ಹೆಚ್ಚುತ್ತಿರುವ ಹೃದಯಾಘಾತ | ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ

Date:

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

- Advertisement -

ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ರಾಜ್ಯದಲ್ಲಿ ಎಳೆಯ ವಯಸ್ಸಿನವರ, ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ” ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ತಿಳಿಸಿದ್ದಾರೆ.

“ಬದುಕಿ ಬಾಳಬೇಕಾದ ಚಿಕ್ಕಮಕ್ಕಳು, ಯುವಜನರು, ಅಮಾಯಕರ ಜೀವಗಳ ಬೆಲೆ, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಇಂತಹ ವಿಚಾರಗಳನ್ನು ಕೂಡ ತಮ್ಮ ರಾಜಕೀಯ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆಯನ್ನು ನಾನು ಖಂಡಿಸುತ್ತೇನೆ. ಆತುರಾತುರದಲ್ಲಿ ಕೊರೊನಾ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು” ಎಂದು ಆರೋಪಿಸಿದ್ದಾರೆ,

“ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೊವಿಡ್ ಲಸಿಕೆ ಕಾರಣ ಎಂಬುದನ್ನು ಹೇಳಿವೆ. ಈ ವಿಚಾರದಲ್ಲಿ ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ” ಎಂದಿದ್ದಾರೆ.

“ಹಾಸನ ಜಿಲ್ಲೆಯು ಸೇರಿದಂತೆ ರಾಜ್ಯದಲ್ಲಿ ಸಂಭವಿಸುತ್ತಿರುವ ಹಠಾತ್ ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆಮಾಡಿ, ತಡೆಯುವ ನಿಟ್ಟಿನಲ್ಲಿ ನಾವು ಸಂಪೂರ್ಣ ಬದ್ಧರಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆಕೊಟ್ಟು, ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಡಾ. ರವೀಂದ್ರನಾಥ್ ಅವರ ನೇತೃತ್ವದ ತಜ್ಞರ ಸಮಿತಿ ವರದಿ ಆಧರಿಸಿ ಅಗತ್ಯ ಕ್ರಮಗಳನ್ನು ಕೂಡ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

“ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು” ಎಂದು ಸಿಎಂ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...