ಕೊಪ್ಪಳ | ತಾಪಮಾನ ಹೆಚ್ಚಳ; ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಲು ಸೂಚನೆ

Date:

  • ಬೇಸಿಗೆ ಮುಗಿಯುವವರೆಗೂ ಕಾಫಿ, ಟೀ ಹಾಗು ಮಧ್ಯಪಾನ ನಿಷೇಧಿಸಿ
  • ಗಾಳಿಯಾಡುವಂತಿರುವ ಪಾದರಕ್ಷೆಗಳನ್ನು ಧರಿಸುವುದು ಒಳಿತು

ಈಗಾಗಲೇ ರಾಜ್ಯದಾದ್ಯಂತ ಬಿಸಿಲಿನ ಬೇಗೆ ಹೆಚ್ಚಾಗಿದೆ. ಜನರು ಆರೋಗ್ಯದ ಬಗ್ಗೆ ಮುಂಜಾಗ್ರತೆ ವಹಿಸಬೇಕೆಂದು ಕೊಪ್ಪಳ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಲಕನಂದಾ ಕೆ ಮಳಗಿ ಸಲಹೆ ನೀಡಿದ್ದಾರೆ.

- Advertisement -

ಸಾರ್ವಜನಿಕರು ಮನೆಯಿಂದ ಹೊರಗೆ ಹೋಗುವಾಗ ಜೊತೆಯಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಛತ್ರಿ ತೆಗೆದುಕೊಂಡು ಹೋಗಬೇಕು. ಬಿಸಿಲಿನಲ್ಲಿ ವ್ಯವಸಾಯ ಮಾಡುವವರು, ರಸ್ತೆ ಕಾಮಗಾರಿ ಸೇರಿದಂತೆ ಬಿಸಿಲಿನಲ್ಲಿ ಹೆಚ್ಚು ಕಾರ್ಯನಿರ್ವಹಿಸುವವರು ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಕೆಲಸ ಮುಗಿಸುವುದನ್ನು ರೂಢಿಮಾಡಿಕೊಳ್ಳಬೇಕು. ಅದಾಗದಿದ್ದರೆ, ಸಂಜೆ 4 ಗಂಟೆ ನಂತರ ಉಳಿದ ಕೆಲಸ ಮುಂದುವರಿಸಬೇಕೆಂದು ಕಿವಿಮಾತು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಡಿಲವಾದ ತೆಳು ಬಣ್ಣದ ಹತ್ತಿ ಬಟ್ಟೆಯನ್ನು ಧರಿಸಬೇಕು. 20 ನಿಮಿಷಕ್ಕೊಮ್ಮ ದಾಹವಿಲ್ಲದಿದ್ದರೂ ನೀರು ಕುಡಿಯವುದು ಒಳ್ಳೆಯದು. ಆಗಾಗ್ಗೆ ಓಆರ್‍‌ಎಸ್ ನೀರನ್ನು ಕುಡಿಯಬೇಕು ಮತ್ತು ಹಣ್ಣಿನ ರಸ ಅಥವಾ ಪಾನಕಗಳನ್ನು ಕುಡಿಯಬೇಕು. ಬೆಚ್ಚಗಿನ, ಮಸಾಲೆ ರಹಿತ ಆಹಾರ ಸೇವಿಸಬೇಕು. ಗಾಳಿಯಾಡುವಂತಿರುವ ಪಾದರಕ್ಷೆಗಳನ್ನು ಧರಿಸಬೇಕು ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ಬಿಸಿಲಿನಲ್ಲಿ ಯಾವುದೇ ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ಅವರನ್ನು ನೆರಳಿನ ಸ್ಥಳಕ್ಕೆ ಸ್ಥಳಾಂತರಿಬೇಕು. ಅವರನ್ನು ನೆಲದ ಮೇಲೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯುವಂತೆ ಮಾಡಬೇಕು. ಅದಾದ ನಂತರ ಆಸ್ಪತ್ರೆಗೆ ದಾಖಲಿಸಬೇಕು. ಚರ್ಮ ಕೆಂಪಾದರೆ, ಬೆವರು ಕಡಿಮೆ ಆದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀವ್ರ ಉಸಿರಾಟ ಇದ್ದಲ್ಲಿ ತುರ್ತಾಗಿ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದು ಸಲಹೆ ನೀಡಿದ್ದಾರೆ.

ಯಾವುದು ಆರೋಗ್ಯಕ್ಕೆ ಹಾನಿ

ಅತಿ ಬಿಗಿಯಾದ ಸಿಂಥೆಟಿಕ್ ಬಟ್ಟೆಗಳನ್ನು ಧರಿಸಬಾರದು. ಬೇಸಿಗೆ ಮುಗಿಯುವವರೆಗೂ ಮದ್ಯಪಾನ ಮಾಡಬಾರದು. ಬೆವರನ್ನು ಒರೆಸಲು ಒರಟಾದ ಒಟ್ಟೆಯನ್ನು ಉಪಯೋಗಿಸಬಾರದು. ಕಾಫೀ ಅಥವಾ ಟೀ ಸಕ್ಕರೆ ಅಂಶವುಳ್ಳ ಪಾನಿಯಗಳನ್ನು ಅತಿಯಾಗಿ ಸೇವಿಸಬಾರದೆಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಕೊಪ್ಪಳ | ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ ನಾಗೇಶನಹಳ್ಳಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮದಲ್ಲಿ ನಡೆದ ಬೂದುಗುಂಪಾ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾವಳಿಯಲ್ಲಿ ನಾಗೇಶನಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಸೈಯದ್ ಹಾಗೂ ಶಾಲೆಯ ಶಿಕ್ಷರಾದ ಕೊಟ್ರಮ್ಮ, ಹುಲಗಪ್ಪ M,H, ಮತ್ತು ನಾಗರಾಜ್ ಹಾಗೂ ತರಬೇತುದಾರರಾದ ಹುಸೇನಪ್ಪ ಈಡಿಗ ಅವರ ಮಾರ್ಗದರ್ಶನ ಮತ್ತು ತರಬೇತಿ ಪ್ರಮುಖ ಕಾರಣವಾಗಿದೆ. ಈ ಸಂದರ್ಭದಲ್ಲಿ ಕರವೇ ಮುತ್ತಪ್ಪ ಉಪಸ್ಥಿತರಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.‌

ಕಲ್ಯಾಣ ಕರ್ನಾಟಕ | 4,904 ಅಂಗನವಾಡಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ: ಅಡುಗೆ ಕೋಣೆ, ಶೌಚಾಲಯ ಮರೀಚಿಕೆ

ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವಪ್ರಾಥಮಿಕ ಶಿಕ್ಷಣದಲ್ಲಿ ಪ್ರಮುಖ...

ಕೊಪ್ಪಳ | ಮಾಲಿನ್ಯದ ಕತ್ತಲು ಕಳೆಯುವ ತನಕ ಚಳವಳಿ ನಿಲ್ಲಿಸಬೇಡಿ: ಮಹಿಮಾ ಪಟೇಲ್

ನಾವು ಅನಿವಾರ್ಯ ತಪ್ಪು ಮಾಡುವವರ ವ್ಯವಸ್ಥೆಯೊಳಗೆ ಸಿಕ್ಕಿ ಹಾಕಿಕೊಂಡಿದ್ದೇವೆ. ಅಂತಹ ಆಡಳಿತಗಾರರನ್ನು...