಾಯವಾಣಿ ತೆರೆಯಲಾಗಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...