ರೋಗಿಗೆ ಜನೌಷಧವನ್ನೇ ಸೂಚಿಸಿ: ಆರೋಗ್ಯ ಸಚಿವಾಲಯ

Date:

Advertisements

ಕೇಂದ್ರ ಸರ್ಕಾರ ನಡೆಸುವ ಎಲ್ಲ ಆಸ್ಪತ್ರೆ ಮತ್ತು ಕೇಂದ್ರದ ಆರೋಗ್ಯ ಯೋಜನೆಗೆ ಒಳಪಡುವ ವೈದ್ಯರು ಜನೌಷಧ ವಿಭಾಗಗಳಲ್ಲಿ ಲಭ್ಯವಿರುವ ಔಷಧಗಳನ್ನೇ ರೋಗಿಗಳಿಗೆ ಬರೆದುಕೊಡಬೇಕು. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಜೆನರಿಕ್ ಔಷಧಗಳನ್ನು ಮಾತ್ರ ಬರೆಯುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಹಲವಾರು ಬಾರಿ ಆರೋಗ್ಯ ಯೋಜನೆ (ಸಿಜಿಎಚ್‌ಎಸ್) ಅಡಿಯ ‘ಕ್ಷೇಮ ಕೇಂದ್ರ’ ಮತ್ತು ವೈದ್ಯರಿಗೆ ಸೂಚನೆ ನೀಡಿದ್ದರೂ ಸಹ ಕೆಲವು ಸಂದರ್ಭಗಳಲ್ಲಿ ಬ್ರಾಂಡೆಡ್ ಔಷಧ ಬರೆಯುವುದನ್ನು ಮುಂದುವರಿಸಿದ್ದಾರೆ. ಈ ನಡೆ ಒಳಿತಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಬ್ರಾಂಡೆಡ್ ಔಷಧಗಳನ್ನೇ ಬರೆದುಕೊಡುತ್ತಿರುವುದು, ಎಲ್ಲ ಸಂಸ್ಥೆಗಳ ಮುಖ್ಯಸ್ಥರೂ ಗಮನಿಸಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಜನೌಷಧವನ್ನೇ ಬರೆದುಕೊಡಲು ಸೂಚಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಖಚಿತ ಪಡಿಸಿಕೊಂಡ ಹಿನ್ನೆಲೆಯಲ್ಲಿ ಎಚ್ಚರಿಕೆ ರವಾನಿಸಲಾಗಿದೆ, ಎಂದು ಕೇಂದ್ರಗಳಲ್ಲಿ ರೋಗಿಗಳಿಗೆ ಜೆನರಿಕ್ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್ ಗೋಯೆಲ್ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ?: ಸಿಬಿಎಸ್‌ಇ ಫಲಿತಾಂಶ: ಎರಡನೇ ಸ್ಥಾನ ಪಡೆದ ಸಿಲಿಕಾನ್ ಸಿಟಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರೋನಾ ಸಮಯದಲ್ಲಿ ತಬ್ಲಿಘಿ ಸಭೆ: 70 ಜನರ ವಿರುದ್ಧದ FIR ರದ್ದು; ಕೋರ್ಟ್‌ ಆದೇಶ

ದೇಶದಲ್ಲಿ ಕೊರೋನಾ ಆಕ್ರಮಣ ಆರಂಭವಾಗಿದ್ದ ಸಮಯ 2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಘಿ...

ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ

ದಾವಣಗೆರೆಯ ಉದ್ಯಮಿಯೊಬ್ಬರ ಪುತ್ರ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ (Heart Attack) ಕುಸಿದು...

ಮಹಿಳೆಯರನ್ನು ಗರ್ಭಕೋಶ ಕ್ಯಾನ್ಸರ್‌ನಿಂದ ರಕ್ಷಿಸಲು ಎಚ್‌ಪಿವಿ ಲಸಿಕೆ ಅತ್ಯಗತ್ಯ: ಡಾ. ಮಂಗಳ

ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆಯಿಂದ ರಕ್ಷಣೆ ಪಡೆಯಲು...

ಕೋವಿಡ್ ಲಸಿಕೆಗೂ ಹಠಾತ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ: ಆರೋಗ್ಯ ಸಚಿವಾಲಯ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ...

Download Eedina App Android / iOS

X