ಒಂದು ನಿಮಿಷದ ಓದು | ಒಂದೇ ದಿನದಲ್ಲಿ 2,151 ಮಂದಿಗೆ ಕೋವಿಡ್ ದೃಢ

Date:

Advertisements

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ಸೋಂಕು ದೃಢಪಟ್ಟ 2,151 ಪ್ರಕರಣಗಳು ದಾಖಲಾಗಿವೆ. ಇದು ಐದು ತಿಂಗಳಲ್ಲೇ ಒಂದು ದಿನದಲ್ಲಿ ದಾಖಲಾದ ಅಧಿಕ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಿಂದ ತಿಳಿದುಬಂದಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆ 11,903ಕ್ಕೆ ಏರಿಕೆಯಾಗಿದೆ. 2022 ಅಕ್ಟೋಬರ್‌ನಲ್ಲಿ 28ರಂದು ದಾಖಲಾದ 2,208 ಕೋವಿಡ್ ಪ್ರಕರಣಗಳು ಇಲ್ಲಿಯವರೆಗಿನ ಅತ್ಯಧಿಕ ಸಂಖ್ಯೆಯಾಗಿತ್ತು. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ ಹಾಗೂ ಕೇರಳಗಳಲ್ಲಿ ಮೂವರು, ಕರ್ನಾಟಕದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ದೇಶದಾದ್ಯಂತ ಕೋವಿಡ್‌ನಿಂದಾಗಿ ಸಾವಿನ ಸಂಖ್ಯೆ 5,30,848ಕ್ಕೆ ತಲುಪಿದೆ.

ಮರಣ ಪ್ರಮಾಣ ಶೇ.1.19 ಆಗಿದೆ. ಸೋಂಕು ದೃಢಪಡುತ್ತಿರುವ ಪ್ರಮಾಣವು ದಿನಕ್ಕೆ ಶೇ.1.51 ಆಗಿದ್ದು, ವಾರಕ್ಕೆ ಶೇ.1.53ರಷ್ಟು ಇದೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,47,09,676 ಆಗಿದೆ. ಇದರಲ್ಲಿ 4,41,66,925 ಜನರು ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರಲ್ಲಿ ಶೇ.0.03 ರಷ್ಟು ಸಕ್ರಿಯ ಪ್ರಕರಣಗಳಿದ್ದು, ಚೇತರಿಕೆ ಪ್ರಮಾಣ ಶೇ.98.78ರಷ್ಟು ಆಗಿದೆ. ಇಲ್ಲಿಯವರೆಗೂ 220.65 ಕೋವಿಡ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಣೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ?: ಕಡಿಮೆ ನಿದ್ದೆ ಮಾಡುವವರು ಓದಲೇ ಬೇಕಾದ ಸುದ್ದಿ | 10 ಮುಖ್ಯ ಅಂಶ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರೋನಾ ಸಮಯದಲ್ಲಿ ತಬ್ಲಿಘಿ ಸಭೆ: 70 ಜನರ ವಿರುದ್ಧದ FIR ರದ್ದು; ಕೋರ್ಟ್‌ ಆದೇಶ

ದೇಶದಲ್ಲಿ ಕೊರೋನಾ ಆಕ್ರಮಣ ಆರಂಭವಾಗಿದ್ದ ಸಮಯ 2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಘಿ...

ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ

ದಾವಣಗೆರೆಯ ಉದ್ಯಮಿಯೊಬ್ಬರ ಪುತ್ರ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ (Heart Attack) ಕುಸಿದು...

ಮಹಿಳೆಯರನ್ನು ಗರ್ಭಕೋಶ ಕ್ಯಾನ್ಸರ್‌ನಿಂದ ರಕ್ಷಿಸಲು ಎಚ್‌ಪಿವಿ ಲಸಿಕೆ ಅತ್ಯಗತ್ಯ: ಡಾ. ಮಂಗಳ

ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆಯಿಂದ ರಕ್ಷಣೆ ಪಡೆಯಲು...

ಕೋವಿಡ್ ಲಸಿಕೆಗೂ ಹಠಾತ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ: ಆರೋಗ್ಯ ಸಚಿವಾಲಯ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ...

Download Eedina App Android / iOS

X