ಜ.5ರಂದು ರಾಜ್ಯದಲ್ಲಿ 328 ಮಂದಿಗೆ ಕೊರೋನಾ ದೃಢ

Date:

Advertisements

ರಾಜ್ಯದಲ್ಲಿ ಜ.5 ರಂದು 7,205 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 328 ಮಂದಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,159ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೇ 163 ಜನರಲ್ಲಿ ಸೋಂಕು ಇರುವುದು ಬೆಳಕಿಗೆ ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು 1,159 ಸಕ್ರಿಯ ಕೇಸ್‍ಗಳಿದ್ದು, 1,087 ಮಂದಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. 72 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 9 ಮಂದಿ ಐಸಿಯುನಲ್ಲಿದ್ದರೆ, ಮೂವರು ಐಸಿಯು ಜೊತೆ ವೆಂಟಿಲೇಟರ್‌ನಲ್ಲಿದ್ದಾರೆ. ಇನ್ನು 51 ಮಂದಿ ಜನರಲ್ ಬೆಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 409 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ: ಬೈಕ್ ಸವಾರ ಸಾವು

Advertisements

ರಾಜ್ಯದಲ್ಲಿ ಹೊಸದಾಗಿ 328 ಪ್ರಕರಣಗಳು ದೃಢವಾಗಿದ್ದು, ಈ ಪೈಕಿ ಬಾಗಲಕೋಟೆ 4, ಬಳ್ಳಾರಿ 9, ಬೆಂಗಳೂರು ಗ್ರಾಮಾಂತರ 18, ಬೆಂಗಳೂರು ನಗರ 163, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 7, ಚಿತ್ರದುರ್ಗ 5, ದಕ್ಷಿಣ ಕನ್ನಡ 8, ದಾವಣಗೆರೆ 3, ಧಾರವಾಡ 2, ಗದಗ 1, ಹಾಸನ 12, ಕಲಬುರಗಿ 1, ಕೊಡಗು 4, ಕೋಲಾರ 1, ಮಂಡ್ಯ 7, ಮೈಸೂರು 26, ರಾಯಚೂರು 4, ರಾಮನಗರ 3, ಶಿವಮೊಗ್ಗ 6, ತುಮಕೂರು 15, ಉಡುಪಿ 1, ಉತ್ತರ ಕನ್ನಡ 6, ವಿಜಯನಗರ ಜಿಲ್ಲೆಯಲ್ಲಿ 7 ಪ್ರಕರಣ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X