ದೇಶದಲ್ಲಿ ಒಂದೇ ದಿನ ಹೊಸದಾಗಿ 7,830 ಕೋವಿಡ್ ಪ್ರಕರಣಗಳು ವರದಿಯಾಗಿವೆ. 16 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ ಏಳು ತಿಂಗಳಲ್ಲಿ ಗರಿಷ್ಠ ಕೊರೊನಾ ಸೋಂಕು ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 1ರಂದು ದೇಶದಲ್ಲಿ 7,946 ಪ್ರಕರಣ ದಾಖಲಾಗಿತ್ತು. ಸಕ್ರಿಯ ಪ್ರಕರಣಗಳ ಸಂಖ್ಯೆ 40,215ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 4.47 ಕೋಟಿ (4,47,76,002) ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,31,016 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಈವರೆಗೆ ಒಟ್ಟು 4,42,04,771 ಮಂದಿ ಗುಣಮುಖರಾಗಿದ್ದಾರೆ.ಒಟ್ಟು ಸೋಂಕಿತರ ಪೈಕಿ ಶೇ.0.09 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ.98.72 ಆಗಿದೆ. ದೇಶದಲ್ಲಿ ಈವರೆಗೆ 220.66 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.
ಕರ್ನಾಟಕದಲ್ಲಿ ಏ.10 ಮತ್ತು 11 ರಂದು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್ ತಪಾಸಣೆ ನಡೆಸಲಾಗಿದೆ. ಪ್ರತಿ ಆರೋಗ್ಯ ಸಂಸ್ಥೆಯು ತಮ್ಮಲ್ಲಿರುವ ಕೋವಿಡ್ ವ್ಯವಸ್ಥೆಯ ಬಗ್ಗೆ ಪಟ್ಟಿ ಮಾಡಿ ಆರೋಗ್ಯ ಇಲಾಖೆಗೆ ನೀಡಬೇಕಾಗಿ ಸೂಚನೆ ನೀಡಲಾಗಿದೆ. ಇದರಿಂದಾಗಿ, ಕೊರಿನಾ ಸೋಂಕು ತಗುಲಿದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಇದೆಯೇ ಎಂಬುದರ ಪರಿಶೀಲನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್ ಡಿ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಔಷಧಿಗಳ ಬೆಲೆ ಶೇ.6.73ರಷ್ಟು ಕಡಿಮೆ: ಮನ್ಸುಖ್ ಮಾಂಡವೀಯ