ರಾಜ್ಯದ ಮಹಿಳೆಯರಲ್ಲಿ ಹೆಚ್ಚುತ್ತಿದೆ ಬೊಜ್ಜು: NFHS ವರದಿ

Date:

ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರಲ್ಲಿ ಬೊಜ್ಜಿನ ಪ್ರಮಾಣ ತೀವ್ರವಾಗಿ ಹೆಚ್ಚಾಗಿದೆ. ರಾಜ್ಯದ 41.2% ಮಹಿಳೆಯರಲ್ಲಿ ಬೊಜ್ಜಿನ ಪ್ರಮಾಣ ಹೆಚ್ಚಾಗಿದೆ ಎಂದು 2023-24ರ ‘ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS)-6’ ವರದಿ ಹೇಳಿದೆ. ಈ ಹಿಂದಿನ 2019-21ರ NFHS-5ರ ವರದಿಯಲ್ಲಿ ಈ ಪ್ರಮಾಣವು 30.2%ರಷ್ಟಿತ್ತು. ಎರಡು ವರ್ಷಗಳಲ್ಲಿ, ಬೊಜ್ಜು ಹೊಂದಿರುವ ಮಹಿಳೆಯರ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.

- Advertisement -

ಸಮೀಕ್ಷೆಯ ಪ್ರಕಾರ, 15-49 ವರ್ಷ ವಯಸ್ಸಿನ 41.2%ರಷ್ಟು ಮಹಿಳೆಯರು 25 kg/m² ಅಥವಾ ಅದಕ್ಕಿಂತ ಹೆಚ್ಚಿನ ಬಾಡಿ ಮಾಸ್ ಇಂಡೆಕ್ಸ್ (BMI) ಹೊಂದಿದ್ದಾರೆ. ಈ ಸಂಶೋಧನೆಗಳು ಕಳೆದ ಕೆಲವು ವರ್ಷಗಳಲ್ಲಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಮಹಿಳೆಯರಲ್ಲಿ ಅತಿಯಾದ ತೂಕದ ಸಮಸ್ಯೆ ಗಣನೀಯವಾಗಿ ಹೆಚ್ಚಿರುವುದನ್ನು ಸೂಚಿಸುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಗರ ಮತ್ತು ಗ್ರಾಮೀಣ ಪ್ರದೇಶಗಳ ನಡುವಿನ ವ್ಯತ್ಯಾಸವು ಗಮನಾರ್ಹವಾಗಿದೆ. ರಾಜ್ಯದ ನಗರಗಳಲ್ಲಿ 51.7%ರಷ್ಟು ಮಹಿಳೆಯರು ಅತಿಯಾದ ತೂಕ ಅಥವಾ ಬೊಜ್ಜು ಹೊಂದಿದ್ದಾರೆ. ಅಂದರೆ, ನಗರಗಳಲ್ಲಿನ ಅರ್ಧಕ್ಕಿಂತ ಹೆಚ್ಚು ಮಹಿಳೆಯರು ಈ ವರ್ಗಕ್ಕೆ ಸೇರುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಮಾಣವು 33% ರಷ್ಟಿದೆ.

ಇದೇ ಸಮೀಕ್ಷೆಯು, 14%ರಷ್ಟು ಮಹಿಳೆಯರು 18.5 kg/m² ಗಿಂತ ಕಡಿಮೆ ಬಿಎಂಐ ಹೊಂದಿದ್ದಾರೆ ಎಂಬುದನ್ನೂ ತೋರಿಸಿದೆ. ಈ ಪ್ರಮಾಣವು NFHS-5 ರಲ್ಲಿದ್ದ 14.3%ಗೆ ಹೋಲಿಸಿದರೆ ಅಲ್ಪ ಸುಧಾರಣೆಯಾಗಿದೆ. ಗ್ರಾಮೀಣ ಮಹಿಳೆಯರು ಇಂದಿಗೂ ಕಡಿಮೆ ತೂಕದ ಸಮಸ್ಯೆಯಿಂದ ಹೆಚ್ಚು ತೊಂದರೆಗೆ ಒಳಗಾಗುತ್ತಿದ್ದಾರೆ. ನಗರ ಪ್ರದೇಶದ 8.5%ಗೆ ಹೋಲಿಸಿದರೆ ಗ್ರಾಮೀಣ ಭಾಗದ 18.4%ರಷ್ಟು ಮಹಿಳೆಯರು ಕಡಿಮೆ ತೂಕ ಹೊಂದಿದ್ದಾರೆ.

ಮಹಿಳೆಯರಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಮಟ್ಟವು ಮಧುಮೇಹ, ರಕ್ತದೊತ್ತಡ, ಹೃದಯ ಕಾಯಿಲೆ ಹಾಗೂ ಸಂತಾನೋತ್ಪತ್ತಿ ಆರೋಗ್ಯ ಸಮಸ್ಯೆಗಳು ಸೇರಿದಂತೆ ಹಲವು ಸಾಂಕ್ರಾಮಿಕವಲ್ಲದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಅದರಲ್ಲೂ ವಿಶೇಷವಾಗಿ ಬೊಜ್ಜಿನ ಪ್ರಮಾಣ ಹೆಚ್ಚಿರುವ ನಗರ ಪ್ರದೇಶಗಳಲ್ಲಿ ಸಮತೋಲಿತ ಆಹಾರ, ದೈಹಿಕ ಚಟುವಟಿಕೆ ಹಾಗೂ ಮುನ್ನೆಚ್ಚರಿಕೆ ಆರೋಗ್ಯ ರಕ್ಷಣೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವನ್ನು ಅವರು ಒತ್ತಿಹೇಳಿದ್ದಾರೆ.

‘ಪ್ರಿವೆಂಟಿವ್ ಮೆಡಿಸಿನ್ ಕನ್ಸಲ್ಟೆಂಟ್ ಫಿಸಿಶಿಯನ್’ ಮತ್ತು ‘ವರ್ಲ್ಡ್ ಎಕನಾಮಿಕ್ ಫೋರಂ ಯಂಗ್ ಗ್ಲೋಬಲ್’ನ ಮುಖಂಡ ಡಾ. ಎಡ್ಮಂಡ್ ಫೆರ್ನಾಂಡಿಸ್ ಹೇಳುವಂತೆ; “ನಗರೀಕರಣದೊಂದಿಗೆ, ಜನರು ಕೇವಲ ಒಂದು ಬಟನ್ ಒತ್ತುವ ಮೂಲಕ ದಿನಸಿ, ಆಹಾರ ಹಾಗೂ ಬಟ್ಟೆಗಳನ್ನು ಮನೆ ಬಾಗಿಲಿಗೆ ಪಡೆಯುವ ತಂತ್ರಜ್ಞಾನ ಆಧಾರಿತ ಸೌಲಭ್ಯಗಳಿಗೆ ಒಗ್ಗಿಕೊಂಡಿದ್ದಾರೆ. ಹೀಗಾಗಿ, ಈ ಉದಯೋನ್ಮುಖ ಜೀವನಶೈಲಿಯಲ್ಲಿ ಶಿಸ್ತು ಎಂಬುದು ಮೊದಲ ಬಲಿಪಶುವಾಗಿದೆ.”

ಮಕ್ಕಳನ್ನು ಹೆರುವ ವಯಸ್ಸಿನ ಮಹಿಳೆಯರಲ್ಲಿ ಹೆಚ್ಚುತ್ತಿರುವ ಬೊಜ್ಜು ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ ಎಂದು ಡಾ. ಫೆರ್ನಾಂಡಿಸ್ ಹೇಳಿದ್ದಾರೆ. “ಸಾಮಾನ್ಯವಾಗಿ ನಾವು ಮಧುಮೇಹ, ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಮಾತ್ರ ನೋಡುತ್ತೇವೆ. ಆದರೆ ಚರ್ಮದ ಆರೋಗ್ಯ, ದೇಹದ ತೂಕ, ಲೈಂಗಿಕ ಆರೋಗ್ಯ ಹಾಗೂ ಶಕ್ತಿಯ ಮಟ್ಟಗಳೂ ಸಹ ಇದರಿಂದ ತೀವ್ರವಾಗಿ ಕುಸಿಯುತ್ತವೆ,” ಎಂದು ಅವರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ದೇವೇಗೌಡರ ಕೋಟೆಯಲ್ಲಿ ‘ಡಿಕೆಶಿ’ ಗುದ್ದಾಟ; ಒಕ್ಕಲಿಗ ನಾಯಕತ್ವ ಪಟ್ಟ ಸುಲಭವೇ?

ಸಾರ್ವಜನಿಕ ಆರೋಗ್ಯ ವೈದ್ಯರಾದ ಡಾ. ಸಿಲ್ವಿಯಾ ಕಾರ್ಪಗಮ್ ಹೇಳುವಂತೆ; “ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಯು ಎಲ್ಲ ಸಾಮಾಜಿಕ-ಆರ್ಥಿಕ ವರ್ಗಗಳಲ್ಲಿನ ಕಳಪೆ ಗುಣಮಟ್ಟದ ಆಹಾರ ಪದ್ಧತಿಗೆ ಸಂಬಂಧಿಸಿದೆ. ಕರ್ನಾಟಕದಲ್ಲಿ ಬೊಜ್ಜು ಆತಂಕಕಾರಿಯಾಗಿ ಹೆಚ್ಚುತ್ತಿದೆ. ಇದರಿಂದಾಗಿ ಮಧುಮೇಹ, ರಕ್ತದೊತ್ತಡ, ಹೃದಯ ಕಾಯಿಲೆಯಂತಹ ಬೊಜ್ಜು ಸಂಬಂಧಿತ ಸಮಸ್ಯೆಗಳು ಹೆಚ್ಚಾಗುವುದನ್ನು ನಿರೀಕ್ಷಿಸಬಹುದು. ಇದು ಈಗಾಗಲೇ ಹೆಣಗಾಡುತ್ತಿರುವ ಆರೋಗ್ಯ ವ್ಯವಸ್ಥೆಯ ಮೇಲೆ ಮತ್ತಷ್ಟು ಹೊರೆಯಾಗಲಿದೆ. ಔಷಧ-ಕೇಂದ್ರಿತ ಪರಿಹಾರಗಳನ್ನು ನೀಡುವ ದೊಡ್ಡ ಫಾರ್ಮಾ (ಔಷಧ) ಕಂಪನಿಗಳು ಇದರ ದೊಡ್ಡ ಫಲಾನುಭವಿಗಳಾಗಲಿವೆ,” ಎಂದು ಎಚ್ಚರಿಸಿದ್ದಾರೆ.

ಭಾರತದಲ್ಲಿ ಬೊಜ್ಜು ಕಳಪೆ ಆಹಾರ ಪದ್ಧತಿಯಿಂದಾಗಿ ಶ್ರೀಮಂತರು ಮತ್ತು ಬಡವರಿಬ್ಬರ ಮೇಲೂ ಪರಿಣಾಮ ಬೀರುತ್ತಿದೆ ಎಂದು ಡಾ. ಕಾರ್ಪಗಮ್ ಗಮನಿಸಿದ್ದಾರೆ. ಆರೋಗ್ಯಕರ ಕೊಬ್ಬುಗಳು ತೂಕ ಹೆಚ್ಚಾಗಲು ಕಾರಣವಾಗುತ್ತವೆ ಎಂಬುದು ತಪ್ಪು ಕಲ್ಪನೆಯಾಗಿದೆ. ವಾಸ್ತವವಾಗಿ, ನೈಸರ್ಗಿಕ ಕೊಬ್ಬುಗಳು ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತವೆ ಮತ್ತು ದೀರ್ಘಕಾಲ ಹಸಿವಾಗದಂತೆ ಸಹಾಯ ಮಾಡುತ್ತವೆ. ಆದರೆ, ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ವೇಗವಾಗಿ ಏರಿಳಿತಗೊಳಿಸಿ, ಪದೇ ಪದೇ ತಿನ್ನುವಂತೆ ಪ್ರೇರೇಪಿಸುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...